ಪವನ್ ಕಲ್ಯಾಣ್ 
ಸಿನಿಮಾ ಸುದ್ದಿ

ನಟ ಪವನ್ ಕಲ್ಯಾಣ್ ಗೆ ಕೊರೋನಾ ಪಾಸಿಟಿವ್, ಆಸ್ಪತ್ರೆಗೆ ದಾಖಲು

ಜನಸೇನಾ ಪಕ್ಷದ ಸ್ಥಾಪಕ ಅಧ್ಯಕ್ಷ ಹಾಗೂ ಖ್ಯಾತ ಚಲನಚಿತ್ರ ನಟ ಪವನ್ ಕಲ್ಯಾಣ್ ಅವರಿಗೆ ಶುಕ್ರವಾರ ಕೊರೋನಾ ಪಾಸಿಟಿವ್ ದೃಢಪಟ್ಟಿದೆ.

ಹೈದರಾಬಾದ್: ಜನಸೇನಾ ಪಕ್ಷದ ಸ್ಥಾಪಕ ಅಧ್ಯಕ್ಷ ಹಾಗೂ ಖ್ಯಾತ ಚಲನಚಿತ್ರ ನಟ ಪವನ್ ಕಲ್ಯಾಣ್ ಅವರಿಗೆ ಶುಕ್ರವಾರ ಕೊರೋನಾ ಪಾಸಿಟಿವ್ ದೃಢಪಟ್ಟಿದೆ.

ಒಂದೆರಡು ದಿನಗಳಿಂದ ಸಂಪರ್ಕತಡೆಯಲ್ಲಿದ್ದ ಪವನ್ ಕಲ್ಯಾಣ್ ಕೋವಿಡ್ ಪರೀಕ್ಷೆಗೆ ಒಳಗಾಗಿದ್ದರು. ಪರೀಕ್ಷಾ ವರದಿಯಲ್ಲಿ ಅವರಿಗೆ ಸಾಂಕ್ರಾಮಿಕ ವೈರಸ್‌ ತಗುಲಿರುವುದು ದೃಡಪಟ್ಟಿದೆ ಎಂದು ಜನಸೇನಾ ಪಕ್ಷ ಪ್ರಕಟಣೆಯಲ್ಲಿ ತಿಳಿಸಿದೆ.

ಕಳೆದ ಏಪ್ರಿಲ್ 12ರಂದು ಪವನ್ ಕಲ್ಯಾಣ್ ಅವರ ಆಪ್ತ ಸಿಬ್ಬಂದಿಗೆ ಕೊರೋನಾ ಪಾಸಿಟಿವ್ ಬಂದಿತ್ತು. ಅಂದಿನಿಂದ ಕ್ವಾರಂಟೈನ್ ಆಗಿದ್ದ ಪವನ್ ಕಲ್ಯಾಣ್ ಅವರಿಗೆ ಎದೆ ನೋವು ಕಾಣಿಸಿಕೊಂಡಿತ್ತು. ಹೀಗಾಗಿ ಅವರನ್ನು ಇಂದು ಆಸ್ಪತ್ರೆಗೆ ಕರೆತಂದು ತಪಾಸಣೆ ಮಾಡಿದಾಗ ಕೊರೋನಾ ಪಾಸಿಟಿವ್ ದೃಢಪಟ್ಟಿದೆ.

ಪವನ್ ಕಲ್ಯಾಣ್ ಅವರಿಗೆ ಹೈದರಾಬಾದ್ ನ ಖಾಸಗಿ ಆಸ್ಪತ್ರೆಯಲ್ಲಿ ತಜ್ಞ ವೈದ್ಯರ ತಂಡ ಚಿಕಿತ್ಸೆ ನೀಡುತ್ತಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಪಾಕಿಸ್ತಾನದ ಉನ್ನತ ರಾಜತಾಂತ್ರಿಕರಿಗೆ ಭಾರತದ ಸಮನ್ಸ್; ಗಡಿಯಾಚೆಗಿನ ಒಳನುಸುಳುವಿಕೆಯ ವಿರುದ್ಧ ಪ್ರತಿಭಟನೆ

ಶಿಕ್ಷಕರ ಕೊರತೆ ಎಂದು ದೂರಿದ್ದೇ ತಪ್ಪಾಯ್ತು ಪಂಜಾಬ್ ಆಮ್ ಆದ್ಮಿ ಪಕ್ಷದ ಶಾಸಕ ಅಮಾನತು!

ಸ್ಟೈಲಿಶ್ ಕಪ್ಪು ಉಡುಪಿನಲ್ಲಿ ಮಿಂಚಿದ ಪಾರ್ವತಿ ತಿರುವೋತ್; ದಂಗಾದ ಅಭಿಮಾನಿಗಳು, Video!

Asian Games 2026: ಮಲೇಷ್ಯಾ ಸೋಲಿಸಿ ಚಿನ್ನ ಗೆದ್ದ ಭಾರತದ ಪುರುಷರ ಹಾಕಿ ತಂಡ; ಒಲಿಂಪಿಕ್ಸ್‌ಗೆ ಅರ್ಹತೆ

ಬಿಜೆಪಿ ಜಿಲ್ಲಾಧ್ಯಕ್ಷರಿಂದ ನನ್ನ ಮೇಲೆ ಪದೇ ಪದೇ ಅತ್ಯಾಚಾರ: ಉತ್ತರ ಪ್ರದೇಶ ಪಕ್ಷದ ನಾಯಕಿಯ ಗಂಭೀರ ಆರೋಪ