ಚೆನ್ನೈ: ತಮಿಳು ಚಿತ್ರರಂಗದ ಹಾಸ್ಯನಟ ವಿವೇಕ್ ಶನಿವಾರ ನಸುಕಿನ ಜಾವ ನಿಧನರಾಗಿದ್ದಾರೆ. ಅವರಿಗೆ 59 ವರ್ಷ ವಯಸ್ಸಾಗಿತ್ತು. ಹೃದಯಾಘಾತದಿಂದ ಆಸ್ಪತ್ರೆಗೆ ದಾಖಲಾಗಿದ್ದ ಅವರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
ಹೃದಯಾಘಾತದಿಂದ ಬಳಲುತ್ತಿದ್ದ ನಟ ವಿವೇಖ್ ಅವರ ಎಡ ಅಪಧಮನಿಯಲ್ಲಿ ಶೇಕಡ 100% ರಷ್ಟು ರಕ್ತ ಹೆಪ್ಪುಗಟ್ಟಿದ್ದು, ಇದಕ್ಕೂ ಕೋವಿಡ್ ವ್ಯಾಕ್ಸಿನೇಷನ್ಗೆ ಸಂಬಂಧ ಇಲ್ಲವೆಂದು ಅವರು ದಾಖಲಾಗಿದ್ದ ಆಸ್ಪತ್ರೆ ವಕ್ತಾರರು ತಿಳಿಸಿದ್ದಾರೆ.
35 ವರ್ಷಗಳ ಕಾಲ ಬೆಳ್ಳಿ ಪರದೆಯಲ್ಲಿ ಸಿನಿಮಾ ಪ್ರೇಕ್ಷಕರನ್ನು ರಂಜಿಸಿದ ಕಲಾವಿದ ಇನ್ನು ನೆನಪು ಮಾತ್ರ.