ಸಿನಿಮಾ ಸುದ್ದಿ

ಕುಮಾರಸ್ವಾಮಿ ಬಳಿಕ ಪುತ್ರ ನಿಖಿಲ್ ಕುಮಾರಸ್ವಾಮಿಗೂ ಕೊರೋನಾ ಸೋಂಕು

Raghavendra Adiga

ಬೆಂಗಳೂರು: ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಅವರಿಗೆ ಕೊರೋನಾ ಕಾಣಿಸಿಕೊಂಡ ಬಳಿಕ ಇದೀಗ ಅವರ ಪುತ್ರ, ನಟ ನಿಖಿಲ್ ಕುಮಾರಸ್ವಾಮಿಯವರಲ್ಲಿಯೂ ಸಹ ಕೋವಿಡ್ ಸೋಂಕು ಪತ್ತೆಯಾಗಿದೆ.

ತಮಗೆ ಕೊರೋನಾ ಸೋಂಕು ತಗುಲಿರುವ ಬಗ್ಗೆ ಟ್ವೀಟ್ ಮಾಡಿರುವ ನಿಖಿಲ್ "ನಾನು ಇಂದು ಕೋವಿಡ್ ಪರೀಕ್ಷೆಗೆ ಒಳಪಟ್ಟಿದ್ದು ಪ್ರಾಥಮಿಕ ವರದಿ ಪಾಸಿಟಿವ್ ಬಂದಿದೆ. ಯಾರು ಆತಂಕ ಪಡುವ ಅವಶ್ಯಕತೆ ಇಲ್ಲ, ವೈದ್ಯರ ಸಲಹೆಯ ಮೇರೆಗೆ ಚಿಕಿತ್ಸೆ ಪಡೆಯುತ್ತಿದ್ದೇನೆ. ಕಳೆದ ಕೆಲ ದಿನಗಳಲ್ಲಿ ನನ್ನ ಸಂಪರ್ಕದಲ್ಲಿದ್ದವರು ಕೋವಿಡ್ ಪರೀಕ್ಷೆಗೆ ಒಳಗಾಗಿ." ಎಂದು ಹೇಳಿದ್ದಾರೆ.

ವಿಶೇಷವೆಂದರೆ ನಿಖಿಲ್ ಹಾಗೂ ರೇವತಿ ದಂಪತಿಗಳಿಗೆ ಇಂದು ಮದುವೆ ವಾರ್ಷಿಕೋತ್ಸವವಿತ್ತು. ಇಬ್ಬರೂ ಇದರ ಖುಷಿಯಲ್ಲಿರುವಾಗಲೇ ಕೊರೋನಾ ಸೋಂಕು ಕಾಣಿಸಿಕೊಂಡಿದೆ.

SCROLL FOR NEXT