ರಾಮು-ಮಾಲಾಶ್ರೀ 
ಸಿನಿಮಾ ಸುದ್ದಿ

ಕನ್ನಡದ 'ಕೋಟಿ' ನಿರ್ಮಾಪಕ ರಾಮು ಕೊರೋನಾಗೆ ಬಲಿ!

ಗೋಲಿಬಾರ್, ಎಕೆ 47, ಸಿಂಹದ ಮರಿಯಂತ ಬ್ಲಾಕ್ ಬಸ್ಟರ್ ಚಿತ್ರಗಳನ್ನು ನಿರ್ಮಿಸಿ ಕನ್ನಡದ ಕೋಟಿ ನಿರ್ಮಾಪಕ ಎಂದೇ ಖ್ಯಾತರಾಗಿದ್ದ ರಾಮು ಕೊರೋನಾಗೆ ಬಲಿಯಾಗಿದ್ದಾರೆ.

ಬೆಂಗಳೂರು: ಗೋಲಿಬಾರ್, ಎಕೆ 47, ಸಿಂಹದ ಮರಿಯಂತ ಬ್ಲಾಕ್ ಬಸ್ಟರ್ ಚಿತ್ರಗಳನ್ನು ನಿರ್ಮಿಸಿ ಕನ್ನಡದ ಕೋಟಿ ನಿರ್ಮಾಪಕ ಎಂದೇ ಖ್ಯಾತರಾಗಿದ್ದ ರಾಮು ಕೊರೋನಾಗೆ ಬಲಿಯಾಗಿದ್ದಾರೆ. 

ನಟಿ ಮಾಲಾಶ್ರೀ ಅವರ ಪತಿ ರಾಮು ಅವರ ಆರೋಗ್ಯದಲ್ಲಿ ಏರು ಪೇರು ಉಂಟಾದ ಹಿನ್ನೆಲೆಯಲ್ಲಿ ಮೂರು ದಿನಗಳ ಹಿಂದೆ ನಗರದ ಎಂಎಸ್ ರಾಮಯ್ಯ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಇಂದು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

52 ವರ್ಷದ ರಾಮು ಅವರಿಗೆ ಒಂದು ವಾರದ ಹಿಂದೆ ಕೊರೋನಾ ಪಾಸಿಟಿವ್ ಬಂದಿತ್ತು. ರಾಮು ಅವರು ಪತ್ನಿ, ಮಗ ಮತ್ತು ಮಗಳನ್ನು ಅಗಲಿದ್ದಾರೆ. 

ಕನ್ನಡ ಚಿತ್ರರಂಗದಲ್ಲಿ 39 ಚಿತ್ರಗಳನ್ನು ನಿರ್ಮಿಸಿದ್ದಾರೆ. ಗೋಲಿಬಾರ್ ಚಿತ್ರದ ನಿರ್ಮಾಣದ ಮೂಲಕ ಕನ್ನಡ ಚಿತ್ರರಂಗಕ್ಕೆ ಎಂಟ್ರಿಕೊಟ್ಟಿದ್ದರು. ಇನ್ನು ಮೊದಲಿಗೆ ಕನ್ನಡದಲ್ಲಿ ಕೋಟಿ ಬಜೆಟ್ ನಲ್ಲಿ ಚಿತ್ರ ನಿರ್ಮಿಸಿದ್ದರಿಂದ ಅವರಿಗೆ ಕೋಟಿ ರಾಮು ಎಂದು ಹೆಸರು ಬಂದಿತ್ತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

ಹಗರಣ ರಹಿತ ಹುದ್ದೆ ಭರ್ತಿಗೆ ಕ್ರಮ: ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ, ಸದ್ಯದಲ್ಲೇ ಸಂದೇಶ ನೀಡುತ್ತೇವೆ; ಡಿ ಕೆ ಶಿವಕುಮಾರ್

ದಲಿತಾಸ್ತ್ರದ ಮೂಲಕ ಕಟ್ಟಿಹಾಕಲು ಸಿದ್ದು ಬಣ ಕಸರತ್ತು: ತೆರಮರೆಯಲ್ಲಿ ಡಿಕೆಶಿ ಬೆಂಬಲಿಗರ ಮಸಲತ್ತು; ಅಂತರ್ಯುದ್ಧದಲ್ಲಿ ಯಾರಿಗಿದೆ ಗೆಲ್ಲುವ ತಾಕತ್ತು?

Gold Rate Today: ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ವಿವರ...

ಆರೋಗ್ಯ ಇಲಾಖೆಯಿಂದ ಉರ್ದು ಭಾಷೆ ಆಹ್ವಾನ ಪತ್ರಿಕೆ: ಜನರನ್ನು ದಾರಿ ತಪ್ಪಿಸಲೇಬೇಕು ಎಂಬ ಹಠಕ್ಕೆ ಬಿದ್ದಿದ್ದೀರಾ?

SCROLL FOR NEXT