ರಾಮು ಅಂತ್ಯಕ್ರಿಯೆ 
ಸಿನಿಮಾ ಸುದ್ದಿ

ಕನ್ನಡದ 'ಕೋಟಿ' ನಿರ್ಮಾಪಕ ರಾಮು ಪಂಚಭೂತಗಳಲ್ಲಿ ಲೀನ!

ಕರ್ನಾಟಕದ ಕೋಟಿ ನಿರ್ಮಾಪಕ ಎಂದೇ ಪ್ರಖ್ಯಾತರಾಗಿದ್ದ ರಾಮು ಅವರು ಕೊರೋನಾಗೆ ಬಲಿಯಾಗಿದ್ದು ಇಂದು ಅವರ ಹುಟ್ಟೂರಿನಲ್ಲಿ ಅಂತ್ಯ ಸಂಸ್ಕಾರ ನಡೆಯಿತು.

ತುಮಕೂರು: ಕರ್ನಾಟಕದ ಕೋಟಿ ನಿರ್ಮಾಪಕ ಎಂದೇ ಪ್ರಖ್ಯಾತರಾಗಿದ್ದ ರಾಮು ಅವರು ಕೊರೋನಾಗೆ ಬಲಿಯಾಗಿದ್ದು ಇಂದು ಅವರ ಹುಟ್ಟೂರಿನಲ್ಲಿ ಅಂತ್ಯ ಸಂಸ್ಕಾರ ನಡೆಯಿತು. 

ಮೂರು ದಿನಗಳ ಹಿಂದೆ ಎಂಎಸ್ ರಾಮಯ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ರಾಮು ಅವರು ನಿನ್ನೆ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದರು. 

ಇಂದು ಕೊರೋನಾ ನಿಯಮಾವಳಿ ಅನುಸಾರ ತುಮಕೂರಿನ ಸ್ವಗ್ರಾಮ ಕೊಡಿಗೆಹಳ್ಳಿಯಲ್ಲಿ ಅಂತ್ಯ ಸಂಸ್ಕಾರ ನೆರವೇರಿತು. ಪುತ್ರ ಆರ್ಯನ್ ಅಂತ್ಯ ಸಂಸ್ಕಾರದ ವಿಧಿಗಳನ್ನು ನೆರವೇರಿಸಿ ಚಿತೆಗೆ ಅಗ್ನಿ ಸ್ಪರ್ಶ ಮಾಡಿದರು.

52 ವರ್ಷದ ರಾಮು ಅವರಿಗೆ ಒಂದು ವಾರದ ಹಿಂದೆ ಕೊರೋನಾ ಪಾಸಿಟಿವ್ ಬಂದಿತ್ತು. ರಾಮು ಅವರು ಪತ್ನಿ ಮಾಲಾಶ್ರೀ, ಮಗ ಮತ್ತು ಮಗಳನ್ನು ಅಗಲಿದ್ದಾರೆ.

ಕನ್ನಡ ಚಿತ್ರರಂಗದಲ್ಲಿ 39 ಚಿತ್ರಗಳನ್ನು ನಿರ್ಮಿಸಿದ್ದಾರೆ. ಗೋಲಿಬಾರ್ ಚಿತ್ರದ ನಿರ್ಮಾಣದ ಮೂಲಕ ಕನ್ನಡ ಚಿತ್ರರಂಗಕ್ಕೆ ಎಂಟ್ರಿಕೊಟ್ಟಿದ್ದರು. ಇನ್ನು ಮೊದಲಿಗೆ ಕನ್ನಡದಲ್ಲಿ ಕೋಟಿ ಬಜೆಟ್ ನಲ್ಲಿ ಚಿತ್ರ ನಿರ್ಮಿಸಿದ್ದರಿಂದ ಅವರಿಗೆ ಕೋಟಿ ರಾಮು ಎಂದು ಹೆಸರು ಬಂದಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನೇಪಾಳದಲ್ಲಿ ಭೀಕರ ಪ್ರವಾಹ; ಮೃತರ ಸಂಖ್ಯೆ 903ಕ್ಕೆ ಏರಿಕೆ, ವಿದೇಶಿಯರು ಸೇರಿ 4,000ಕ್ಕೂ ಹೆಚ್ಚು ಮಂದಿ ಇನ್ನೂ ನಾಪತ್ತೆ!

ನೆರೆ ಸಂತ್ರಸ್ತರಿಗೆ ನೆರವು ಹೊತ್ತು ಹೋದವರಿಗೆ ಶಾಕ್: 'ಇಲ್ಲೇ ಖರೀದಿಸಿ' ಎಂದ ನೇಪಾಳ ಅಧಿಕಾರಿಗಳು! ಆಗಿದ್ದೇನು?

Hit And Run: ಪಾದಚಾರಿಗೂ ಬದುಕಿ ರಸ್ತೆ ದಾಟುವ ಹಕ್ಕಿದೆ: ದೆಹಲಿ ಕೋರ್ಟ್

ರಾಹುಲ್ ಗಾಂಧಿಯನ್ನು ಪ್ರಧಾನಿ ಅಭ್ಯರ್ಥಿಯಾಗಿ ಒಪ್ಪದಿದ್ದರೆ TVK ಸಂಪುಟದಿಂದ ಕಾಂಗ್ರೆಸ್ ಹೊರಬರಲಿದೆ: ಸಚಿವ

ಇಸ್ಲಾಂ ಧರ್ಮವೇ ಶ್ರೇಷ್ಠ: ಸಿಎಂ ಡಿಕೆಶಿಯ 6ನೇ ಗ್ಯಾರಂಟಿ- ಹಿಂದೂಗಳಿಗೆ ‘ಸುನ್ನತ್ ಗ್ಯಾರಂಟಿ' ರಾಯರೆಡ್ಡಿ ಕ್ಷಮೆಯಾಚನೆಗೆ ಬಿಜೆಪಿ ಒತ್ತಾಯ!