ಕೃತಕ ಆಮ್ಲಜನಕ ಪಡೆಯುತ್ತಿರುವ ಕೋಮಲ್ 
ಸಿನಿಮಾ ಸುದ್ದಿ

ಸ್ಯಾಂಡಲ್ ವುಡ್ ನಟ ಕೋಮಲ್ ಗೆ ಕೊರೋನಾ, 'ತಮ್ಮನನ್ನು ಉಳಿಸಿ' ಎಂದು ರಾಯರ ಪಾದಕ್ಕೆ ಶರಣಾದ ಜಗ್ಗೇಶ್!

ಸ್ಯಾಂಡಲ್ ವುಡ್ ನಟ ಕೋಮಲ್ ಗೆ ಕೊರೋನಾ ಸೋಂಕು ತಗುಲಿದೆ. ಅವರಿಗೆ ಕೃತಕ ಆಮ್ಲಜನಕ ವ್ಯವಸ್ಥೆ ಮಾಡಲಾಗಿದ್ದು ತಮ್ಮನನ್ನು ಉಳಿಸಿಕೊಡಿ ಎಂದು ನವರಸ ನಾಯಕ ಜಗ್ಗೇಶ್ ಮಂತ್ರಾಲಯದ ರಾಯರ ಪಾದಕ್ಕೆ ಶರಣಗಿದ್ದಾರೆ.

ಸ್ಯಾಂಡಲ್ ವುಡ್ ನಟ ಕೋಮಲ್ ಗೆ ಕೊರೋನಾ ಸೋಂಕು ತಗುಲಿದೆ. ಅವರಿಗೆ ಕೃತಕ ಆಮ್ಲಜನಕ ವ್ಯವಸ್ಥೆ ಮಾಡಲಾಗಿದ್ದು ತಮ್ಮನನ್ನು ಉಳಿಸಿಕೊಡಿ ಎಂದು ನವರಸ ನಾಯಕ ಜಗ್ಗೇಶ್ ಮಂತ್ರಾಲಯದ ರಾಯರ ಪಾದಕ್ಕೆ ಶರಣಗಿದ್ದಾರೆ.

ಈ ಬಗ್ಗೆ ಸರಣಿ ಟ್ವೀಟ್ ಮಾಡಿ ಹೇಳಿಕೊಂಡಿರುವ ನಟ ಜಗ್ಗೇಶ್ "ತಮ್ಮನಿಗೆ ಕೊರೋನ ಮಾರಿ ಮೈಸೇರಿ ತುಂಬ serious ಆಗಿಬಿಟ್ಟ! ದೇವರಿಗೆ ಗೊತ್ತು ನಾನು ಎಲ್ಲರಿಂದ ಮುಚ್ಚಿಟ್ಟು ಅಣ್ಣನಾಗಿ ಅವನ ಉಳಿಸಿಕೊಂಡ ಕಷ್ಟ! ಅವನಿಗೆ ಸಹಾಯ ಮಾಡಿದ ಡಾ: ಮಧುಮತಿ, ನಾದನಿ ಡಾ ಲಲಿತ ನರ್ಸಗಳ ಪಾದಕ್ಕೆ ನನ್ನ ನಮನ," ಎಂದಿದ್ದಾರೆ.

ಅಲ್ಲದೆ "ನಾನು ಇಷ್ಟುದಿನ ಮುಚ್ಚಿಟ್ಟು ಪಡುತ್ತಿದ್ದ ಯಾತನೆ ರಾಯರಿಗೆ ಮಾತ್ರ ಗೊತ್ತು! ಭಕ್ತನ ಗುರುಗಳ ನಡುವೆ ನಡೆದಿತ್ತು ಭಾವನಾತ್ಮಕ ಭಕ್ತಿಯ ಬೇಡಿಕೆ! ಅದು ಒಂದೆ ರಾಯರೆ ನಾನು ಕಾಯವಾಚಮನ ಸತ್ಯವಾಗಿ ನಡೆದುಕೊಂಡಿದ್ದರೆ, ಹೃದಯದಿಂದ ಒಳ್ಳೆಯತನ ಅನುಸರಿಸಿದ್ದರೆ, ಮನುಷ್ಯ ಪಕ್ಷಿ ಪ್ರಾಣಿಯ ಆತ್ಮದಲ್ಲಿ ಸಮಾನವಾಗಿ ದೇವರಿದ್ದಾನೆ ಎಂದು ನಂಬಿದ್ದರೆ, ಯಾರಿಗು ಕೇಡುಬಯಸದೆ ಮೋಸ ವಂಚನೆ ಅನ್ಯಾಯ ಮಾರ್ಗದಲ್ಲಿ ನಡೆದು ನೊಂದವರಿಗೆ ನಂಬಿದವರಿಗು ಭುಜಕೊಟ್ಟು ಬದುಕಿದ್ದರೆ, ನನ್ನ ತಂ ದೆತಾಯಿಯನ್ನು ನೋಹಿಸದೆ ಉತ್ತಮ ಮಗನಂತೆ ಸಂತೈಸಿದ್ದರೆ, ಅನ್ನಕೊಟ್ಟ ಶಾರದೆ ಸೇವೆ ನಿಷ್ಟೆಯಿಂದ ಮಾಡಿದ್ದರೆ, ಕಾಯಕಮಾಡುವ ಎಲ್ಲಾ ಕ್ಷೇತ್ರದಲ್ಲು ಪ್ರಾಮಾಣಿಕನಾಗಿದ್ದರೆ, ರಾಯರು ನನ್ನ ಹೃದಯಲ್ಲಿದ್ದರೆ ಸಾವಿನಮನೆ ಕದತಟ್ಟುತ್ತಿರುವ ನನ್ನ ತಮ್ಮನಿಗೆ ಸಾವು ಗೆಲ್ಲುವ ಶಕ್ತಿ ನೀಡಿ ಎಂದು! ರಾಯರು ನನ್ನ ಬೇಡಿಕೆಗೆ ಬೃಂದಾವನದಿಂದ ಎದ್ದುಬಂದು ಪಕ್ಕನಿಂತು ಅವನ ಉಳಿಸಿಬಿಟ್ಟರು !komal is safe ಚಿತ್ರರಂಗದಲ್ಲಿ ಸಂಕಷ್ಟ ಅನುಭವಿಸಿದ ಕೋಮಲ್ ಸ್ವಾಭಿಮಾನದಿಂದ ಬದುಕಲು ಸ್ವಂತ ವ್ಯವಹಾರ ಬೆಂಗಳೂರಿನ ಕಾರ್ಪೊರೇಷನ್ ನಲ್ಲಿ ಶುರುಮಾಡಿ ಯಶಸ್ವಿಯಾದ! ಆದರೆ ಇತ್ತೀಚೆಗೆ ತನಗೆ ಬರಬೇಕಾದ billಗೆ ಅಲ್ಲಿನ ಕೆಲ ಲಂಚಬಾಕ ಅಧಿಕಾರಿಗಳು ಹಣಕ್ಕೆ ಪೀಡಿಸಿ ಅಲೆಸಿಬಿಟ್ಟರು! ಅದ ಪಡೆಯಲು ದಿನ ಓಡಾಡುತ್ತಿದ್ದ ತಮ್ಮನಿಗೆ ಕೊರೋನ ಮಾರಿ ಮೈಸೇರಿ ತುಂಬ serious ಆಗಿಬಿಟ್ಟ!ದೇವರಿಗೆ ಗೊತ್ತು ನಾನು ಎಲ್ಲರಿಂದ ಮುಚ್ಚಿಟ್ಟು ಅಣ್ಣನಾಗಿ ಅವನ ಉಳಿಸಿಕೊಂಡ ಕಷ್ಟ!" ಎಂದಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

'ಶಾಂತಿ ಬೇಕಾದರೆ ಯುದ್ಧಕ್ಕೆ ಸಿದ್ಧರಾಗಿ.. Sudarshan Chakra ವಾಯುರಕ್ಷಣಾ ವ್ಯವಸ್ಥೆಗೆ ಮೂರೂ ಸೇನೆಗಳ ಬೃಹತ್ ಪ್ರಯತ್ನ ಬೇಕು': CDS Chauhan

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

SCROLL FOR NEXT