ಮಾನ್ವಿತಾ ಕಾಮತ್ 
ಸಿನಿಮಾ ಸುದ್ದಿ

ಸೈಕಾಲಜಿಕಲ್ ಥ್ರಿಲ್ಲರ್ ಚಿತ್ರದಲ್ಲಿ ಪೃಥ್ವಿ ಅಂಬರ್- ಮಾನ್ವಿತಾ ಜೋಡಿ

ಸಬೂ ಅಲೋಶಿಯಸ್​ ಹಾಗೂ ಅರುಣ್​ಕುಮಾರ್​ ನಿರ್ದೇಶನದಲ್ಲಿ ಮೂಡಿ ಬರುತ್ತಿರುವ ಸೈಕಾಲಜಿಕಲ್ ಥ್ರಿಲ್ಲರ್ ಚಿತ್ರದಲ್ಲಿ ಇದೇ ಮೊದಲ ಬಾರಿಗೆ ನಟ ಪೃಥ್ವಿ ಅಂಬರ್ ಹಾಗೂ ನಟಿ ಮಾನ್ವಿತಾ ಕಾಮತ್ ಅವರು ಜೋಡಿಯಾಗಿ ಕಾಣಿಸಿಕೊಳ್ಳುತ್ತಿದ್ದಾರೆ.

ಸಬೂ ಅಲೋಶಿಯಸ್​ ಹಾಗೂ ಅರುಣ್​ಕುಮಾರ್​ ನಿರ್ದೇಶನದಲ್ಲಿ ಮೂಡಿ ಬರುತ್ತಿರುವ ಸೈಕಾಲಜಿಕಲ್ ಥ್ರಿಲ್ಲರ್ ಚಿತ್ರದಲ್ಲಿ ಇದೇ ಮೊದಲ ಬಾರಿಗೆ ನಟ ಪೃಥ್ವಿ ಅಂಬರ್ ಹಾಗೂ ನಟಿ ಮಾನ್ವಿತಾ ಕಾಮತ್ ಅವರು ಜೋಡಿಯಾಗಿ ಕಾಣಿಸಿಕೊಳ್ಳುತ್ತಿದ್ದಾರೆ.

ಚಿತ್ರದ ಕುರಿತು ಯಾವುದೇ ಗುಟ್ಟು ಬಿಟ್ಟುಕೊಡದ ಚಿತ್ರದ ತಂಡ ಈಗಾಗಲೇ ಸದ್ದಿಲ್ಲದೆ ಚಿತ್ರೀಕರಣವನ್ನು ಆರಂಭಿಸಿದೆ ಎಂದು ತಿಳಿದುಬಂದಿದೆ. 

ಸ್ಯಾಂಡಲ್ ವುಡಲ್ ನಲ್ಲಿ ಸಬೂ ಅಲೋಶಿಯಸ್​ ಹಾಗೂ ಅರುಣ್​ಕುಮಾರ್​ ನಿರ್ದೇಶನದಲ್ಲಿ ಮೂಡಿ ಬರುತ್ತಿರುವ ಎರಡನೇ ಚಿತ್ರ ಇದಾಗಿದೆ. 

ಈಗಾಗಲೇ ಈ ನಿರ್ದೇಶಕರು ಪೃಥ್ವಿ ಅಂಬರ್ ಅಂಬರ್ ಜೊತೆಗೆ ಲೈಫ್ ಈಸ್ ಬ್ಯೂಟಿಫುಲ್ ಚಿತ್ರವನ್ನು ನಿರ್ದೇಶಿಸಿದ್ದು, ಚಿತ್ರ ಬಿಡುಗಡೆಗೆ ಸಿದ್ದವಾಗಿದೆ. 

ದಿಯಾ ಚಿತ್ರದ ಮೂಲಕ ಖ್ಯಾತಿ ಪಡೆದಿರುವ ಪೃಥ್ವಿ ಅಂಬರ್ ಕೈಯಲ್ಲಿ ಸಾಕಷ್ಟು ಚಿತ್ರಗಳಿವೆ. ಹ್ಯಾಟ್ರಿಕ್ ಹೀರೋ  ಶಿವರಾಜಕುಮಾರ್ ಅವರು ನಟಿಸುವ ದೊಡ್ಡ ಚಿತ್ರ ಬೈರಾಗಿಯಲ್ಲೂ ಪೃಥ್ವಿ ಕಾಣಿಸಿಕೊಳ್ಳುತ್ತಿದ್ದಾರೆ. ಕನ್ನಡ ಚಿತ್ರವಷ್ಟೇ ಅಲ್ಲದೆ, ಪೃಥ್ವಿ ಅಂಬರ್ ಅವರು ತಮಿಳು ಚಿತ್ರಗಳಲ್ಲೂ ಕಾಣಿಸಿಕೊಳ್ಳುತ್ತಿದ್ದಾರೆ. 

ಬೈರಾಗಿ ಚಿತ್ರವನ್ನು ವಿಜಯ್ ಮಿಲ್ಟನ್ ಅವರು ನಿರ್ದೇಶನ ಮಾಡಿದ್ದು, ಈ ಚಿತ್ರದಲ್ಲಿ ಪೃಥ್ವಿಯವರ ನಟನೆಯನ್ನು ನೋಡಿದ ವಿಜಯ್ ಮಿಲ್ಟನ್ ಅವರು ಪೃಥ್ವಿಯವರನ್ನು ತಮಿಳು ಚಿತ್ರರಂಗಕ್ಕೆ ಕರೆದುಕೊಂಡು ಹೋಗುತ್ತಿದ್ದಾರೆಂದು ತಿಳಿದುಬಂದಿದೆ. 

ಇನ್ನು ಮಾನ್ವಿತ ಕಾಮತ್ ಅವರು. ಪಿಸಿ.ಶೇಖರ್ ಅವರು ನಿರ್ದೇಶಿಸುತ್ತಿರುವ ರೊಮ್ಯಾಂಟಿಕ್ ಥ್ರಿಲ್ಲರ್ ಚಿತ್ರವೊಂದಕ್ಕೆ ಇತ್ತೀಚೆಗಷ್ಟೇ ಸಹಿ ಹಾಕಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನಿರ್ಬಂಧದ ಹೊರತಾಗಿಯೂ ರಷ್ಯಾದಲ್ಲಿ ಇಳಿದ ಅಮೆರಿಕದ C-17 ಮಿಲಿಟರಿ ವಿಮಾನ: ಮಿಷನ್ ಮಾತ್ರ ನಿಗೂಢ!

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

2nd Test: ‘ಶ್ರೀಲಂಕಾ ಆಟಗಾರರ ವರ್ತನೆ ವೃತ್ತಿಪರವಾಗಿರಲಿಲ್ಲ’: ಬ್ಯಾಡ್ ಲೈಟ್ ವಿವಾದಕ್ಕೆ Sanjay Manjrekar ಕಿಡಿ

‘ಪ್ರಸಿದ್ಧ್ ಕೃಷ್ಣ ವಿಶ್ವದರ್ಜೆಯ ಬೌಲರ್ ಆಗಿ ಮಾರ್ಪಟ್ಟಿದ್ದಾರೆ’: ಕನ್ನಡಿಗನ ಶ್ಲಾಘಿಸಿದ ದಕ್ಷಿಣ ಆಫ್ರಿಕಾ ಮಾಜಿ ವೇಗಿ Morne Morkel