ಅಭಿಷೇಕ್ - ಸುಮಲತಾ - ದರ್ಶನ್ 
ಸಿನಿಮಾ ಸುದ್ದಿ

ತಿರುಪತಿ ತಿಮ್ಮಪ್ಪನ ದರ್ಶನ ಪಡೆದ ಸಂಸದೆ ಸುಮಲತಾ, ಅಭಿಷೇಕ್; ದರ್ಶನ್ ಸಾಥ್

ಇತ್ತೀಚಿನ ಕೆಲ ವಿವಾದಗಳಿಂದ ತೀವ್ರ ಅಸಮಾಧಾನಿತರಾಗಿದ್ದ ನಟ ದರ್ಶನ್ ಅವರು ನೆಮ್ಮದಿಗಾಗಿ ದೇವರ ಮೊರೆ ಹೋಗಿದ್ದಾರೆ.

ಬೆಂಗಳೂರು: ಇತ್ತೀಚಿನ ಕೆಲ ವಿವಾದಗಳಿಂದ ತೀವ್ರ ಅಸಮಾಧಾನಿತರಾಗಿದ್ದ ನಟ ದರ್ಶನ್ ಅವರು ನೆಮ್ಮದಿಗಾಗಿ ದೇವರ ಮೊರೆ ಹೋಗಿದ್ದಾರೆ.

ಸೋಮವಾರ ಬೆಳಗ್ಗೆ ತಿರುಪತಿಯಲ್ಲಿ ತಿಮ್ಮಪ್ಪನ ದರ್ಶನ ಪಡೆದಿರುವ ಫೋಟೋಗಳು ಸಹ ಸೋಶಿಯಲ್ ಮೀಡಿಯಾದಲ್ಲಿ ಸದ್ದು ಮಾಡ್ತಿವೆ. ನಟ ದರ್ಶನ್ ಮತ್ತು ಅಭಿಷೇಕ್ ಒಟ್ಟಿಗೆ ಕಾಣಿಸಿಕೊಂಡಿರುವ ಫೋಟೋ ಗಮನ ಸೆಳೆದಿದೆ.

ಕಳೆದ ತಿಂಗಳಷ್ಟೇ ಕೇರಳದಲ್ಲಿ ಶನಿದೇವರ ದರ್ಶನ ಪಡೆದಿದ್ದ ಚಾಲೆಂಜಿಂಗ್ ಸ್ಟಾರ್ ದರ್ಶನ್, ಈಗ ತಿರುಪತಿಗೆ ಭೇಟಿ ನೀಡಿ ತಿಮ್ಮಪ್ಪನ ಆಶೀರ್ವಾದ ಪಡೆದುಕೊಂಡಿದ್ದಾರೆ.

ಮಂಡ್ಯ ಸಂಸದೆ ಸುಮಲತಾ, ಅಭಿಷೇಕ್ ಅಂಬರೀಶ್ ಹಾಗೂ ದರ್ಶನ್ ಅವರು ತಿರುಪತಿಗೆ ಭೇಟಿ ಕೊಟ್ಟಿರುವ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ತಿರುಪತಿಗೆ ಹೋಗುತ್ತಿರುವುದಾಗಿ ಸ್ವತಃ ಸುಮಲತಾ ಅವರೇ ಫೇಸ್‌ಬುಕ್‌ನಲ್ಲಿ ಪೋಸ್ಟ್ ಹಾಕಿದ್ದರು. ಈ ವೇಳೆ ನಟ ದರ್ಶನ್, ಅಭಿಷೇಕ್ ಜೊತೆ ಸುಮಲತಾ ಇರುವ ಫೋಟೋ ಹಂಚಿಕೊಂಡಿದ್ದಾರೆ.

‘ರಾಬರ್ಟ್' ಚಿತ್ರದ ಬಿಡುಗಡೆಗೆ ಮುಂಚೆ ನಟ ದರ್ಶನ್, ನಿರ್ಮಾಪಕ ಉಮಾಪತಿ ಶ್ರೀನಿವಾಸ್ ಅವರು ತಿರುಪತಿಗೆ ಭೇಟಿ ನೀಡಿದ್ದರು. ಮಾರ್ಚ್ 11 ರಂದು ರಾಬರ್ಟ್ ಸಿನಿಮಾ ಕನ್ನಡ ಮತ್ತು ತೆಲುಗಿನಲ್ಲಿ ಬಿಡುಗಡೆಯಾಗಬೇಕಿತ್ತು. ಅದಕ್ಕೂ ಮುಂಚೆ ಫೆಬ್ರವರಿ ತಿಂಗಳಲ್ಲಿ ಚಾಲೆಂಜಿಂಗ್ ಸ್ಟಾರ್ ತಿರುಪತಿಗೆ ಭೇಟಿ ನೀಡಿದ್ದರು. ಈ ವೇಳೆ ಉಮಾಪತಿಯೂ ಜೊತೆಯಲ್ಲಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

SIR ಅಕ್ರಮಗಳ ವಿರುದ್ಧ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ರಾಹುಲ್ ಗಾಂಧಿ; TMC, RJD, ಮಿತ್ರಪಕ್ಷಗಳಿಂದಲೂ ಅರ್ಜಿ

ಗುಟ್ಟಾಗಿ ಮದುವೆಯಾಗಿದ್ದಾರಾ ನಟಿ ತ್ರಿಶಾ?: ಲಂಡನ್ ಸೆಲ್ಫಿಯಲ್ಲಿನ ಲಾಕೆಟ್ ನ ಗುಟ್ಟೇನು!

ಟಿವಿ, ಒಟಿಟಿಗೆ ಬರುತ್ತಾ 'ಪ್ರೇಮದ ಊರಲಿ'? ಚಿತ್ರತಂಡ ಹೇಳಿದ್ದೇನು?

Chalo Supreme Court: ಭೇಟಿ ಮನವಿ ತಿರಸ್ಕರಿಸಿದ CJI ಸೂರ್ಯಕಾಂತ್; ಸುಪ್ರೀಂ ಕೋರ್ಟ್‌ನತ್ತ ಇಂಡಿಯಾ ಬ್ಲಾಕ್ ಮೆರವಣಿಗೆ!

ಅತಿಯಾಗಿ ಭಯ ಹುಟ್ಟಿಸಬೇಡಿ, ನಿಮ್ಮ ಹೆದರಿಕೆಗೆ ಬಗ್ಗಲ್ಲ: ಗಾಯದ Video ಶೇರ್​ ಮಾಡಿ ಪೊಲೀಸರಿಗೆ ಆಮೀರ್ ಖಾನ್ ಸೊಸೆ ತಿರುಗೇಟು!