ಶರಣ್ಯ 
ಸಿನಿಮಾ ಸುದ್ದಿ

ತಿರುವನಂತಪುರಂ: ಬ್ರೇನ್ ಟ್ಯೂಮರ್‌ನಿಂದ ಬಳಲುತ್ತಿದ್ದ ನಟಿ ಶರಣ್ಯ ನಿಧನ

ಕಳೆದ ಒಂಬತ್ತು ವರ್ಷಗಳಿಂದ ಬ್ರೇನ್ ಟ್ಯೂಮರ್‌ನಿಂದ ಬಳಲುತ್ತಿದ್ದ ಖ್ಯಾತ ಚಲನಚಿತ್ರ ಮತ್ತು ಕಿರುತೆರೆ ನಟಿ ಶರಣ್ಯ ಶಶಿ ಅವರು ಚಿಕಿತ್ಸೆ ಫಲಕಾರಿಯಾಗದೆ ಸೋಮವಾರ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.

ತಿರುವನಂತಪುರಂ: ಕಳೆದ ಒಂಬತ್ತು ವರ್ಷಗಳಿಂದ ಬ್ರೇನ್ ಟ್ಯೂಮರ್‌ನಿಂದ ಬಳಲುತ್ತಿದ್ದ ಖ್ಯಾತ ಚಲನಚಿತ್ರ ಮತ್ತು ಕಿರುತೆರೆ ನಟಿ ಶರಣ್ಯ ಶಶಿ ಅವರು ಚಿಕಿತ್ಸೆ ಫಲಕಾರಿಯಾಗದೆ ಸೋಮವಾರ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.

35 ವರ್ಷದ ನಟಿ ಶರಣ್ಯಗೆ 2012 ರಲ್ಲಿ ಬ್ರೈನ್ ಟ್ಯೂಮರ್ ಪತ್ತೆಯಾಗಿತ್ತು. ಬಳಿಕ ಹಲವು ಬಾರಿ ನಟಿ ಶಸ್ತ್ರಚಿಕಿತ್ಸೆಗಳಿಗೆ ಒಳಗಾಗಿದ್ದರು ಮತ್ತು ಬ್ರೈನ್ ಟ್ಯೂಮರ್ ನಿಂದ ಬಳಲುತ್ತಿದ್ದ ಅನೇಕ ಜನರಿಗೆ ಸ್ಫೂರ್ತಿಯಾಗಿದ್ದರು. ಕ್ಯಾನ್ಸರ್ ವಿರುದ್ಧ ನಟಿ ಧೈರ್ಯದಿಂದ ಹೋರಾಡಿದ್ದಕ್ಕಾಗಿ ವ್ಯಾಪಕವಾಗಿ ಪ್ರಶಂಸಿಸಲಾಗಿತ್ತು.

ಕಳೆದ ಮೇ 23 ರಂದು ಕೋವಿಡ್ ರೋಗಲಕ್ಷಣಗಳು ಕಾಣಿಸಿಕೊಂಡ ನಂತರ ಶರಣ್ಯ ಅವರು ಆಸ್ಪತ್ರೆಗೆ ದಾಖಲಾಗಿದ್ದರು. ಆಕೆಯ ಆರೋಗ್ಯ ಸ್ಥಿತಿ ಗಂಭೀರವಾಗಿದ್ದರಿಂದ ಆಸ್ಪತ್ರೆಯ ವೆಂಟಿಲೇಟರ್ ಐಸಿಯುನಲ್ಲಿ ಹಲವು ದಿನಗಳ ಕಾಲ ಚಿಕಿತ್ಸೆ ನೀಡಲಾಗಿತ್ತು. ಜೂನ್ ನಲ್ಲಿ ಕೆಲ ದಿನಗಳ ಕಾಲ ಐಸಿಯುನಿಂದ ಹೊರಬಂದಿದ್ದರು. ಆದರೆ ಆಕೆಯ ಸ್ಥಿತಿ ಮತ್ತಷ್ಟು ಹದಗೆಟ್ಟ ನಂತರ ಪುನಃ ದಾಖಲಾಗಿದ್ದರು. ಅಂತಿಮವಾಗಿ ಇಂದು ಕೊನೆಯುಸಿರೆಳೆದಿದ್ದಾರೆ.

ದೊಡ್ಡ ಚಿಕಿತ್ಸಾ ವೆಚ್ಚಗಳಿಂದಾಗಿ ನಟಿ ಆರ್ಥಿಕ ಸಂಕಷ್ಟಗಳನ್ನು ಎದುರಿಸಬೇಕಾಯಿತು. ಹೀಗಾಗಿ ಚಲನಚಿತ್ರ ಮತ್ತು ಟಿವಿ ಉದ್ಯಮದ ಅನೇಕ ಸಹ ನಟರು ನಟಿಯನ್ನು ಬೆಂಬಲಿಸಲು ಒಗ್ಗೂಡಿದರು ಮತ್ತು ಶರಣ್ಯ ಅವರಿಗೆ ಸಹಾಯ ಮಾಡಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಸಾರ್ವಜನಿಕವಾಗಿ ನನ್ನನ್ನು ಬಂಧಿಸಿ ಅವಮಾನಿಸುವ ಅಗತ್ಯವಿಲ್ಲ: ಪವನ್ ಖೇರಾ, ತೀರ್ಪು ಕಾಯ್ದಿರಿಸಿದ ಸುಪ್ರೀಂ

ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ: ಮಲ್ಲಿಕಾರ್ಜುನ ಖರ್ಗೆ; Video

ಎಲ್ಲಾ ಸರ್ಕಾರಿ ಆಸ್ಪತ್ರೆ ಕಟ್ಟಡಗಳ ಕ್ಷಮತೆ ಪರಿಶೀಲನೆಗೆ ನಿರ್ದೇಶನ: ಭಾರೀ ಮಳೆ ನಿರೀಕ್ಷೆ ಇರಲಿಲ್ಲ, ಇದ್ದಕ್ಕಿದ್ದಂತೆ ಜೋರಾಗಿ ಬಂತು- ಪರಮೇಶ್ವರ್

IPL 2026: ಬ್ಯಾಟಿಂಗ್ ಸೆನ್ಸೇಷನ್ ವೈಭವ್ ಸೂರ್ಯವಂಶಿ 'ನಿಜಕ್ಕೂ AI?' ಎಲಾನ್ ಮಸ್ಕ್ ಈ ಮಾಂತ್ರಿಕನನ್ನು ಸೃಷ್ಟಿಸಿದರೇ?

'ನಿಮ್ಮ ಕಾನೂನಿಗೆ ತಿದ್ದುಪಡಿ ತನ್ನಿ': ಅತ್ಯಾಚಾರ ಸಂತ್ರಸ್ತ ಬಾಲಕಿ ಗರ್ಭಪಾತ ತಡೆದ ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ತರಾಟೆ..!

SCROLL FOR NEXT