ಮಾನ್ಸೂನ್ ರಾಗ ಸಿನಿಮಾ ಸ್ಟಿಲ್ 
ಸಿನಿಮಾ ಸುದ್ದಿ

ರಚಿತಾ ರಾಮ್- ಧನಂಜಯ್ ನಟನೆಯ 'ಮಾನ್ಸೂನ್ ರಾಗ' ಟೀಸರ್ ರಿಲೀಸ್

ಧನಂಜಯ್‌ ಮತ್ತು ರಚಿತಾ ರಾಮ್‌ ಒಟ್ಟಾಗಿ ಮೊದಲ ಬಾರಿಗೆ ನಾಯಕ ನಾಯಕಿಯಾಗಿ ಮಾನ್ಸೂನ್ ರಾಗ ಎಂಬ ಸಿನಿಮಾದಲ್ಲಿ ಅಭಿನಯಿಸುತ್ತಿದ್ದಾರೆ.

ಧನಂಜಯ್‌ ಮತ್ತು ರಚಿತಾ ರಾಮ್‌ ಒಟ್ಟಾಗಿ ಮೊದಲ ಬಾರಿಗೆ ನಾಯಕ ನಾಯಕಿಯಾಗಿ ಮಾನ್ಸೂನ್ ರಾಗ ಎಂಬ ಸಿನಿಮಾದಲ್ಲಿ ಅಭಿನಯಿಸುತ್ತಿದ್ದಾರೆ.

ರಮೇಶ್‌ ಅರವಿಂದ್‌ ನಟನೆಯ 'ಪುಷ್ಪಕ ವಿಮಾನ' ಚಿತ್ರ ಮಾಡಿದ್ದ ನಿರ್ದೇಶಕ ಎಸ್‌. ರವೀಂದ್ರನಾಥ್‌ ಮತ್ತು ನಿರ್ಮಾಪಕ ವಿಖ್ಯಾತ್‌ ಎರಡನೇ ಬಾರಿ ಒಟ್ಟಿಗೆ ಸಿನಿಮಾ ಮಾಡುತ್ತಿದ್ದಾರೆ. 

ಈ ಚಿತ್ರ ಪಿರಿಯಾಡಿಕಲ್‌ ಸಿನಿಮಾ ಆಗಿದ್ದು, ಈಗಾಗಲೇ ಬಹುಪಾಲು ಚಿತ್ರೀಕರಣವನ್ನೂ ಮಾಡಿ ಮುಗಿಸಿದೆ ಚಿತ್ರತಂಡ. ಇದು ವಿಂಟೇಜ್‌ ಸಿನಿಮಾ. 60-70ರ ದಶಕದ ಕಥೆಯಾಗಿದೆ. ಚಿತ್ರದಲ್ಲಿ ಲವ್‌ ಸ್ಟೋರಿ ಇದೆ. ಅದರ ಜತೆ ಬೇರೆ ಬೇರೆ ಅಂಶಗಳೂ ಇರಲಿವೆ. 

ಧನಂಜಯ್‌ ಮತ್ತು ರಚಿತಾ ನಟನೆಯ ದೃಶ್ಯಗಳ ಚಿತ್ರೀಕರಣ ಮಾಡಿ ಮುಗಿಸಲಾಗಿದೆ. ಚಿತ್ರದಲ್ಲಿ ಐದು ಹಾಡುಗಳಿದ್ದು, ಅನೂಪ್‌ ಸೀಳಿನ್‌ ಸಂಗೀತ ಸಂಯೋಜನೆ ಮಾಡಿದ್ದಾರೆ. ಚಿತ್ರದಲ್ಲಿ ದಕ್ಷಿಣ ಭಾರತದ ಜನಪ್ರಿಯ ನಟರು ಕೂಡ ಮತ್ತೊಂದು ಲೀಡ್‌ ಜೋಡಿಯಾಗಿ ಕಾಣಿಸಿಕೊಳ್ಳಲಿದ್ದಾರೆ. ಅವರು ಯಾರು ಎನ್ನುವುದನ್ನು ಸದ್ಯದಲ್ಲೇ ಪ್ರಕಟಿಸುವುದಾಗಿ ಚಿತ್ರತಂಡ ಹೇಳಿದೆ.

ಸದ್ಯ ಸಿನಿಮಾದ ಟೀಸರ್ ರಿಲೀಸ್ ಆಗಿದೆ. ರಚಿತಾ ರಾಮ್ ಇದರ ಜೊತೆಗೆ ಶಬರಿ ಸೆರ್ಚಿಂಗ್ ಫಾರ್ ರಾವಣ ಸೇರಿದಂತೆ ಹಲವು ಸಿನಿಮಾ ಶೂಟಿಂಗ್ ಗಳಲ್ಲಿ ಬ್ಯುಸಿಯಾಗಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಮತಗಳ್ಳತನ' ನಡೆದಿರುವುದನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ನಿರಾಕರಿಸಲಿಲ್ಲ, ನನಗೆ ಆಶ್ಚರ್ಯವಾಯಿತು: ರಾಹುಲ್ ಗಾಂಧಿ

ಬೆಂಗಳೂರು: ನಮ್ಮ ಮೆಟ್ರೋದಲ್ಲಿ Alt News ಸಹ ಸ್ಥಾಪಕ ಮೊಹಮ್ಮದ್ ಜುಬೈರ್ ಗೆ ಹಿಗ್ಗಾಮುಗ್ಗ ಥಳಿತ?, Video Viral

19ನೇ ಓವರ್‌ನಲ್ಲೇ 250 ರನ್ ಚೇಸ್: ಟಿ20 ಕ್ರಿಕೆಟ್‌ನಲ್ಲಿ ಭಾರತವನ್ನು ಸೋಲಿಸಿ ದಾಖಲೆ ಬರೆದ ವಿಂಡೀಸ್

CJP Protest: ಭಾರತದ ಯುವಕರು ದೆಹಲಿಗೆ ತಲುಪುವುದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ: ಚಿರಾಗ್ ಪಾಸ್ವಾನ್

24 ಗಂಟೆ ಇಂಟರ್ನೆಟ್ ಕಟ್, 57 ಮೆಟ್ರೋ ನಿಲ್ದಾಣ ಬಂದ್: ಸಿಜೆಪಿ ಪ್ರತಿಭಟನೆಗೂ ಮುನ್ನ ದೆಹಲಿ ಹೈ ಅಲರ್ಟ್