ಮಂಸೋರೆ ಹಾಗೂ ಅಖಿಲ 
ಸಿನಿಮಾ ಸುದ್ದಿ

ಬಹುಕಾಲದ ಗೆಳತಿ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟ ನಿರ್ದೇಶಕ ಮಂಸೋರೆ

ರಾಷ್ಟ್ರ ಪ್ರಶಸ್ತಿ ವಿಜೇತ ಹಾಗೂ ಆಕ್ಟ್​ 1978 ಸಿನಿಮಾ ಖ್ಯಾತಿಯ ನಿರ್ದೇಶಕ ಮಂಸೋರೆ ಅವರು ತಮ್ಮ ಬಹಕಾಲದ ಗೆಳತಿ ಅಖಿಲಾ ಅವರ ಜೊತೆ ಭಾನುವಾರ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. 

ಬೆಂಗಳೂರು: ರಾಷ್ಟ್ರ ಪ್ರಶಸ್ತಿ ವಿಜೇತ ಹಾಗೂ ಆಕ್ಟ್​ 1978 ಸಿನಿಮಾ ಖ್ಯಾತಿಯ ನಿರ್ದೇಶಕ ಮಂಸೋರೆ ಅವರು ತಮ್ಮ ಬಹಕಾಲದ ಗೆಳತಿ ಅಖಿಲಾ ಅವರ ಜೊತೆ ಭಾನುವಾರ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. 

ಜುಲೈ 4ರಂದು ಬೆಂಗಳೂರಿನಲ್ಲಿ ಸರಳವಾಗಿ ನಿಶ್ಚಿತಾರ್ಥ ಮಾಡಿಕೊಂಡಿದ್ದ ಈ ಜೋಡಿ, ಭಾನುವಾರ ಕನಕಪುರ ರಸ್ತೆಯ ತಲಘಟ್ಟಪುರ ಬಳಿ ಇರುವ ಶಿಬ್ರಾವ್ಯಿ ಕೋರ್ಟ್‌ ಯಾರ್ಡ್‌ನಲ್ಲಿ ಸಪ್ತಪದಿ ತುಳಿದಿದೆ.

ಮಂಸೋರೆ ಅವರು ಮೊದಲು ನಿರ್ದೇಶಿಸಿದ 'ಹರಿವು' ಚಿತ್ರಕ್ಕೆ ಉತ್ತಮ ಪ್ರಾದೇಶಿಕ ಚಿತ್ರ ರಾಷ್ಟ್ರ ಪ್ರಶಸ್ತಿ ಬಂದಿತ್ತು. 'ಹರಿವು' ಚಿತ್ರದಲ್ಲಿ ಸಂಚಾರಿ ವಿಜಯ್ ಮುಖ್ಯಭೂಮಿಕೆಯಲ್ಲಿ ಅಭಿನಯಿಸಿದ್ದರು. 

ಮಂಸೋರೆ ನಿರ್ದೇಶನದ ಎರಡನೇ ಸಿನಿಮಾ 'ನಾತಿಚರಾಮಿ' 2018ರಲ್ಲಿ ಬಿಡುಗಡೆಯಾಗಿತ್ತು. ಶ್ರುತಿ ಹರಿಹರನ್ ಮತ್ತು ಸಂಚಾರಿ ವಿಜಯ್ ನಟಿಸಿದ್ದ ಆ ಚಿತ್ರಕ್ಕೆ ಉತ್ತಮ ಪ್ರಾದೇಶಿಕ ಚಿತ್ರ ರಾಷ್ಟ್ರ ಪ್ರಶಸ್ತಿ, ಮಂಸೋರೆ ಅವರಿಗೆ ಉತ್ತಮ ಸಾಹಿತ್ಯಕ್ಕೆ ರಾಷ್ಟ್ರ ಪ್ರಶಸ್ತಿ ಮತ್ತು ಇತರೆ ಮೂರು ವಿಭಾಗಗಳಲ್ಲಿ ರಾಷ್ಟ್ರ ಪ್ರಶಸ್ತಿ ಗೌರವ ಸಿಕ್ಕಿತ್ತು. ಅದೇ ಚಿತ್ರದ ನಿರ್ದೇಶನಕ್ಕಾಗಿ ಮಂಸೋರೆ ಅವರಿಗೆ ಉತ್ತಮ ನಿರ್ದೇಶಕ ಫಿಲ್ಮ್ ಫೇರ್ ಪ್ರಶಸ್ತಿಯು ಲಭಿಸಿತ್ತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಬೆಂಗಳೂರಲ್ಲಿ ಆಪರೇಷನ್‌ ಫುಟ್‌ಪಾತ್‌: ಇದುವರೆಗೆ 9,878 ಅತಿಕ್ರಮಣ ತೆರವು; CM ಡಿಕೆಶಿ ಸಿಟಿ ರೌಂಡ್ಸ್!

Kumbh Mela viral girl ಮೊನಾಲಿಸಾ 'ನಾಪತ್ತೆ'​: ಪೊಲೀಸ್ ರಕ್ಷಣೆ ಹಿಂಪಡೆದ ಕೇರಳ ಹೈಕೋರ್ಟ್

BJP ಆರೋಪಗಳ ಬೆನ್ನಲ್ಲೇ ಮಂಗಳೂರಿನಲ್ಲಿ 8 ಬಾಂಗ್ಲಾದೇಶಿ ಪ್ರಜೆಗಳ ಬಂಧನ; ಗಡಿಪಾರಿಗೆ ಸಿದ್ಧತೆ

ವಿಜಯಪುರದಲ್ಲಿ ಭೀಕರ ಅಪಘಾತ: ಡಿವೈಡರ್‌ಗೆ ಕಾರು ಡಿಕ್ಕಿ; ಇಬ್ಬರು ಪುತ್ರರ ಜೊತೆ ತಾಯಿ ಸ್ಥಳದಲ್ಲೇ ಸಾವು!

'ಮಮತಾರಂತೆ ನಾನು ದುರ್ಬಲ, ಹೇಡಿ CM ಅಲ್ಲ': ಶಾಸಕ ಹುಮಾಯೂನ್ ಕಬೀರ್​ ಬೆವರಿಳಿಸಿದ ಸುವೇಂದು ಅಧಿಕಾರಿ