ಸಪ್ತ ಸಾಗರದಾಚೆಯೆಲ್ಲೋ ಸ್ಟಿಲ್ 
ಸಿನಿಮಾ ಸುದ್ದಿ

'ಸಪ್ತ ಸಾಗರದಾಚೆಯೆಲ್ಲೋ' ಎರಡನೇ ಹಂತದ ಶೂಟಿಂಗ್ ಪ್ರಾರಂಭ!

ಹೇಮಂತ್ ಎಂ ರಾವ್ ನಿರ್ದೇಶನದ ಸಪ್ತ ಸಾಗರದಾಚೆ ಯೆಲ್ಲೋ ಸಿನಿಮಾದ ಎರಡನೇ ಹಂತದ ಶೂಟಿಂಗ ಆಗಸ್ಟ್ 16 ರಿಂದ ಆರಂಭವಾಗಿದೆ.

ಹೇಮಂತ್ ಎಂ ರಾವ್ ನಿರ್ದೇಶನದ ಸಪ್ತ ಸಾಗರದಾಚೆ ಯೆಲ್ಲೋ ಸಿನಿಮಾದ ಎರಡನೇ ಹಂತದ ಶೂಟಿಂಗ ಆಗಸ್ಟ್ 16 ರಿಂದ ಆರಂಭವಾಗಿದೆ.

ರಕ್ಷಿತ್ ಶೆಟ್ಟಿ ಮತ್ತು ರುಕ್ಷ್ಮಿಣಿ ವಸಂತ್ ನಟನೆಯ ರೊಮ್ಯಾಂಟಿಕ್ ಕತೆ ಏಪ್ರಿಲ್ ತಿಂಗಳಿನಲ್ಲಿ ಆರಂಭವಾಯಿತು. ಕೊರೋನಾ ಸಾಂಕ್ರಾಮಿಕ ಮತ್ತು ಮಳೆಯಿಂದಾಗಿ ಶೂಟಿಂಗ್ ಸ್ಥಗಿತವಾಗಿತ್ತು. 

ಸದ್ಯ ಮತ್ತೆ ಶೂಟಿಂಗ್ ಆರಂಭಿಸಿರುವ ಚಿತ್ರ ತಂಡ ಬೆಂಗಳೂರಿನಲ್ಲಿ 35 ದಿನಗಳ ಕಾಲ ಚಿತ್ರೀಕರಣ ನಡೆಸಲಿದೆ.  ಅದಾದ ನಂತರ ಸಿನಿಮಾ ತಂಡ ಶಿವಮೊಗ್ಗಕ್ಕೆ ತೆರಳಲಿದ್ದು, ಅದಕ್ಕೂ ಮುನ್ನ ಸ್ವಲ್ಪ ಸಮಯ ಬ್ರೇಕ್ ತೆಗೆದುಕೊಳ್ಳಲಿದೆ ಎಂದು ನಿರ್ದೇಶಕರು ತಿಳಿಸಿದ್ದಾರೆ.

ಹೇಮಂತ್ ರಾವ್ ನಿರ್ದೇಶನದ ಮೂರನೇ ಸಿನಿಮಾ ಇದಾಗಿದೆ, ಈ ಮೊದಲು ಗೋದಿ ಬಣ್ಣ ಸಾಧಾರಣ ಮೈಕಟ್ಟು, ಕವಲು ದಾರಿ ನಿರ್ದೇಶನ ಮಾಡಿದ್ದರು. ರಕ್ಷಿತ್ ಶೆಟ್ಟಿ ಮತ್ತು ಹೇಮಂತ್ ರಾವ್ ಕಾಂಬಿನೇಷನ್ ನ ಎರಡನೇ ಸಿನಿಮಾ ಇದಾಗಿದೆ.

ಪರಮಾವ್ ಸ್ಟುಡಿಯೋಸ್‌ ನಿರ್ಮಿಸುತ್ತಿರುವ ಈ ಸಿನಿಮಾಗೆ ಚರಣ್ ರಾಜ್ ಸಂಗೀತ ಮತ್ತು ಅಧ್ವೈತ ಗುರುಮೂರ್ತಿಯವರ ಛಾಯಾಗ್ರಹಣವಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಪಕ್ಷದ ಹಿತಕ್ಕಾಗಿ ನಾಗೇಂದ್ರ ಯಾವುದೇ ತ್ಯಾಗಕ್ಕೂ ಸಿದ್ಧ, ಆದ್ರೆ...: ಹೈಕಮಾಂಡ್ ಭೇಟಿ ಬಳಿಕ CM ಡಿಕೆ ಶಿವಕುಮಾರ್

Nepal Floods: ನೇಪಾಳ ಭೀಕರ ಪ್ರವಾಹಕ್ಕೆ ಚೀನಾದ ನಿರ್ಮಾಣ ಕಾರ್ಯವೇ ಕಾರಣ?

'ಸಿಂಹ ಸುಮ್ಮನೆ ಕುಳಿತಿದೆ ಅಂದ್ರೆ ಸುಸ್ತಾಗಿದೆ ಅಂತಲ್ಲ, ಮುಂದಿನ ಬೇಟೆಗೆ ರೆಡಿ ಆಗ್ತಿದೆ ಎಂದರ್ಥ': ಕಿಚ್ಚ ಸುದೀಪ್ ದಿಢೀರ್ ಪೋಸ್ಟ್; ಇಲ್ಲಿದೆ ಕಾರಣ...

ಕಾನ್ಪುರದಲ್ಲಿ ತರಬೇತಿ ವಿಮಾನ ಪತನ: ಕರ್ನಾಟಕದ ಪೈಲಟ್‌ ಅಭಿಷೇಕ್​ ಸೇರಿ ಇಬ್ಬರು ಸಾವು; Video

Toxic Box Office Collection: ಟಾಕ್ಸಿಕ್ ಮೊದಲ ದಿನದ ಕಲೆಕ್ಷನ್ ಎಷ್ಟು ಗೊತ್ತಾ? ಕನ್ನಡಕ್ಕಿಂತ ಹಿಂದಿಯಲ್ಲಿ ಡಬಲ್ ಗಳಿಕೆ!