ಕಿಚ್ಚ ಸುದೀಪ 
ಸಿನಿಮಾ ಸುದ್ದಿ

''ಉಸಿರೇ ಉಸಿರೇ'' ಮೋಷನ್ ಫೋಸ್ಟರ್ ಬಿಡುಗಡೆ; ಹಿರೋ ರಾಜೀವ್ ಗೆ ಕಿಚ್ಚನ ಹಾರೈಕೆ

ಈ ಬಾರಿಯ ಬಿಗ್ ಬಾಸ್ ನಲ್ಲಿ ಭಾಗವಹಿಸಿದ್ದ ರಾಜೀವ್ "ಉಸಿರೇ ಉಸಿರೇ" ಚಿತ್ರದ ನಾಯಕನಾಗಿ ನಟಿಸುತ್ತಿದ್ದಾರೆ. ನಗರದ ಖಾಸಗಿ ಹೋಟೆಲ್ ನಲ್ಲಿ ಚಿತ್ರದ ಮೋಷನ್ ಪೋಸ್ಟರ್ ಬಿಡುಗಡೆ ಸಮಾರಂಭ ಅದ್ದೂರಿಯಾಗಿ ನೆರವೇರಿತು. ಮೋಷನ್ ಪೋಸ್ಟರ್ ಬಿಡುಗಡೆಗೊಳಿಸಿದ ಕಿಚ್ಚ ಸುದೀಪ ಚಿತ್ರ ತಂಡಕ್ಕೆ ಶುಭ ಹಾರೈಸಿದರು.  

ಬೆಂಗಳೂರು: ಈ ಬಾರಿಯ ಬಿಗ್ ಬಾಸ್ ನಲ್ಲಿ ಭಾಗವಹಿಸಿದ್ದ ರಾಜೀವ್ "ಉಸಿರೇ ಉಸಿರೇ" ಚಿತ್ರದ ನಾಯಕನಾಗಿ ನಟಿಸುತ್ತಿದ್ದಾರೆ. ನಗರದ ಖಾಸಗಿ ಹೋಟೆಲ್ ನಲ್ಲಿ ಚಿತ್ರದ ಮೋಷನ್ ಪೋಸ್ಟರ್ ಬಿಡುಗಡೆ ಸಮಾರಂಭ ಅದ್ದೂರಿಯಾಗಿ ನೆರವೇರಿತು. ಮೋಷನ್ ಪೋಸ್ಟರ್ ಬಿಡುಗಡೆಗೊಳಿಸಿದ ಕಿಚ್ಚ ಸುದೀಪ ಚಿತ್ರ ತಂಡಕ್ಕೆ ಶುಭ ಹಾರೈಸಿದರು.  

“ನಾನು ಈ ಸಮಾರಂಭಕ್ಕೆ ಬರಲು ಮುಖ್ಯ ಕಾರಣ ರಾಜೀವ. ಅವನಲ್ಲಿ ಈಗಲೂ ಏನೋ ಒಂಥರ ಮುಗ್ಧತೆ ಇದೆ. ಎಲ್ಲವನ್ನೂ ಬೇಗ ನಂಬಿ ಬಿಡುತ್ತಾನೆ. ಪುಣ್ಯ. ಅವನ ಪಕ್ಕದಲ್ಲಿರುವ ಹೆಂಡತಿ ಜಾಣೆ. ಆ ಹುಡುಗಿ ಇವನಿಗೆ ಎಲ್ಲವನ್ನೂ ಹೇಳಿ ಕೊಡುತ್ತಿದ್ದಾರೆ. ಸಿ.ಸಿ.ಎಲ್ ದಿನಗಳಿಂದಲೂ ನನಗೆ ಈತ ಪರಿಚಯ. ಅವನು ಕ್ರಿಕೆಟ್ ಸರಿಯಾಗಿ ಅಭ್ಯಾಸ ಮಾಡಿದ್ದರೆ, ಇಷ್ಟೊತ್ತಿಗೆ ರಾಜ್ಯ ಮಟ್ಟದಲ್ಲಿ ಆಡುತ್ತಿದ್ದ. ಈ ಸಿನಿಮಾದಿಂದ ರಾಜೀವ್ ಗೆ ಒಳ್ಳೆಯದಾಗಲಿ” ಎಂದರು.

ಕಿಚ್ಚ ಸುದೀಪ್​ ಅವರಿಗೆ ಚಿತ್ರತಂಡ ಬೆಳ್ಳಿ ಪೆನ್ ​ಅನ್ನು ಉಡುಗರೆಯಾಗಿ ನೀಡಿದರು. ಈ ಪೆನ್​ ಅನ್ನು ಸುದೀಪ್​ ಅವರು ನಿರ್ದೇಶಕರಿಗೆ ನೀಡಿ, ನಿಮ್ಮ ಮುಂದಿನ ಕೆಲಸಗಳೆಲ್ಲಾ ಸುಲಲಿತವಾಗಿ ನಡೆಯಲಿ ಎಂದು ಹಾರೈಸಿದರು. ನಮ್ಮ ನಾಲ್ಕು ವರ್ಷಗಳ ಶ್ರಮಕ್ಕೆ ಈಗ ಉತ್ತಮ ಕಾಲ ಕೂಡಿ ಬಂದಿದೆ.‌ ಎಲ್ಲರ ಹಾರೈಕೆಯು ನಮಗಿರಲಿ’ ಎಂದು ಕೋರಿದರು ರಾಜೀವ್​.

ಎನ್ ಗೊಂಬೆ ಪ್ರೊಡಕ್ಷನ್ಸ್ ಲಾಂಛನದಲ್ಲಿ ಪ್ರದೀಪ್ ಯಾದವ್  ನಿರ್ಮಿಸುತ್ತಿರುವ ಈ ಚಿತ್ರದಲ್ಲಿ ರಾಜೀವ್​ಗೆ ನಾಯಕಿಯಾಗಿ ಶ್ರೀಜಿತ ಘೋಷ್ ನಟಿಸುತ್ತಿದ್ದಾರೆ. ಚಿತ್ರಕ್ಕೆ ವಿವೇಕ್ ಚಕ್ರವರ್ತಿ ಸಂಗೀತ ಸಂಯೋಜಿಸುತ್ತಿದ್ದು, ಶರವಣನ್ ಛಾಯಾಗ್ರಹಣವಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 13 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಬೂಕರ್ ಪ್ರಶಸ್ತಿ ಮಹತ್ವ ತಿಳಿದಿದ್ದರೆ ನನ್ನನ್ನು ಟೀಕಿಸುತ್ತಿರಲಿಲ್ಲ, ಸಾಹಿತ್ಯ ಸಮ್ಮೇಳನದ ವಿಡಿಯೋ ತಿರುಚಲಾಗಿದೆ: ಬಾನು ಮುಷ್ತಾಕ್

ಡಿಕೆಶಿ RSS ಗೀತೆ ಹೇಳಿದ್ದೂ ರಾಹುಲ್‌ ಗಾಂಧಿಗೆ ತಲುಪಲಿ: ಶಾಕ್ ಕೊಟ್ಟ ಸತೀಶ್‌ ಜಾರಕಿಹೊಳಿ ಹೇಳಿಕೆ

ಧರ್ಮಸ್ಥಳ ಕೇಸ್: ತನಿಖೆ ಶೀಘ್ರಗತಿ ಪೂರ್ಣಗೊಳಿಸಲು SIT ಪ್ರಯತ್ನ; ಗೃಹ ಸಚಿವ ಡಾ.ಜಿ.ಪರಮೇಶ್ವರ್

SCROLL FOR NEXT