ಪ್ರಿಯಾಂಕಾ ಉಪೇಂದ್ರ 
ಸಿನಿಮಾ ಸುದ್ದಿ

ತ್ರಿವಿಕ್ರಮ ರಘು ನಿರ್ದೇಶನದ ಹೊಸ ಸಿನಿಮಾದಲ್ಲಿ ಡಿಟೆಕ್ಟಿವ್ ಆಗಿ ಪ್ರಿಯಾಂಕಾ ಉಪೇಂದ್ರ!

ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ಪ್ರಿಯಾಂಕಾ ಉಪೇಂದ್ರ ಅವರ ಹೊಸ ಸಿನಿಮಾ ಘೋಷಣೆ ಆಗಿದೆ. ಈ ಚಿತ್ರಕ್ಕಿನ್ನೂ ಶೀರ್ಷಿಕೆ ಫೈನಲ್ ಆಗಿಲ್ಲ. ಆದರೆ, ಪ್ರಿಯಾಂಕಾ ಉಪೇಂದ್ರ ಅವರ ಪಾತ್ರ ರಿವೀಲ್ ಆಗಿದೆ. 

ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ಪ್ರಿಯಾಂಕಾ ಉಪೇಂದ್ರ ಅವರ ಹೊಸ ಸಿನಿಮಾ ಘೋಷಣೆ ಆಗಿದೆ. ಈ ಚಿತ್ರಕ್ಕಿನ್ನೂ ಶೀರ್ಷಿಕೆ ಫೈನಲ್ ಆಗಿಲ್ಲ. ಆದರೆ, ಪ್ರಿಯಾಂಕಾ ಉಪೇಂದ್ರ ಅವರ ಪಾತ್ರ ರಿವೀಲ್ ಆಗಿದೆ. 

ತ್ರಿವಿಕ್ರಮ ರಘು ನಿರ್ದೇಶನದ ಇನ್ನೂ ಹೆಸರಿಡದ ಚಿತ್ರದಲ್ಲಿ ಪ್ರಿಯಾಂಕಾ ಉಪೇಂದ್ರ 'ಡಿಟೆಕ್ಟಿವ್ ತೀಕ್ಷ್ಣ' ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ಬಿಡುಗಡೆಯಾಗಿರುವ ಈ ಚಿತ್ರದ ಪೋಸ್ಟರ್‌ನಲ್ಲಿ ಪ್ರಿಯಾಂಕಾ ಉಪೇಂದ್ರಗೆ 'ಆಕ್ಷನ್ ಕ್ವೀನ್' ಎಂಬ ಬಿರುದು ನೀಡಲಾಗಿದೆ. ಹೀಗಾಗಿ 'ಡಿಟೆಕ್ಟಿವ್ ತೀಕ್ಷ್ಣ' ಆಗಿ ಪ್ರಿಯಾಂಕಾ ಉಪೇಂದ್ರ ಸಿನಿಮಾದಲ್ಲಿ ಸಿಕ್ಕಾಪಟ್ಟೆ ಆಕ್ಷನ್ ಮಾಡಬಹುದು ಎಂಬ ನಿರೀಕ್ಷೆ ಮೂಡಿದೆ.

ಗೌತಮ್ ಸಿನಿಮಾಸ್ ಪ್ರೈವೇಟ್ ಲಿಮಿಟೆಡ್  ಸಹಯೋಗದಲ್ಲಿ ಶ್ರೀದೇವಿ ಕ್ರಿಯೇಷನ್ ಬ್ಯಾನರ್ ಅಡಿ ಕನ್ನಡ ಮತ್ತು ತೆಲುಗು ಭಾಷೆಯಲ್ಲಿ ಸಿನಿಮಾ ತಯಾರಾಗುತ್ತಿದೆ. ಮಹೂರ್ತದ ದಿನ ಚಿತ್ರದ ಶೀರ್ಷಿಕೆ ಪ್ರಕಟಿಸಲಾಗುವುದು. ಉಳಿದ ಕಲಾವಿದರ ಆಯ್ಕೆ ಮತ್ತು ಸಂಗೀತ ನಿರ್ದೇಶಕರ ಆಯ್ಕೆ ನಂತರ ಮಾಡಲಾಗುವುದು.

ಚಿತ್ರಕ್ಕೆ ಮನು ದಾಸಪ್ಪ ಛಾಯಾಗ್ರಹಣವಿದೆ. ಸೆಪ್ಟೆಂಬರ್‌ನಲ್ಲಿ ಈ ಸಿನಿಮಾದ ಚಿತ್ರೀಕರಣ ಆರಂಭವಾಗಲಿದೆ. ಬೆಂಗಳೂರು, ಮೂಡಿಗೆರೆ, ಚಿಕ್ಕಮಗಳೂರು ಮತ್ತು ಉಪ್ಪಿನಂಗಡಿ ಸುತ್ತಮುತ್ತ ಶೂಟಿಂಗ್ ನಡೆಯಲಿದೆ

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

‘ವೈಯಕ್ತಿಕ ಮಹತ್ವಾಕಾಂಕ್ಷೆ ಅಲ್ಲ, ಧ್ಯೇಯಕ್ಕಾಗಿ ಬದುಕಿದ್ದೇನೆ, ದೇಶದ ಜನತೆಗೆ ತಲೆಬಾಗುತ್ತೇನೆ’: ಆಡಳಿತದಲ್ಲಿ 25 ವರ್ಷ ಪೂರೈಸಿದ ಪ್ರಧಾನಿ ಮೋದಿ ಮಾತು; Video

ರಷ್ಯಾ ಕರಾವಳಿಯಲ್ಲಿ ಡ್ರೋನ್ ದಾಳಿ: ಹೊತ್ತಿ ಉರಿದ ತೈಲ ಟ್ಯಾಂಕರ್‌, 23 ಭಾರತೀಯ ಸಿಬ್ಬಂದಿ ಪಾರು..!

Lionel Messi: 21 ವರ್ಷಗಳ ಬಳಿಕ ತವರಿನಲ್ಲೇ ಫುಟ್ಬಾಲ್​ ದಿಗ್ಗಜ ಲಿಯೋನೆಲ್ ಮೆಸ್ಸಿ ಭಾವುಕ ವಿದಾಯ; ಹೇಗಿತ್ತು ನೋಡಿ ಅಂತಿಮ ಪಂದ್ಯ; Video

‘ದಯವಿಟ್ಟು ಮಲಗಬೇಡಿ, ನಮಗೆ ನೀವು ಬೇಕು’: ಸಾವಿನ ದವಡೆಯಲ್ಲಿದ್ದ ಸ್ಮಿತ್ ಮಚ್ಚರ್'ಗೆ ಧೈರ್ಯ ತುಂಬಿದ ದಂತ ವೈದ್ಯ, Flydubai ವಿಮಾನದಲ್ಲಿ ಆ 45 ನಿಮಿಷಗಳಲ್ಲಿ ನಡೆದಿದ್ದೇನು..?

‘ಮತ ಕಳ್ಳತನ’ದ ಆರೋಪದಲ್ಲಿ ಹುರುಳಿಲ್ಲ, ಸುಖಾಸುಮ್ಮನೆ ರಾಹುಲ್ ಗಾಂಧಿಯಿಂದ ಗೊಂದಲ ಸೃಷ್ಟಿ: ಹೆಚ್‌.ಡಿ. ಕುಮಾರಸ್ವಾಮಿ ಆರೋಪ