ಸಿನಿಮಾ ಸುದ್ದಿ

ಬೆಂಗಳೂರು: ಹಿರಿಯ ನಟ ದೊಡ್ಡಣ್ಣ ಆಸ್ಪತ್ರೆಗೆ ದಾಖಲು

Nagaraja AB

ಬೆಂಗಳೂರು: ಸ್ಯಾಂಡಲ್ ವುಡ್ ಹಿರಿಯ ನಟ ದೊಡ್ಡಣ್ಣ ಅನಾರೋಗ್ಯದಿಂದ ಜಯದೇವ ಹೃದ್ರೋಗ ಆಸ್ಪತ್ರೆಗೆ ದಾಖಲಾಗಿದ್ದಾರೆ. ಮೂಲಗಳ ಪ್ರಕಾರ ಹಾರ್ಟ್ ರೇಟ್ ಕಡಿಮೆಯಾಗಿ ಸುಸ್ತಿನಿಂದ ನಿನ್ನೆ ಬೆಳಿಗ್ಗೆಯೇ ದೊಡ್ಡಣ್ಣ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ ಎನ್ನಲಾಗಿದೆ.

ಇಂದು ಶಾಶ್ವತ ಪೇಸ್ ಮೇಕರ್ ಅಳವಡಿಸುವ ಕಾರ್ಯ ನಡೆದಿದ್ದು, ಸದ್ಯ ಅವರು ಐಸಿಯುಲ್ಲಿದ್ದಾರೆ. ಚಿಕಿತ್ಸೆಗೆ ಸ್ಪಂದಿಸಿದ್ದಾರೆ ಎಂದು ತಿಳಿದುಬಂದಿದೆ.

ಮೂರು ದಿನದ ಬಳಿಕ ದೊಡ್ಡಣ್ಣ ಅವರನ್ನು ಡಿಸ್ಚಾರ್ಜ್ ಮಾಡಲಾಗುತ್ತದೆ ಎಂದು ಜಯದೇವ ಆಸ್ಪತ್ರೆಯ ನಿರ್ದೇಶಕ ಡಾ. ಮಂಜುನಾಥ್ ತಿಳಿಸಿರುವುದಾಗಿ ವರದಿಯಾಗಿದೆ.

SCROLL FOR NEXT