ಪುನೀತ್ 
ಸಿನಿಮಾ ಸುದ್ದಿ

ಪುನೀತ್ ರಾಜಕುಮಾರ್ ಕನಸಿನ ಯೋಜನೆ 'ಗಂಧದ ಗುಡಿ' ಟೈಟಲ್ ಟ್ರೈಲರ್ ಡಿಸೆಂಬರ್ 6ಕ್ಕೆ ಬಿಡುಗಡೆ!

ದಿವಂಗತ ಕನ್ನಡ ಸೂಪರ್‌ಸ್ಟಾರ್ ಪುನೀತ್ ರಾಜ್‌ಕುಮಾರ್ ಅವರ ಕನಸಿನ ಯೋಜನೆಯಾದ ಗಂಧದ ಗುಡಿ ಟೈಟಲ್ ಟ್ರೈಲರ್ ಡಿಸೆಂಬರ್ 6ಕ್ಕೆ ಬಿಡುಗಡೆಯಾಗುತ್ತಿದೆ.

ಚೆನ್ನೈ: ದಿವಂಗತ ಕನ್ನಡ ಸೂಪರ್‌ಸ್ಟಾರ್ ಪುನೀತ್ ರಾಜ್‌ಕುಮಾರ್ ಅವರ ಕನಸಿನ ಯೋಜನೆಯಾದ ಗಂಧದ ಗುಡಿ ಟೈಟಲ್ ಟ್ರೈಲರ್ ಡಿಸೆಂಬರ್ 6ಕ್ಕೆ ಬಿಡುಗಡೆಯಾಗುತ್ತಿದೆ.

ಡಿಸೆಂಬರ್ 6ಕ್ಕೆ ಪುನೀತ್ ಅವರ ತಾಯಿ ಪಾರ್ವತಮ್ಮ ರಾಜ್‌ಕುಮಾರ್ ಅವರ ಜನ್ಮದಿನದಂದು ಟ್ರೈಲರ್ ಬಿಡುಗಡೆಗೊಳ್ಳಲಿದೆ. ಈ ಹಿಂದೆ ನವೆಂಬರ್ 1 ರಂದು ಚಿತ್ರ ಬಿಡುಗಡೆಯಾಗಬೇಕಿತ್ತು. ಆದರೆ ಪುನೀತ್ ಅವರ ಅಕಾಲಿಕ ಮರಣದಿಂದಾಗಿ ಬಿಡುಗಡೆ ಮುಂದೂಡಲಾಗಿತ್ತು.

ಮೂಲಗಳ ಪ್ರಕಾರ, ಚಿತ್ರಕ್ಕೆ ಗಂಧದ ಗುಡಿ ಎಂದು ಹೆಸರಿಡಲಾಗಿದೆ. ಇದು ಪವರ್ ಸ್ಟಾರ್ ಸಾಹಸಮಯ ಪಯಣವನ್ನು ಸೆರೆಹಿಡಿಯುವ ಸಿನಿಮೀಯ ಅನುಭವವಾಗಿದೆ. ಈ ಚಿತ್ರವು ಪುನೀತ್ ರಾಜ್‌ಕುಮಾರ್ ಮತ್ತು ವನ್ಯಜೀವಿ ಛಾಯಾಗ್ರಾಹಕ ಮತ್ತು ಚಲನಚಿತ್ರ ನಿರ್ಮಾಪಕ ಅಮೋಘವರ್ಷ ಅವರ ಸಹಯೋಗದಲ್ಲಿದೆ ಎಂದು ವರದಿಯಾಗಿದೆ. ಇದಕ್ಕೆ ಅಜನೀಶ್ ಲೋಕನಾಥ್ ಸಂಗೀತ ಸಂಯೋಜನೆ ನೀಡಿದ್ದಾರೆ.

ಅಕ್ಟೋಬರ್‌ನಲ್ಲಿ ಪುನೀತ್ ರಾಜ್‌ಕುಮಾರ್ ಅವರು ಟ್ವೀಟ್ ಮಾಡಿದ್ದು ಬಳಿಕ ಈ ನಿಗೂಢ ಯೋಜನೆ ಕುರಿತು ಊಹಾಪೋಹಗಳು ಹೆಚ್ಚಾಗಿತ್ತು. 'ಕಥೆಯು ದಶಕಗಳ ಹಿಂದೆ ಹುಟ್ಟಿತ್ತು. ನಮ್ಮ ಜನರು, ನಮ್ಮ ನೆಲದ ವೈಭವ. ನಮ್ಮ ತಳಸಮುದಾಯಗಳು ಪ್ರಪಂಚದಾದ್ಯಂತ ಹರಡಿಕೊಂಡಿವೆ. ಪೀಳಿಗೆಗೆ ಸ್ಫೂರ್ತಿ ಅದಮ್ಯವಾಗಿತ್ತು. ಆ ಇತಿಹಾಸವನ್ನು ಮೆಲುಕು ಹಾಕುವ ಸಮಯ ಬಂದಿದೆ' ಎಂದು ಬರೆದುಕೊಂಡಿದ್ದರು.

ಗಂಧದ ಗುಡಿಯನ್ನು ಪುನೀತ್ ರಾಜ್‌ಕುಮಾರ್ ಅವರ ಪಿಆರ್‌ಕೆ ಪ್ರೊಡಕ್ಷನ್ಸ್ ಮತ್ತು ಮಡ್‌ಸ್ಕಿಪ್ಪರ್ ನಿರ್ಮಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಮೈಸೂರು ದಸರಾಕ್ಕೆ ಕೊಪ್ಪಳದ ಗವಿಸಿದ್ದೇಶ್ವರ ಶ್ರೀಗಳಿಂದ ಅಧಿಕೃತ ಚಾಲನೆ

4 ಜನರಿಗೆ ಒಂದೇ ಟಿಕೆಟ್! ಸಾರಿಗೆ ಇಲಾಖೆಯಲ್ಲಿ ಡೀಸೆಲ್ ಬೆನ್ನಲ್ಲೇ ಟಿಕೆಟ್ ರೋಲ್ ಕೊರತೆ

ದೆಹಲಿಯಲ್ಲಿ ಹೈಡ್ರಾಮಾ: ವಿಮಾನ ನಿಲ್ದಾಣದಲ್ಲಿ ಬಂಧನಕ್ಕೊಳಗಾಗಿದ್ದ CJP ನಾಯಕರಾದ ದೀಪ್ಕೆ, ರಾಂಕಾ, ದಾಸ್ ಕೊನೆಗೂ ಬಿಡುಗಡೆ, 1 ವರ್ಷ ಶಾಂತಿ ಕಾಪಾಡುವಂತೆ ಷರತ್ತು..!

Riyadh ವಿಮಾನ ನಿಲ್ದಾಣದ ಮೇಲೆ ಕ್ಷಿಪಣಿ ದಾಳಿ: 12 ಮಂದಿ ಸಾವು, 300ಕ್ಕೂ ಹೆಚ್ಚು ಜನರಿಗೆ ಗಾಯ

Operation Sindoor ನಮ್ಮ ಆತ್ಮರಕ್ಷಣೆಯ ಕ್ರಮ, ಪರಮಾಣು ಬೆದರಿಕೆಗೆ ಎಂದಿಗೂ ಮಣಿಯಲ್ಲ: 3 'ಲಕ್ಷ್ಮಣ ರೇಖೆ' ಎಳೆದು ಪಾಕ್'ಗೆ ಭಾರತ ಖಡಕ್ ಎಚ್ಚರಿಕೆ..!