ನಟ ಶಿವರಾಂ(ಸಂಗ್ರಹ ಚಿತ್ರ) 
ಸಿನಿಮಾ ಸುದ್ದಿ

ಹಿರಿಯ ನಟ ಶಿವರಾಂ ಆರೋಗ್ಯ ಸ್ಥಿತಿ ಮತ್ತಷ್ಟು ಗಂಭೀರ, ಚಿಕಿತ್ಸೆಗೆ ಸರಿಯಾಗಿ ಸ್ಪಂದಿಸುತ್ತಿಲ್ಲ: ಆಸ್ಪತ್ರೆ ವೈದ್ಯ ಡಾ. ಮೋಹನ್

ಕನ್ನಡ ಚಿತ್ರರಂಗದ ಹಿರಿಯ ನಟ ಶಿವರಾಂ ಅವರ ಆರೋಗ್ಯ ಸ್ಥಿತಿ ಮತ್ತಷ್ಟು ಕ್ಷೀಣಿಸಿದೆ ಎಂದು ಅವರಿಗೆ ಚಿಕಿತ್ಸೆ ನೀಡುತ್ತಿರುವ ಬೆಂಗಳೂರಿನ ಖಾಸಗಿ ಆಸ್ಪತ್ರೆಯ ವೈದ್ಯ ಡಾ. ಮೋಹನ್ ತಿಳಿಸಿದ್ದಾರೆ.

ಬೆಂಗಳೂರು: ಕನ್ನಡ ಚಿತ್ರರಂಗದ ಹಿರಿಯ ನಟ ಶಿವರಾಂ ಅವರ ಆರೋಗ್ಯ ಸ್ಥಿತಿ ಮತ್ತಷ್ಟು ಕ್ಷೀಣಿಸಿದೆ ಎಂದು ಅವರಿಗೆ ಚಿಕಿತ್ಸೆ ನೀಡುತ್ತಿರುವ ಬೆಂಗಳೂರಿನ ಖಾಸಗಿ ಆಸ್ಪತ್ರೆಯ ವೈದ್ಯ ಡಾ. ಮೋಹನ್ ತಿಳಿಸಿದ್ದಾರೆ.

ಅವರ ಆರೋಗ್ಯ ಸ್ಥಿತಿಗತಿ ಬಗ್ಗೆ ಇಂದು ಮಾಧ್ಯಮಗಳ ಮುಂದೆ ಮಾಹಿತಿ ನೀಡಿದ ವೈದ್ಯರು, ಶಿವರಾಂ ಅವರ ಮೆದುಳಿಗೆ ಮತ್ತಷ್ಟು ಹಾನಿಯಾಗಿದೆ. ಜೀವರಕ್ಷಕ ಸಪೋರ್ಟ್ ನಲ್ಲಿ ಸದ್ಯ ಇದ್ದಾರೆ. ಇನ್ನು ಅವರ ಆರೋಗ್ಯದಲ್ಲಿ ಸುಧಾರಣೆ ಆಗುವ ಭರವಸೆ ನಮಗೆ ಹೋಗಿದೆ, ಅವರ ಮೆದುಳು, ಹೃದಯ ಸ್ಪಂದಿಸುತ್ತಿಲ್ಲ, ತುಂಬಾ ಹೊತ್ತು ಅವರು ನಮ್ಮ ಜೊತೆ ಇರುವುದಿಲ್ಲ ಎನಿಸುತ್ತಿದೆ ಎಂದು ಭಾವುಕರಾಗಿ ಹೇಳಿದರು.

ಚಿಕಿತ್ಸೆ ಮುಂದುವರಿಸುತ್ತಿದ್ದೇವೆ, ಆದರೆ ಸ್ಪಂದಿಸುತ್ತಾರೆ ಎಂಬ ಆಶಾವಾದ ನಮಗೆ ಕಡಿಮೆಯಾಗುತ್ತಿದೆ, ಅವರ ಆರೋಗ್ಯ ಸುಧಾರಿಸುವುದು ತುಂಬಾ ಕಷ್ಟವಿದೆ. ಶಿವರಾಂ ಅವರ ಕುಟುಂಬಸ್ಥರು ನಮಗೆ ಸಾಧ್ಯವಾದಷ್ಟು ನಿಮ್ಮಿಂದಾದ ಪ್ರಯತ್ನ ಮಾಡಿ, ಹಿರಿಯ ಜೀವಕ್ಕೆ ಹಿಂಸೆ ನೀಡುವುದು ಬೇಡ ಎನ್ನುತ್ತಿದ್ದಾರೆ. ನಮ್ಮಿಂದಾದ ಪ್ರಯತ್ನ ಮಾಡುತ್ತೇವೆ ಎಂದರು.

ಅವರನ್ನು ಹಾಸಿಗೆಯಿಂದ ಶಿಫ್ಟ್ ಮಾಡಲು ಕಷ್ಟ, ಭಯವಾಗುತ್ತಿದೆ, ಹೀಗಾಗಿ ಎಂಆರ್ ಐ ಸ್ಕ್ಯಾನ್ ಮಾಡಲು ಸಾಧ್ಯವಾಗುತ್ತಿಲ್ಲ, ಬಿಪಿ ಮತ್ತೆ ಇಳಿಕೆಯಾಗಬಹುದು ಎಂದೆನಿಸುತ್ತದೆ, ಸದ್ಯ ಶಾಂತವಾಗಿ ಮಲಗಿದ್ದಾರೆ ಎಂದರು. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಸಂಪುಟ ಸಲಹೆ ಮೇರೆಗೆ KPSC ಅಧ್ಯಕ್ಷ ಸಾಹುಕಾರ್ ರನ್ನು ಮತ್ತೆ ಅಮಾನತು ಮಾಡಿದ ರಾಜ್ಯಪಾಲ ಗೆಹ್ಲೋಟ್!

SIR ವೇಳೆ 1.08 ಕೋಟಿಗೂ ಅಧಿಕ ಮತದಾರರು ASDDO ಪಟ್ಟಿಗೆ: ಆಕ್ಷೇಪಣೆ ಸಲ್ಲಿಕೆ ಅವಧಿ ವಿಸ್ತರಿಸಬೇಕು- CECಗೆ ಸಿಎಂ ಶಿವಕುಮಾರ್ ಪತ್ರ!

ಕನಸು ಕೊನೆಗೂ ನನಸು: ಲಿಂಗ ಬದಲಿಸಿಕೊಂಡಿದ್ದ Anaya Bangarಗೆ ಕ್ರಿಕೆಟ್‌ಗೆ ಮರಳಲು ಗ್ರೀನ್ ಸಿಗ್ನಲ್!

ರಾಜ್ಯದಲ್ಲಿ ಮಳೆ ಅಭಾವ: ನಾಲ್ಕು ಕಂದಾಯ ವಿಭಾಗಗಳಲ್ಲಿ ಮೋಡ ಬಿತ್ತನೆ; 27 ಕೋಟಿ ರೂ ವೆಚ್ಚ- ಜಲ ಸಂಪನ್ಮೂಲ ಸಚಿವ ಚಲುವರಾಯಸ್ವಾಮಿ!

ಮಂಡ್ಯ ಜೈಲಿನ ಕರ್ಮಕಾಂಡ ಬಯಲು: ಆಸ್ಪತ್ರೆ​​ ವಾರ್ಡ್​​​ನಲ್ಲಿ ಮಹಿಳೆ​​ ಜೊತೆ ಸಿಕ್ಕಿಬಿದ್ದ ವಿಚಾರಣಾಧೀನ ಸರ್ಕಾರಿ ಅಧಿಕಾರಿ!