ಸಂಪದ ಹುಲಿವಾನ 
ಸಿನಿಮಾ ಸುದ್ದಿ

'ರೈಡರ್' ಜೊತೆ ಅದೃಷ್ಟ ಪರೀಕ್ಷೆಗೆ 'ಮಿಥುನ ರಾಶಿ' ನಟಿ ಸಂಪದ ಹುಲಿವಾನ ಮುಂದು

ಕಿರುತೆರೆಯಲ್ಲಿ ಧಾರಾವಾಹಿಯಲ್ಲಿ ನಟಿಸುತ್ತಿದ್ದ ಸಂಪದ ಹುಲಿವಾನ ನಿಖಿಲ್ ಕುಮಾರಸ್ವಾಮಿ ಅಭಿನಯದ ರೈಡರ್ ಸಿನಿಮಾ ಮೂಲಕ  ಸ್ಯಾಂಡಲ್ ವುಡ್ ನಲ್ಲಿ ಅದೃಷ್ಟ ಪರೀಕ್ಷೆ ಮುಂದಾಗಿದ್ದಾರೆ.

ಕಿರುತೆರೆಯಲ್ಲಿ ಧಾರಾವಾಹಿಯಲ್ಲಿ ನಟಿಸುತ್ತಿದ್ದ ಸಂಪದ ಹುಲಿವಾನ ನಿಖಿಲ್ ಕುಮಾರಸ್ವಾಮಿ ಅಭಿನಯದ ರೈಡರ್ ಸಿನಿಮಾ ಮೂಲಕ  ಸ್ಯಾಂಡಲ್ ವುಡ್ ನಲ್ಲಿ ಅದೃಷ್ಟ ಪರೀಕ್ಷೆ ಮುಂದಾಗಿದ್ದಾರೆ.

ಮಿಥುನರಾಶಿ ಧಾರಾವಾಹಿಯಲ್ಲಿ ನಾನು 10 ತಿಂಗಳು ಕೆಲಸ ಮಾಡಿದೆ, ನನ್ನ ವಿದ್ಯಾಭ್ಯಾಸಕ್ಕಾಗಿ ಧಾರಾವಾಹಿಯಿಂದ ಹೊರಬಂದೆ, ಆನಂತರ ರೈಡರ್ ನಲ್ಲಿ ಕೆಲಸ ಮಾಡಲು ಅವಕಾಶ ದೊರೆಯಿತು. ಹಿರಿತೆರೆಗೆ ಕಾಲಿಡಲು ಇದು ನನಗೆ ಸುವರ್ಣವಕಾಶ ಎಂದು ನನಗನಿಸಿತು ಎಂದು ಸಂಪದ ಹೇಳಿದ್ದಾರೆ.

ವಿಜಯ್ ಕುಮಾರ್ ಕೊಂಡ ನಿರ್ದೇಶನದ ರೈಡರ್ ಸಿನಿಮಾದಲ್ಲಿ ಕಾಶ್ಮೀರ ಪರ್ದೇಸಿ ನಾಯಕಿಯಾಗಿದ್ದು, ಸಂಪದ ಎರಡನೇ ನಾಯಕಿಯಾಗಿ ನಟಿಸಿದ್ದಾರೆ.  ನಿಖಿಲ್ ಜೊತೆ ನಟಿಸುತ್ತಿರುವುದು ಖುಷಿ ತಂದಿದೆ,  ಧಾರಾವಾಹಿಗಿಂತ ಸಿನಿಮಾ ಸೆಟ್ ವಿಭಿನ್ನವಾಗಿದೆ, ದೊಡ್ಡ ಚಿತ್ರಗಳ ಭಾಗವಾಗುತ್ತಿರುವ ತಂತ್ರಜ್ಞರ ಜೊತೆ ಕೆಲಸ ಮಾಡುವುದು ತುಂಬಾ ಖುಷಿ ಕೊಡುತ್ತಿದೆ ಎಂದು ಹೇಳಿದ್ದಾರೆ.

ಸಂಪದ ಅವರು ರಾಜ್ ತರುಣ್, ಸಂದೀಪ್ ಮಾಧವ್ ಅಭಿನಯದ ಮಾಸ್ ಮಹಾರಾಜು ಚಿತ್ರದ ಮೂಲಕ ತೆಲುಗು ಚೊಚ್ಚಲ ಚಿತ್ರದಲ್ಲಿ ಅಭಿನಯಿಸುತ್ತಿದ್ದಾರೆ.ನಾನು ಪ್ರಸ್ತುತ ನಟಿಯಾಗಿ ನನ್ನ ಕೆಲಸವನ್ನು ಆನಂದಿಸುತ್ತಿದ್ದೇನೆ ಮತ್ತು ನನ್ನ ಇಂಟೀರಿಯರ್ ಡಿಸೈನಿಂಗ್ ಅಧ್ಯಯನವನ್ನು ಸಹ ಮಾಡುತ್ತಿದ್ದೇನೆ" ಎಂದು ಯುವ ಪ್ರತಿಭೆ ಸಂಪದ ಹೇಳಿದ್ದಾರೆ.

ಡಿಸೆಂಬರ್ 24 ರಂದು ಬಿಡುಗಡೆಯಾಗಲಿರುವ ರೈಡರ್, ಚಂದ್ರು ಮನೋಹರನ್ ಅವರ ಲಹರಿ ಫಿಲ್ಮ್ಸ್ ಮತ್ತು ಸುನೀಲ್ ಗೌಡ ಅವರ ಶಿವನಂದಿ ಎಂಟರ್ಟೈನ್ಮೆಂಟ್ಸ್ ಸಹಯೋಗದೊಂದಿಗೆ ನಿರ್ಮಾಣವಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪ್ರದೋಶ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್; 'ದಾಸ'ನಿಗೆ ಬಿಗ್ ಶಾಕ್!

Congress ಶಾಸಕ ಪ್ರದೀಪ್ ಈಶ್ವರ್ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್ ಜಾರಿ, ಬಂಧನ ಭೀತಿ!

BJP-RSS ನಡುವೆ ಬಿರುಕು: ಸ್ಫೋಟಕ ಕಾರಣ ಬಿಚ್ಚಿಟ್ಟ ಅಭಿಜೀತ್ ದೀಪ್ಕೆ

ಜಾರ್ಖಂಡ್‌ ವಿದ್ಯಾರ್ಥಿಗಳ ಪ್ರತಿಭಟನೆ ವೇಳೆ ಹೋರಾಗಾರ್ತಿಗೆ 38 ಮಂದಿ ಲೈಂಗಿಕ ಕಿರುಕುಳ: ಎಫ್‌ಐಆರ್‌ ದಾಖಲು, ‘JMM ಗೂಂಡಾಗಳ’ ಕೃತ್ಯ ಎಂದ ಬಿಜೆಪಿ

SIR ವಿರುದ್ಧ 'ಚುನಾವಣಾ ಆಯೋಗ ಚಲೋ' ಘೋಷಿಸಿದ ಪ್ರಕಾಶ್ ರಾಜ್; ಆಯುಕ್ತರ ರಾಜೀನಾಮೆಗೆ ಆಗ್ರಹ