ಹಂಬಲ್ ಪೊಲಿಟಿಷಿಯನ್ ನಾಗರಾಜ್ ಸ್ಟಿಲ್ 
ಸಿನಿಮಾ ಸುದ್ದಿ

ಜನವರಿ 6 ರಿಂದ ವೂಟ್ ಸೆಲೆಕ್ಟ್ ನಲ್ಲಿ 'ಹಂಬಲ್ ಪೊಲಿಟೀಷಿಯನ್ ನೊಗರಾಜ್' ವೆಬ್ ಸೀರಿಸ್‌

‘ಹಂಬಲ್ ಪೊಲಿಟಿಷಿಯನ್ ನಾಗರಾಜ್​’ ಕಥೆ ವೆಬ್​ ಸಿರೀಸ್​  ರೂಪದಲ್ಲಿ ಬರುತ್ತಿದೆ. ವೂಟ್​ ಸೆಲೆಕ್ಟ್​ ಮೂಲಕ ಪ್ರೇಕ್ಷಕರನ್ನು ರಂಜಿಸಲು ಸಜ್ಜಾಗಿರುವ ಈ ವೆಬ್​ ಸರಣಿಯ ಟೀಸರ್​ ಈಗ ಬಿಡುಗಡೆ ಆಗಿದೆ.

ದಾನಿಶ್​ ಸೇಠ್​ ಅವರ ಪ್ರತಿಭೆ ಬಗ್ಗೆ ಹೊಸದಾಗಿ ಹೇಳಬೇಕಿಲ್ಲ. ನಟ, ನಿರೂಪಕನಾಗಿ ಅವರು ಈಗಾಗಲೇ ಗಮನ ಸೆಳೆದಿದ್ದಾರೆ. ಆರ್​ಸಿಬಿ ಇನ್​ಸೈಡರ್​ ಆಗಿಯೂ ಅವರು ವಿಶ್ವಾದ್ಯಂತ ಫೇಮಸ್​ ಆಗಿದ್ದಾರೆ. ಅವರು ಅಭಿನಯಿಸಿರುವ ‘ಫ್ರೆಂಚ್​​ ಬಿರಿಯಾನಿ’, ‘ಹಂಬಲ್ ಪೊಲಿಟಿಷಿಯನ್ ನಾಗರಾಜ್’ ಚಿತ್ರಗಳನ್ನು ಜನರು ಮೆಚ್ಚಿಕೊಂಡಿದ್ದಾರೆ.

ಈಗ ಅವರ ‘ಹಂಬಲ್ ಪೊಲಿಟಿಷಿಯನ್ ನಾಗರಾಜ್​’ ಕಥೆ ವೆಬ್​ ಸಿರೀಸ್​  ರೂಪದಲ್ಲಿ ಬರುತ್ತಿದೆ. ವೂಟ್​ ಸೆಲೆಕ್ಟ್​ ಮೂಲಕ ಪ್ರೇಕ್ಷಕರನ್ನು ರಂಜಿಸಲು ಸಜ್ಜಾಗಿರುವ ಈ ವೆಬ್​ ಸರಣಿಯ ಟೀಸರ್​ ಈಗ ಬಿಡುಗಡೆ ಆಗಿದೆ. “ಹಂಬಲ್ ಪೊಲಿಟೀಷಿಯನ್ ನೊಗ್‌ರಾಜ್” ವೆಬ್ ಸೀರಿಸ್‌ ನ ಮೊದಲ ಟೀಸರ್ ಡಿಸೆಂಬರ್​ 17ರಂದು ಬಿಡುಗಡೆಯಾಗಿದ್ದು, ಜನವರಿ 6ಕ್ಕೆ ಅದ್ಧೂರಿಯಾಗಿ ವೂಟ್ ಸೆಲೆಕ್ಟ್  ನಲ್ಲಿ ಬಿಡುಗಡೆಯಾಗಲಿದೆ.

ಹಂಬಲ್ ಪೊಲಿಟೀಷಿಯನ್ ನೊಗ್​ರಾಜ್​ ಕಾಮಿಡಿ ಆಧಾರಿತ ವೆಬ್‌ಸೀರಿಸ್ ಆಗಿದ್ದು, ಒಟ್ಟು 10 ಎಪಿಸೋಡ್ ಹೊಂದಿದೆ. ನಟರಾದ ಪ್ರಕಾಶ್ ಬೆಳಬಾಡಿ, ವಿನಯ್ ಚೆಂಡೂರ್ ಮತ್ತು ದಿಶಾ ಮದನ್ ಪ್ರಮುಖ ಪಾತ್ರದಲ್ಲಿ ನಟಿಸುತ್ತಿದ್ದಾರೆ. ಸಾದ್‌ಖಾನ್ ಈ ಚಿತ್ರವನ್ನು ನಿರ್ದೇಶಿಸಿದ್ದಾರೆ.

ಡ್ಯಾನಿಶ್ ಸೇಟ್ ಒಬ್ಬ ಸ್ವಯಂ ಸೇವಕನಾಗಿ ಸೇವೆ ಸಲ್ಲಿಸುತ್ತಾ ರಾಜಕೀಯ ಕ್ಷೇತ್ರಕ್ಕೆ ಕಾಲಿಡಲಿದ್ದಾರೆ. ನಂತರ ರೆಸಾರ್ಟ್ ರಾಜಕೀಯ, ಮುಖ್ಯಮಂತ್ರಿ ಸ್ಥಾನಕ್ಕೇರಲು ಏನೆಲ್ಲಾ ಸರ್ಕಸ್ ಮಾಡಲಿದ್ದಾರೆ ಹಾಗೂ ಅಧಿಕಾರಿ ದುರಾಸೆ, ಭ್ರಷ್ಟಾಚಾರ ವನ್ನು ವಿಡಂನಾತ್ಮಕವಾಗಿ ತೆಗೆದುಕೊಂಡು ಹೋಗುವ ಮೂಲಕ ರೋಲರ್ ಕೋಸ್ಟರ್ ಆಗಿ ನೋಗರಾಜ್ ಜನರನ್ನು ರಂಜಿಸಲಿದ್ದಾರೆ. 10 ಎಪಿಸೋಡ್‌ನ ಈ ವೆಬ್‌ಸೀರಿಸ್ ಪೂರ್ತಿ ಪಂಚಿಂಗ್ ಡೈಲಾಗ್ ಹಾಗೂ ನಗುವಿಕೆ‌ ಕೊರತೆ ಇಲ್ಲ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Pak ಬಣ್ಣ ಬಯಲು: ಕಾಶ್ಮೀರ ರಕ್ತದೋಕುಳಿಗೆ 10,000 ಉಗ್ರರ ರವಾನಿಸಿದ್ದ: Hafiz Saeed ಪಾಪಕೃತ್ಯ ಬಹಿರಂಗಪಡಿಸಿದ ಮೌಲ್ವಿ, Video ವೈರಲ್

ಸಾಮಾಜಿಕ ಭದ್ರತಾ ಪಿಂಚಣಿ ಯೋಜನೆ: ನಕಲಿ ಪಿಂಚಣಿದಾರರಿಗೆ ಸರ್ಕಾರ ಶಾಕ್; 18 ಲಕ್ಷ ಖಾತೆಗಳು ತಾತ್ಕಾಲಿಕ ಸ್ಥಗಿತ, ವಂಚನೆಯಲ್ಲಿ ಬೆಂಗಳೂರೇ ನಂ.1..!

ಭಾರತದ ಚುನಾವಣಾ ವ್ಯವಸ್ಥೆಯ ವಿಶ್ವಾಸಾರ್ಹತೆ ಬಗ್ಗೆ ಜಾಗತಿಕವಾಗಿ ಅತ್ಯುತ್ತಮ ಸ್ಪಷ್ಟ ಅಭಿಪ್ರಾಯ- ಟ್ರಂಪ್ ಹೇಳಿಕೆ ಬೆನ್ನಲ್ಲೇ MEA ಪ್ರತಿಕ್ರಿಯೆ!

ಮಾಜಿ ಸಚಿವ ಬಿ. ಸಿ. ನಾಗೇಶ್ ನಿಧನ: ನಾಳೆ ತಿಪಟೂರಿನಲ್ಲಿ ಅಂತ್ಯಕ್ರಿಯೆ!

ಬೆಂಗಳೂರು ದಕ್ಷಿಣ ಜಿಲ್ಲೆಯಲ್ಲಿ ನಕಲಿ ಔಷಧಿ ಮರುಪ್ಯಾಕಿಂಗ್ ಬೃಹತ್ ಜಾಲ ಪತ್ತೆ: 5 ಕೋಟಿ ರೂ. ಮೌಲ್ಯದ ವಸ್ತುಗಳು ವಶಕ್ಕೆ!