ಅಶ್ವಿನಿ ಮತ್ತು ಪುನೀತ್ ರಾಜ್ ಕುಮಾರ್ 
ಸಿನಿಮಾ ಸುದ್ದಿ

ದೊಡ್ಡತನ ಮೆರೆದ ದೊಡ್ಮನೆ ಸೊಸೆ: ಸಿನಿಮಾಗಾಗಿ ಪುನೀತ್​ ಪಡೆದಿದ್ದ ಅಡ್ವಾನ್ಸ್​ ಹಣ ನಿರ್ಮಾಪಕರಿಗೆ ಹಿಂದಿರುಗಿಸಿದ ಅಶ್ವಿನಿ!

ಸಿನಿಮಾ ಇಂಡಸ್ಟ್ರಿಯಲ್ಲಿ ಸಂಭಾವನೆ ವಿಚಾರದಲ್ಲಿ ಜಗಳ, ವೈಮನಸ್ಸು ಏರ್ಪಟ್ಟ ಸಾಕಷ್ಟು ಉದಾಹರಣೆ ಇದೆ. ನಿರ್ಮಾಪಕರು ಸಂಭಾವನೆ ಕೊಟ್ಟಿಲ್ಲ ಎಂದು ದೂರುವ ಅನೇಕ ನಟ/ನಟಿಯರಿದ್ದಾರೆ.

ಬೆಂಗಳೂರು: ಸಿನಿಮಾ ಇಂಡಸ್ಟ್ರಿಯಲ್ಲಿ ಸಂಭಾವನೆ ವಿಚಾರದಲ್ಲಿ ಜಗಳ, ವೈಮನಸ್ಸು ಏರ್ಪಟ್ಟ ಸಾಕಷ್ಟು ಉದಾಹರಣೆ ಇದೆ. ನಿರ್ಮಾಪಕರು ಸಂಭಾವನೆ ಕೊಟ್ಟಿಲ್ಲ ಎಂದು ದೂರುವ ಅನೇಕ ನಟ/ನಟಿಯರಿದ್ದಾರೆ. ಪರಿಸ್ಥಿತಿ ಹೀಗಿರುವಾಗ ಪುನೀತ್​ ಕುಟುಂಬದವರು ಮತ್ತೊಮ್ಮೆ ದೊಡ್ಡತನ ಮೆರೆದಿದ್ದಾರೆ.

ಪುನೀತ್​ ನಿಧನರಾಗುವುದಕ್ಕೂ ಮೊದಲು ಅನೇಕ ಚಿತ್ರಗಳನ್ನು ಒಪ್ಪಿಕೊಂಡಿದ್ದರು. ಕೆಲವು ಚಿತ್ರಗಳು ಪೂರ್ಣಗೊಂಡಿವೆ. ಉಳಿದ ಹಲವು ಚಿತ್ರಗಳು ಅರ್ಧಕ್ಕೆ ನಿಂತಿವೆ. ಈ ಪೈಕಿ ಕೆಲ ಸಿನಿಮಾಗಳಿಗೆ ಪುನೀತ್​ ಅಡ್ವಾನ್ಸ್​ ಕೂಡ ಪಡೆದುಕೊಂಡಿದ್ದರು. ಈ ಪೈಕಿ ಒಂದು ಸಿನಿಮಾದ ಅಡ್ವಾನ್ಸ್​ ಅನ್ನು ಪುನೀತ್ ಪತ್ನಿ ಅಶ್ವಿನಿ ಅವರು ನಿರ್ಮಾಪಕರಿಗೆ​ ಹಿಂದಿರುಗಿಸಿದ್ದಾರೆ ಎನ್ನಲಾಗಿದೆ.

ಈ ಬಗ್ಗೆ ಹಿರಿಯ ಪತ್ರಕರ್ತ ಶಶಿಧರ್​ ಭಟ್​ ಅವರು ಫೇಸ್​ಬುಕ್​ನಲ್ಲಿ ಬರೆದುಕೊಂಡಿದ್ದಾರೆ. ‘ಅವರು ಕನ್ನಡ ಸಿನಿಮಾ ನಿರ್ಮಾಪಕರು. ಅವರು ನನ್ನ ಪಕ್ಕ ಕುಳಿತಿದ್ದರು. ಆಗ ಅವರಿಗೆ ದೂರವಾಣಿ ಕರೆಯೊಂದು ಬಂತು. ದೂರವಾಣಿ ಕರೆ  ಮಾಡಿದವರು, ‘ಪುನೀತ್​ ತಮ್ಮ ಡೈರಿಯಲ್ಲಿ ಬರೆದಿದ್ದಾರೆ.

ನಿಮ್ಮಿಂದ ಸಿನಿಮಾ ಒಂದರ ಮುಂಗಡವಾಗಿ 2.50 ಕೋಟಿ ಪಡೆದಿದ್ದರಂತೆ. ನಾಳೆ ನೀವು ಮನೆಗೆ ಬಂದು ಈ ಹಣವನ್ನು ಪಡೆದುಕೊಂಡು ಹೋಗಿ’ ಎಂದರು ಆ ಮಹಿಳೆ. ಹೀಗೆ ಹೇಳಿದ‌ ಮಹಿಳೆ ಅಶ್ವಿನಿ ಪುನೀತ್ ರಾಜ್​ಕುಮಾರ್. ಇದು ಪ್ರಾಮಾಣಿಕತೆ. ಕನ್ನಡದ ಜನ ಈ ಕುಟುಂಬವನ್ನು ಪ್ರೀತಿಸುವುದು ಈ ಕಾರಣಕ್ಕಾಗಿ. ಕನ್ನಡಿಗರ ಆರಾಧ್ಯ ದೈವ ರಾಜ್ ಕುಟುಂಬ ಇರುವುದೇ ಹೀಗೆ’ ಎಂದು ಅವರು ಬರೆದುಕೊಂಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

30 ನಿಮಿಷಗಳಲ್ಲಿ ಹಿಂದಕ್ಕೆ ಹೋಗಿ: ಶಾಂತಿ ಮಾತುಕತೆ ಮಧ್ಯೆ ಹಾರ್ಮುಜ್'ಗೆ ನುಗ್ಗಿದ ಅಮೆರಿಕದ Destroyer ಯುದ್ಧನೌಕೆಗೆ ಇರಾನ್ ಎಚ್ಚರಿಕೆ!

"ಇರಾನ್ ದೊಡ್ಡ ಮಟ್ಟದಲ್ಲಿ ಸೋಲುತ್ತಿದೆ": ಮಾತುಕತೆ ಮುಕ್ತಾಯಕ್ಕೂ ಮುನ್ನ ಟ್ರಂಪ್ ಘೋಷಣೆ

IPL 2026: ಸ್ಯಾಮ್ಸನ್ ಬ್ಯಾಟಿಂಗ್ ಅಬ್ಬರ; DC ವಿರುದ್ಧ CSK ಗೆ 23 ರನ್ ಗಳ ಭರ್ಜರಿ ಜಯ

ಖ್ಯಾತ ಗಾಯಕಿ ಆಶಾ ಭೋಸ್ಲೆಗೆ ಹೃದಯಾಘಾತ: ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲು

IPL 2026: ಚೆನ್ನೈ ಪರ ಸಂಜು ಸ್ಯಾಮ್ಸನ್ ಸ್ಫೋಟಕ ಬ್ಯಾಟಿಂಗ್; MS ಧೋನಿ ದಾಖಲೆ ಪುಡಿ; ದಿಗ್ಗಜರ ಗುಂಪಿಗೆ ಸೇರ್ಪಡೆ

SCROLL FOR NEXT