ಅವತಾರ ಪುರುಷ ಚಿತ್ರದಲ್ಲಿ ಆಶಿಕಾ ರಂಗನಾಥ್ ಹಾಗೂ ಶರಣ್. 
ಸಿನಿಮಾ ಸುದ್ದಿ

ಜನವರಿ 14ಕ್ಕೆ ಶರಣ್ ಅಭಿನಯದ 'ಅವತಾರ ಪುರುಷ' ಬಿಡುಗಡೆ

ರಾಜ್ಯದಲ್ಲಿ ಕೊರೋನಾ ಸಾಂಕ್ರಾಮಿಕ ರೋಗ ವ್ಯಾಪಕವಾಗಿದ್ದ ಹಿನ್ನೆಲೆಯಲ್ಲಿ ಚಿತ್ರ ಬಿಡುಗಡೆ ದಿನಾಂಕವನ್ನು ಮುಂದೂಡಿಕೆ ಮಾಡಿದ್ದ ಅವತಾರ ಪುರುಷ ಚಿತ್ರ ತಂಡ, ಇದೀಗ ಜನವರಿ 14ಕ್ಕೆ ಚಿತ್ರ ಬಿಡುಗಡೆ ಮಾಡಲು ನಿರ್ಧರಿಸಿದೆ.

ರಾಜ್ಯದಲ್ಲಿ ಕೊರೋನಾ ಸಾಂಕ್ರಾಮಿಕ ರೋಗ ವ್ಯಾಪಕವಾಗಿದ್ದ ಹಿನ್ನೆಲೆಯಲ್ಲಿ ಚಿತ್ರ ಬಿಡುಗಡೆ ದಿನಾಂಕವನ್ನು ಮುಂದೂಡಿಕೆ ಮಾಡಿದ್ದ ಅವತಾರ ಪುರುಷ ಚಿತ್ರ ತಂಡ, ಇದೀಗ ಜನವರಿ 14ಕ್ಕೆ ಚಿತ್ರ ಬಿಡುಗಡೆ ಮಾಡಲು ನಿರ್ಧರಿಸಿದೆ.

ಡಿಸೆಂಬರ್ 10ರಂದು ಚಿತ್ರ ಬಿಡುಗಡೆ ಮಾಡಲು ಚಿತ್ರ ತಂಡ ಈ ಹಿಂದೆ ನಿರ್ಧರಿಸಿತ್ತು. ಆದರೆ, ಕೊರೋನಾ ಹಾಗೂ ಓಮಿಕ್ರಾನ್ ರೂಪಾಂತರಿ ವೈರಸ್ ಆತಂಕದಿಂದಾಗಿ ಚಿತ್ರ ಬಿಡುಗಡೆ ದಿನಾಂಕವನ್ನು ಮುಂದೂಡಿತ್ತು. ಇದೀಗ ಚಿತ್ರವನ್ನು ಸಂಕ್ರಾಂತಿ ಹಬ್ಬದ ದಿನದಂದು ಬಿಡುಗಡೆ ಮಾಡಲು ಚಿತ್ರ ತಂಡ ಮುಂದಾಗಿದೆ.

ಮುಂಬರುವ ಸಂಕ್ರಾಂತಿ ಹಬ್ಬಕ್ಕೆ ತೆಲುಗು ಹಾಗೂ ತಮಿಳು ಚಿತ್ರರಂಗದಲ್ಲಿ ಸಾಕಷ್ಟು ಚಿತ್ರಗಳು ಬಿಡುಗಡೆಯಾಗುತ್ತಿದ್ದು. ಕರ್ನಾಟಕದ ಜನರು ಕೂಡ ಚಿತ್ರವನ್ನು ನೋಡುವ ಮೂಲಕ ಹಬ್ಬವನ್ನು ಆಚರಿಸಬೇಕೆಂದು ನಿರ್ಮಾಪಕ ಪುಷ್ಕರ್ ಮಲ್ಲಿಕಾರ್ಜುನಯ್ಯ ಬಯಸಿದ್ದಾರೆ.

ಇದರಂತೆ ಸಂಕ್ರಾಂತಿ ಹಬ್ಬಕ್ಕೆ ಚಿತ್ರ ಬಿಡುಗಡೆ ಮಾಡಲು ನಿರ್ಧರಿಸಿದ್ದು, ಈ ಕುರಿತು ಚಿತ್ರ ತಂಡ ಹಾಗೂ ವಿವಿಧ ಪ್ರದರ್ಶಕರೊಂದಿಗೆ ಚರ್ಚೆಗಳಲ್ಲಿ ತೊಡಗಿದ್ದಾರೆ. ಎಲ್ಲವೂ ಅಂದುಕೊಂಡಂತೆ ಆದರೆ, ಚಿತ್ರ ಬಿಡುಗಡೆ ದಿನಾಂಕವನ್ನು ಚಿತ್ರ ನಿರ್ಮಾಣ ಸಂಸ್ಥೆ ಅಧಿಕೃತವಾಗಿ ಪ್ರಕಟಿಸಲಿದೆ.

ಶರಣ್‌-ಸುನಿ ಕಾಂಬಿನೇಷನ್‌ನಲ್ಲಿ ಮೂಡಿಬರುತ್ತಿರುವ 'ಅವತಾರ ಪುರುಷ' ಚಿತ್ರದ ಮೇಲೆ ದೊಡ್ಡ ಮಟ್ಟದ ನಿರೀಕ್ಷೆ ಇದೆ. ಪ್ರಮುಖ ಪಾತ್ರಗಳಲ್ಲಿ ಸಾಯಿ ಕುಮಾರ್‌, ಸುಧಾರಾಣಿ, ಶ್ರೀನಗರ ಕಿಟ್ಟಿ ಮುಂತಾದವರು ನಟಿಸಿದ್ದಾರೆ. ಚಿತ್ರಕ್ಕೆ ಅರ್ಜುನ್ ಜನ್ಯ ಸಂಗೀತ ನೀಡಿದ್ದು, ರಾಷ್ಟ್ರ ಪ್ರಶಸ್ತಿ ವಿಜೇತ ವಿಕ್ರಮ್ ಮೊರ್ ಅವರು ಚಿತ್ರಕ್ಕೆ ನೃತ್ಯ ಸಂಯೋಜನೆ ಮಾಡಿದ್ದಾರೆ. ವಿಲಿಯಮ್ ಡೇವಿಡ್ ಛಾಯಾಗ್ರಹಣದಲ್ಲಿ ಚಿತ್ರ ಮೂಡಿ ಬಂದಿದೆ.

ಶರಣ್‌ ನಟನೆಯ ‘ಅವತಾರಪುರುಷ’ ಚಿತ್ರ ಎರಡು ಭಾಗಗಳಲ್ಲಿ ಬರಲಿದ್ದು ‘ಅವತಾರ ಪುರುಷ-1’ ಹಾಗೂ ‘ಅವತಾರ ಪುರುಷ-2’ ಹೆಸರಿನಲ್ಲಿ ಸಿನಿಮಾ ಬಿಡುಗಡೆಯಾಗುತ್ತಿದೆ. ಆದರೆ, ಸಬ್‌ಟೈಟಲ್‌ ಮಾತ್ರ ಬೇರೆ ಬೇರೆ ಇಡಲಾಗಿದ್ದು, ಮೊದಲ ಭಾಗಗಕ್ಕೆ ‘ಅಷ್ಟದಿಗ್ಬಂಧನ ಮಂಡಲಕ’ ಹಾಗೂ ಎರಡನೇ ಪಾರ್ಟ್‌ಗೆ ‘ತ್ರಿಶಂಕು’ ಎನ್ನುವ ಸಬ್‌ ಟೈಟಲ್‌ ಇಡಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

Eiffel Tower ಇನ್ನು ನೆನಪು ಮಾತ್ರ?: ಪ್ರಸಿದ್ಧ ಸ್ಮಾರಕ ಕೆಡವುತ್ತಿರುವ ಬಗ್ಗೆ ಟ್ಯಾಪಿಯೋಕಾ ಟೈಮ್ಸ್ ಹೇಳಿದ್ದೇನು?

SCROLL FOR NEXT