ನಟ ನಿಖಿಲ್ ಕುಮಾರಸ್ವಾಮಿ 
ಸಿನಿಮಾ ಸುದ್ದಿ

ಕೇವಲ ಪ್ರಚಾರಕ್ಕಾಗಿ ಬಂದ್ ಮಾಡಿದರೆ ನಮ್ಮ ಬೆಂಬಲವಿಲ್ಲ: ನಟ ನಿಖಿಲ್ ಕುಮಾರಸ್ವಾಮಿ

ಕೇವಲ ಮಾಧ್ಯಮದಲ್ಲಿ ಪ್ರಚಾರ ಪಡೆಯಲು ಬಂದ್ ಮಾಡಿದರೆ ನಮ್ಮ ಬೆಂಬಲವಿರುವುದಿಲ್ಲ ಎಂದು ನಟ, ರಾಜಕಾರಣಿ ನಿಖಿಲ್ ಕುಮಾರಸ್ವಾಮಿ ಅವರು ಭಾನುವಾರ ಹೇಳಿದ್ದಾರೆ.

ರಾಮನಗರ: ಕೇವಲ ಮಾಧ್ಯಮದಲ್ಲಿ ಪ್ರಚಾರ ಪಡೆಯಲು ಬಂದ್ ಮಾಡಿದರೆ ನಮ್ಮ ಬೆಂಬಲವಿರುವುದಿಲ್ಲ ಎಂದು ನಟ, ರಾಜಕಾರಣಿ ನಿಖಿಲ್ ಕುಮಾರಸ್ವಾಮಿ ಅವರು ಭಾನುವಾರ ಹೇಳಿದ್ದಾರೆ.

ನಿಖಿಲ್ ಕುಮಾರಸ್ವಾಮಿ ಅವರು ಅಭಿನಯಿಸಿರುವ ರೈಡರ್ ಸಿನಿಮಾ ರಾಜ್ಯಾದ್ಯಂತ ಡಿಸೆಂಬರ್ 22ರಂದು ಬಿಡುಗಡೆಗೊಂಡಿದ್ದು, ಭರ್ಜರಿ ಪ್ರದರ್ಶನ ಕಾಣುತ್ತಿದೆ. ಇಂದು ಈ ಸಿನಿಮಾದ ಪ್ರಮೋಷನ್‍ಗಾಗಿ ರಾಮನಗರದ ಶಾನ್ ಚಿತ್ರಮಂದಿರಕ್ಕೆ ನಿಖಿಲ್ ಭೇಟಿ ನೀಡಿದ್ದರು.

ಈ ವೇಳೆ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, 31 ನೇ ತಾರೀಖು ಕರ್ನಾಟಕ ಬಂದ್ ಕರೆ ನೀಡಿರುವುದರಿಂದ ನಮ್ಮ ಚಿತ್ರರಂಗಕ್ಕೆ ಬಹಳ ದೊಡ್ಡ ಹೊಡೆತ ಬೀಳಲಿದೆ. 31ನೇ ದಿನಾಂಕ ಹಲವು ಕನ್ನಡ ಸಿನಿಮಾಗಳು ಬಿಡುಗಡೆ ಆಗಲಿದ್ದು, ಆ ಸಿನಿಮಾಗಳಿಗೆ ಹೊಡೆತ ಬೀಳಲಿದೆ. ನಮಗೆ ಮೊದಲ 3 ದಿನದ ಕಲೆಕ್ಷನ್ ಬಹಳ ಮುಖ್ಯ. ಆದರೆ ಆ ದಿನವೇ ಬಂದ್ ಮಾಡಿದರೆ ತೊಂದರೆಯಾಗುತ್ತದೆ. ಸಾರ್ವಜನಿಕರಿಗೆ ಸಹಾಯವಾಗುತ್ತದೆ ಎಂದರೆ  ಬಂದ್ ಮಾಡಲಿ. ಆದರೆ ಕೇವಲ ಮಾಧ್ಯಮದಲ್ಲಿ ಪ್ರಚಾರ ಪಡೆಯಲು ಬಂದ್ ಮಾಡಬಾರದು. ಆ ರೀತಿಯ ಬಂದ್‍ಗೆ ಯಾವುದೇ ಕಾರಣಕ್ಕೂ ನಾವು ಬೆಂಬಲಿಸುವುದಿಲ್ಲ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನಿರ್ಬಂಧದ ಹೊರತಾಗಿಯೂ ರಷ್ಯಾದಲ್ಲಿ ಇಳಿದ ಅಮೆರಿಕದ C-17 ಮಿಲಿಟರಿ ವಿಮಾನ: ಮಿಷನ್ ಮಾತ್ರ ನಿಗೂಢ!

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

2nd Test: ‘ಶ್ರೀಲಂಕಾ ಆಟಗಾರರ ವರ್ತನೆ ವೃತ್ತಿಪರವಾಗಿರಲಿಲ್ಲ’: ಬ್ಯಾಡ್ ಲೈಟ್ ವಿವಾದಕ್ಕೆ Sanjay Manjrekar ಕಿಡಿ

‘ಪ್ರಸಿದ್ಧ್ ಕೃಷ್ಣ ವಿಶ್ವದರ್ಜೆಯ ಬೌಲರ್ ಆಗಿ ಮಾರ್ಪಟ್ಟಿದ್ದಾರೆ’: ಕನ್ನಡಿಗನ ಶ್ಲಾಘಿಸಿದ ದಕ್ಷಿಣ ಆಫ್ರಿಕಾ ಮಾಜಿ ವೇಗಿ Morne Morkel