ಸಿನಿಮಾ ಸುದ್ದಿ

ಹೊಂಬಾಳೆ ಫಿಲ್ಮ್ಸ್ ಜೊತೆ ಮತ್ತೊಮ್ಮೆ ಕೈಜೋಡಿಸಿದ 'ಪವರ್ ಸ್ಟಾರ್': 'ದ್ವಿತ್ವ'ಗೆ ಲೂಸಿಯಾ ಪವನ್ ನಿರ್ದೇಶನ

Sumana Upadhyaya

ಬೆಂಗಳೂರು: ಹೊಂಬಾಳೆ ಫಿಲ್ಮ್ಸ್ ನಿರ್ಮಾಣ ಸಂಸ್ಥೆಯೊಂದಿಗೆ ಮತ್ತೊಮ್ಮೆ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಕೈಜೋಡಿಸುತ್ತಿದ್ದಾರೆ.

ವಿಜಯ್ ಕಿರಗಂದೂರು ಅವರ ಹೊಂಬಾಳೆ ಫಿಲ್ಮ್ಸ್ ನಿರ್ಮಾಣ ಸಂಸ್ಥೆಯಡಿ ದ್ವಿತ್ವ ಎಂಬ ಚಿತ್ರ ತಯಾರಾಗಲಿದ್ದು, ಕನ್ನಡದ ಕ್ರಿಯಾಶೀಲ ಚಲನಚಿತ್ರ ನಿರ್ದೇಶಕ, ಲೂಸಿಯಾ ಚಿತ್ರ ಖ್ಯಾತಿಯ ಪವನ್ ಕುಮಾರ್ ನಿರ್ದೇಶಿಸುತ್ತಿದ್ದಾರೆ.

ಚಿತ್ರದ ಫಸ್ಟ್ ಲುಕ್ ಪೋಸ್ಟರ್ ಇಂದು ಬಿಡುಗಡೆಯಾಗಿದೆ. ಇದೊಂದು ಸೈಕಲಾಜಿಕಲ್ ಥ್ರಿಲ್ಲರ್ ಸಿನೆಮಾವಾಗಿದೆ ಎಂದು ನಿರ್ಮಾಣ ಸಂಸ್ಥೆ ತಿಳಿಸಿದೆ. ಸೆಪ್ಟೆಂಬರ್ ನಲ್ಲಿ ಚಿತ್ರೀಕರಣ ಪ್ರಾರಂಭವಾಗಲಿದೆ.

SCROLL FOR NEXT