ರಜನಿ ಕಾಂತ್ ಅಭಿನಯದ ಬಹುನಿರೀಕ್ಷಿತ ‘ಅನ್ನತ್ತೆ’ ದೀಪಾವಳಿಗೆ ಬಿಡುಗಡೆ
ಸೂಪರ್ ಸ್ಟಾರ್ ರಜನಿಕಾಂತ್ ಅಭಿನಯದ ಮುಂದಿನ ಬಹುನಿರೀಕ್ಷಿತ 'ಅನ್ನತ್ತೆ' ಈ ಬಾರಿಯ ದೀಪಾವಳಿಗೆ ಬಿಡುಗಡೆಯಾಗಲಿದೆ.
ಚೆನ್ನೈ: ಸೂಪರ್ ಸ್ಟಾರ್ ರಜನಿಕಾಂತ್ ಅಭಿನಯದ ಮುಂದಿನ ಬಹುನಿರೀಕ್ಷಿತ 'ಅನ್ನತ್ತೆ' ಈ ಬಾರಿಯ ದೀಪಾವಳಿಗೆ ಬಿಡುಗಡೆಯಾಗಲಿದೆ.
ಈ ಚಿತ್ರವನ್ನು ನಿರ್ಮಾಣ ಮಾಡಿರುವ ಸನ್ ಪಿಕ್ಚರ್ಸ್ ಗುರುವಾರ ಈ ವಿಷಯವನ್ನು ತಿಳಿಸಿದೆ.ದೀಪಾವಳಿಗಾಗಿ ಅನ್ನತ್ತೆಗೆ ನೀವು ಸಿದ್ಧರಿದ್ದೀರಾ? ಎಂದು ಕಲಾನಿಧಿ ಮಾರನ್ ಮಾಲಿಕತ್ವದ ಸನ್ ಪಿಕ್ಚರ್ಸ್ ಪ್ರೇಕ್ಷಕರನ್ನು ಕೇಳಿದೆ.
ಶಿವ ನಿರ್ದೇಶನದ ಈ ಚಿತ್ರದಲ್ಲಿ ನಯನ ತಾರಾ, ಮೀನಾ, ಖುಷ್ಬೂ ಸುಂದರ್, ಪ್ರಕಾಶ್ ರಾಜ್ ಸೇರಿದಂತೆ ಮತ್ತಿತರ ಕಲಾವಿದರ ದಂಡೆ ಇದೆ. 2021 ನವೆಂಬರ್ 4ಕ್ಕೆ ಈ ಚಿತ್ರ ತೆರೆಗೆ ಅಪ್ಪಳಿಸಲಿದೆ. ಡಿ ಇಮಾನ್ ಅನ್ನತ್ತೆ ಚಿತ್ರಕ್ಕೆ ಸಂಗೀತ ಸಂಯೋಜಿಸಿದ್ದಾರೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.