ಅಪಘಾತಕ್ಕೀಡಾದ ಕಾರು 
ಸಿನಿಮಾ ಸುದ್ದಿ

ನಟ ಜಗ್ಗೇಶ್ ಕಿರಿಯ ಪುತ್ರ ಯತಿರಾಜು ಕಾರು ಅಪಘಾತ: ವಾಹನ ಸಂಪೂರ್ಣ ಜಖಂ, ಪ್ರಾಣಾಪಾಯದಿಂದ ಪಾರು 

ಕನ್ನಡದ ಹಿರಿಯ ನಟ ಜಗ್ಗೇಶ್ ಅವರ ಕಿರಿಯ ಪುತ್ರ ಯತಿರಾಜ್ ಚಲಾಯಿಸುತ್ತಿದ್ದ ಬಿಎಂಡಬ್ಲ್ಯು ಕಾರು ಗುರುವಾರ ಮಧ್ಯಾಹ್ನ ಅಪಘಾತಕ್ಕೀಡಾಗಿದೆ. 

ಬೆಂಗಳೂರು: ಕನ್ನಡದ ಹಿರಿಯ ನಟ ಜಗ್ಗೇಶ್ ಅವರ ಕಿರಿಯ ಪುತ್ರ ಯತಿರಾಜ್ ಚಲಾಯಿಸುತ್ತಿದ್ದ ಬಿಎಂಡಬ್ಲ್ಯು ಕಾರು ಗುರುವಾರ ಮಧ್ಯಾಹ್ನ ಅಪಘಾತಕ್ಕೀಡಾಗಿದೆ. 

ಬೆಂಗಳೂರು-ಹೈದರಾಬಾದ್ ಹೆದ್ದಾರಿಯಲ್ಲಿ ರಸ್ತೆ ಬದಿಯ ಮರಕ್ಕೆ ಡಿಕ್ಕಿ ಹೊಡೆದ ಕಾರಿನ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದೆ. ಚಿಕ್ಕಬಳ್ಳಾಪುರದ ಅಗಲಗುರ್ಕಿ ಎಂಬಲ್ಲಿ ಇಂದು ಮಧ್ಯಾಹ್ನ 12 ಗಂಟೆ ಸುಮಾರಿಗೆ ಅಪಘಾತ ಸಂಭವಿಸಿದ್ದು, ಏರ್ ಬ್ಯಾಗ್ ಓಪನ್ ಆಗಿದ್ದರಿಂದ ತೀವ್ರ ಪ್ರಮಾಣದ ಗಾಯಗಳು ಮತ್ತು ಪ್ರಾಣಾಪಾಯದಿಂದ ಯತಿರಾಜ್ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ.

ಕಾರು ಮರಕ್ಕೆ ಡಿಕ್ಕಿ ಹೊಡೆದ ತೀವ್ರತೆಗೆ ಮುಂಭಾಗದ ಟೈರು ಸ್ಫೋಟಗೊಂಡಿದೆ.ಅಪಘಾತ ಬಗ್ಗೆ ನಟ ಜಗ್ಗೇಶ್ ಟ್ವಿಟ್ಟರ್ ನಲ್ಲಿ ಮಾಹಿತಿ ನೀಡಿದ್ದು, ಕೊರೋನ ಬಂದಾಗಿನಿಂದ ಹೊರ ಹೋಗಿಲ್ಲಾ ಹೋಗಿಬರುತ್ತೇನೆ ಎಂದು ಅವನ ಅಮ್ಮನಿಗೆ ಹೇಳಿ ಯತಿರಾಜ್ ಹೊರಹೋಗಿದ್ದ. ಅವನ ಇಷ್ಟದ ರಸ್ತೆ ಬೆಂಗಳೂರಿನಿಂದ ಚಿಕ್ಕಬಳ್ಳಾಪುರ ಹೋಗಿ ಬರುವಾಗ ಅಡ್ಡ ಬಂದ ನಾಯಿ ರಕ್ಷಿಸಲು ಹೋಗಿ ರಸ್ತೆ ವಿಭಜಕ್ಕೆ ಹೊಡೆದು ಕಾರು ಪಕ್ಕದ ರಸ್ತೆಗೆ ಬಿದ್ದು ಅಪಘಾತವಾಗಿದೆ. 

ನಾನು ನಂಬಿರುವ ಗುರುರಾಯರ ಆಶೀರ್ವಾದ, ಶ್ರೀರಕ್ಷೆ ನನ್ನ ಮೇಲಿದೆ, ಪವಾಡ ರೀತಿಯಲ್ಲಿ ನನ್ನ ಮಗ ಯತಿರಾಜು ಒಂಚೂರು ಗಾಯ ಸಹ ಆಗದೆ ಪಾರಾಗಿದ್ದಾನೆ ಎಂದು ಬರೆದುಕೊಂಡಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಡಿಕೆಶಿ ಸಂಪುಟಕ್ಕೆ ಮತ್ತೆ ಸರ್ಜರಿ? ಭಾರಿ ಬದಲಾವಣೆ, 3-5 ಸಚಿವರಿಗೆ ಕೊಕ್?; ಮಹಿಳೆ ಸೇರಿ ಕೆಲ ರೆಬೆಲ್ ನಾಯಕರಿಗೆ ಅವಕಾಶ ಸಾಧ್ಯತೆ

2013ರ ಲೈಂಗಿಕ ದೌರ್ಜನ್ಯ ಪ್ರಕರಣ: Tehelka ಮಾಜಿ ಸಂಪಾದಕ ತರುಣ್ ತೇಜ್‌ಪಾಲ್‌ಗೆ ಸುಪ್ರೀಂ ಕೋರ್ಟ್‌ ಶಾಕ್‌; 2 ವಾರಗಳಲ್ಲಿ ಶರಣಾಗುವಂತೆ ಖಡಕ್ ಸೂಚನೆ..!

ವಿಮಾನ ಸುರಕ್ಷತೆಯಲ್ಲಿ ರಾಜಿಯಿಲ್ಲ: ಪೈಲಟ್‌ಗಳ ಡ್ರಗ್‌ ಟೆಸ್ಟ್‌ ನಿಯಮದಲ್ಲಿ ಮಹತ್ವದ ಬದಲಾವಣೆ, ವರ್ಷವಿಡೀ ಯಾದೃಚ್ಛಿಕ ತಪಾಸಣೆಗೆ ಕೇಂದ್ರ ಸರ್ಕಾರ ಮುಂದು..!

ಕಾಶ್ಮೀರಿ ಪಂಡಿತರ ನರಮೇಧ: 28 ವರ್ಷಗಳ ಬಳಿಕ Wandhama ಕೇಸ್ ಫೈಲ್ ರೀ-ಓಪನ್, ತನಿಖೆ ಪುನರಾರಂಭ..!

ಹಿರಿಯೂರು ಬಳಿ ಸಮರ್ಥ್ ಶಾಮನೂರು ಕಾರು ಅಪಘಾತ: ಕಾಂಗ್ರೆಸ್ ಶಾಸಕ ಅಪಾಯದಿಂದ ಪಾರು!