ಶೃತಿ ದಾಸ್ 
ಸಿನಿಮಾ ಸುದ್ದಿ

ಮೈ ಬಣ್ಣದ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನ: ಸೈಬರ್ ಠಾಣೆಯಲ್ಲಿ ದೂರು ದಾಖಲಿಸಿದ ನಟಿ

ತಮ್ಮ ಮೈ ಬಣ್ಣದ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನಕಾರಿಯಾಗಿ ಪದೇ ಪದೇ ಕೆಟ್ಟದಾಗಿ ಟ್ರೋಲ್ ಮಾಡುತ್ತಿದ್ದಾರೆ ಎಂದು ಆರೋಪಿಸಿ ಬಂಗಾಳಿ ನಟಿ ಶೃತಿ ದಾಸ್ ಅವರು ಕೋಲ್ಕತ್ತ ಸೈಬರ್ ಪೊಲೀಸರಿಗೆ ದೂರು ದಾಖಲಿಸಿದ್ದಾರೆ.

ಕೋಲ್ಕತ್ತಾ: ತಮ್ಮ ಮೈ ಬಣ್ಣದ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನಕಾರಿಯಾಗಿ ಪದೇ ಪದೇ ಕೆಟ್ಟದಾಗಿ ಟ್ರೋಲ್ ಮಾಡುತ್ತಿದ್ದಾರೆ ಎಂದು ಆರೋಪಿಸಿ ಬಂಗಾಳಿ ನಟಿ ಶೃತಿ ದಾಸ್ ಅವರು ಕೋಲ್ಕತ್ತ ಸೈಬರ್ ಪೊಲೀಸರಿಗೆ ದೂರು ದಾಖಲಿಸಿದ್ದಾರೆ.

ಕಳೆದ ಎರಡು ವರ್ಷದಿಂದ ಕೆಲವರು ಸಾಮಾಜಿಕ ಜಾಲತಾಣಗಳಲ್ಲಿ ನನ್ನ ಮೈ ಬಣ್ಣದ ಬಗ್ಗೆ ಟ್ರೋಲ್ ಮಾಡುತ್ತಿದ್ದಾರೆ. ಆರಂಭದಲ್ಲಿ ಇದನ್ನು ಉಪೇಕ್ಷಿಸಿದ್ದರೂ, ಇತ್ತೀಚಿನ ದಿನಗಳಲ್ಲಿ ಇದು ಜಾಸ್ತಿ ಆಗಿದೆ. ಇದು ಸಹಿಸಿಕೊಳ್ಳಲು ಅಸಾಧ್ಯ. ಸೈಬರ್ ಪೊಲೀಸರು ಟ್ರೋಲ್ ಮಾಡಿರುವವರ ಮೇಲೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.

25 ವರ್ಷದ ಶೃತಿ ದಾಸ್ 2019 ರಲ್ಲಿ ಬಂಗಾಳಿ 'ತ್ರಿನಯನಿ' ಮೂಲಕ ನಟನೆಗೆ ಪಾದಾರ್ಪಣೆ ಮಾಡಿದರು, ಕಳೆದ ಎರಡು ವರ್ಷಗಳಿಂದ ತನ್ನ ಸ್ಕಿನ್ ಕಲರ್ ಬಗ್ಗೆ ಟ್ರೋಲ್ ಸಹಿಸುತ್ತಿದ್ದಾರೆ. ಆದರೆ ಟ್ರೋಲ್ ಹೆಚ್ಚು ಹೆಚ್ಚು ವೈಯಕ್ತಿಕವಾಗುತ್ತಿರುವುದರಿಂದ ಅದನ್ನು ಇನ್ನು ಮುಂದೆ ಸಹಿಸಲು ಸಾಧ್ಯವಾಗದ ಹಂತಕ್ಕೆ ತಲುಪಿದೆ ಎಂದಿದ್ದಾರೆ. ಆರಂಭದಲ್ಲಿ, ಸುತ್ತಮುತ್ತಲಿನ ಎಲ್ಲರೂ ಟ್ರೋಲ್‌ಗಳನ್ನು ನಿರ್ಲಕ್ಷಿಸುವಂತೆ ಹೇಳಿದರು. ನಾನು ಕೂಡ ಹಾಗೆ ಮಾಡಿದೆ. ಆದರೆ ಬರಬರುತ್ತಾ ತೀರಾ ಕೆಟ್ಟದ್ದಾಗುತ್ತಿದೆ ಎಂದು ಬೇಸರ ವ್ಯಕ್ತ ಪಡಿಸಿದ್ದಾರೆ.

ತನ್ನನ್ನು ಗುರಿಯಾಗಿಸಿಕೊಂಡ ಅಸಹ್ಯ ಕಾಮೆಂಟ್‌ಗಳತ್ತ ಗಮನ ಸೆಳೆಯಲು ಕೋಲ್ಕತಾ ಪೊಲೀಸರನ್ನು ಫೇಸ್‌ಬುಕ್‌ನಲ್ಲಿ ಟ್ಯಾಗ್ ಮಾಡಿದ ನಟಿ, ಅದರ ಸೈಬರ್ ಸೆಲ್‌ಗೆ ವಿವರಗಳನ್ನು ಇಮೇಲ್ ಮಾಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT