ವಿನೋದ್ ಪ್ರಭಾಕರ್ 
ಸಿನಿಮಾ ಸುದ್ದಿ

ವಿನೋದ್ ಪ್ರಭಾಕರ್ ನಟನೆಯ 'ವರದ' ಸಿನಿಮಾ ಮೋಷನ್ ಪೋಸ್ಟರ್ ಜುಲೈ 8ಕ್ಕೆ ರಿಲೀಸ್

ಉದಯ ಪ್ರಕಾಶ್ ನಿರ್ದೇಶನದ ವರದ ಸಿನಿಮಾದಲ್ಲಿ ವಿನೋದ್ ಪ್ರಭಾಕರ್ ನಟಿಸಿದ್ದು ಜುಲೈ 8 ರಂದು ಮೋಷನ್ ಪೋಸ್ಟರ್ ರಿಲೀಸ್ ಆಗಲಿದೆ.

ಉದಯ ಪ್ರಕಾಶ್ ನಿರ್ದೇಶನದ ವರದ ಸಿನಿಮಾದಲ್ಲಿ ವಿನೋದ್ ಪ್ರಭಾಕರ್ ನಟಿಸಿದ್ದು ಜುಲೈ 8 ರಂದು ಮೋಷನ್ ಪೋಸ್ಟರ್ ರಿಲೀಸ್ ಆಗಲಿದೆ.

ಕಳ್ಳ ಮಳ್ಳ ಸುಳ್ಳ, ಡಿಕೆ, ಆಟೋರಾಜ, ಯೋಗಿ ಮುಂತಾದ ಸಿನಿಮಾಗಳನ್ನು ನಿರ್ದೇಶಿಸಿರುವ ಉದಯ ಪ್ರಕಾಶ್ ಕಮರ್ಷಿಯಲ್ ಎಂಟರೈಟನ್ ಸಿನಿಮಾ ನಿರ್ದೇಶನಕ್ಕಿಳಿದಿದ್ದಾರೆ. ರಾಬರ್ಟ್ ನಂಟರ ವಿನೋದ್ ಪ್ರಭಾಕರ್ ವರದ ಸಿನಿಮಾದಲ್ಲಿ ನಟಿಸುತ್ತಿದ್ದಾರೆ.

ಲಾಕ್​ಡೌನ್​ಗೂ ಮುನ್ನವೇ ವರದ ಚಿತ್ರದ ಬಹುತೇಕ ಚಿತ್ರೀಕರಣ ಮುಗಿದಿತ್ತಂತೆ. ಇದು ಬರೀ ಆ್ಯಕ್ಷನ್ ಚಿತ್ರ ಎಂದು ಹೇಳುವುದೂ ಕಷ್ಟ. ಏಕೆಂದರೆ, ಚಿತ್ರದಲ್ಲಿ ಅಪ್ಪ-ಮಗನ ನಡುವಿನ ಸೆಂಟಿಮೆಂಟ್ ಸಹ ಬಹಳ ಮುಖ್ಯವಾಗಿ ಬರುತ್ತಂತೆ.

ನಿರ್ದೇಶನದ ಜೊತೆ ಉದಯ್ ಪ್ರಕಾಶ್ ನಿರ್ಮಾಣದ ಹೊಣೆ ಕೂಡ ಹೊತ್ತಿದ್ದಾರೆ. ಬೆಂಗಳೂರು, ಮೈಸೂರು, ಉಡುಪಿ ಮತ್ತು ಕುಂದಾಪುರದಲ್ಲಿ ಸಿನಿಮಾ ಶೂಟಿಂಗ್ ಮಾಡಿದ್ದು, 60 ದಿನಗಳಲ್ಲಿ ಶೂಟಿಂಗ್ ಮುಗಿಸಲಾಗಿದೆ ಎಂದು ತಿಳಿಸಿದ್ದಾರೆ.

ಪ್ರದೀಪ್ ವರ್ಮಾ ಸಂಗೀತ ಸಂಯೋಜಿಸಿದರೆ, ಭಜರಂಗಿ ಆನಂದ್ ಅವರ ಛಾಯಾಗ್ರಹಣ ಈ ಚಿತ್ರಕ್ಕಿದೆ. ಈಗಾಗಲೇ ಬೆಂಗಳೂರು, ಕುಂದಾಪುರ, ಉಡುಪಿ ಮುಂತಾದ ಕಡೆ ಚಿತ್ರೀಕರಣ ಮುಗಿದಿದ್ದು, ಎಲ್ಲ ಅಂದುಕೊಂಡಂತೆ ಆದರೆ, ಚಿತ್ರ ಇದೇ ವರ್ಷ ಬಿಡುಗಡೆಯಾಗಲಿದೆ. ನಾಯಕಿಯಾಗಿ ಅಮಿತಾ ರಂಗನಾಥ್ ನಟಿಸಿದ್ದಾರೆ. ಜತೆಗೆ ಅನಿಲ್ ಸಿದ್ದು, ಅಶ್ವಿನಿ ಗೌಡ ಮುಂತಾದವರು ನಟಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

ಹಗರಣ ರಹಿತ ಹುದ್ದೆ ಭರ್ತಿಗೆ ಕ್ರಮ: ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ, ಸದ್ಯದಲ್ಲೇ ಸಂದೇಶ ನೀಡುತ್ತೇವೆ; ಡಿ ಕೆ ಶಿವಕುಮಾರ್

ದಲಿತಾಸ್ತ್ರದ ಮೂಲಕ ಕಟ್ಟಿಹಾಕಲು ಸಿದ್ದು ಬಣ ಕಸರತ್ತು: ತೆರಮರೆಯಲ್ಲಿ ಡಿಕೆಶಿ ಬೆಂಬಲಿಗರ ಮಸಲತ್ತು; ಅಂತರ್ಯುದ್ಧದಲ್ಲಿ ಯಾರಿಗಿದೆ ಗೆಲ್ಲುವ ತಾಕತ್ತು?

Gold Rate Today: ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ವಿವರ...

ಆರೋಗ್ಯ ಇಲಾಖೆಯಿಂದ ಉರ್ದು ಭಾಷೆ ಆಹ್ವಾನ ಪತ್ರಿಕೆ: ಜನರನ್ನು ದಾರಿ ತಪ್ಪಿಸಲೇಬೇಕು ಎಂಬ ಹಠಕ್ಕೆ ಬಿದ್ದಿದ್ದೀರಾ?

SCROLL FOR NEXT