ಕತ್ತಿ ಮಹೇಶ್ (ಚಿತ್ರಕೃಪೆ: ಯೂಟ್ಯೂಬ್) 
ಸಿನಿಮಾ ಸುದ್ದಿ

ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡಿದ್ದ ತೆಲುಗು ಸಿನಿಮಾ ನಟ, ಚಿತ್ರ ವಿಮರ್ಶಕ ಕತ್ತಿ ಮಹೇಶ್ ನಿಧನ

ಕೆಲ ದಿನಗಳ ಹಿಂದೆ ಸಂಭವಿಸಿದ್ದ ಅಪಘಾತದಲ್ಲಿ ತೀವ್ರ ಗಾಯಗೊಂಡಿದ್ದ ತೆಲುಗು ನಟ, ಸಿನಿಮಾ ವಿಮರ್ಶಕ ಕತ್ತಿ ಮಹೇಶ್ ಶನಿವಾರ ಚೆನ್ನೈನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ ಎಂದು ತಿಳಿದುಬಂದಿದೆ.

ಬೆಂಗಳೂರು: ಕೆಲ ದಿನಗಳ ಹಿಂದೆ ಸಂಭವಿಸಿದ್ದ ಅಪಘಾತದಲ್ಲಿ ತೀವ್ರ ಗಾಯಗೊಂಡಿದ್ದ ತೆಲುಗು ನಟ, ಸಿನಿಮಾ ವಿಮರ್ಶಕ ಕತ್ತಿ ಮಹೇಶ್ ಶನಿವಾರ ಚೆನ್ನೈನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ ಎಂದು ತಿಳಿದುಬಂದಿದೆ.

ಜೂನ್‌ 26ರಂದು ಅವರು ಚಲಾಯಿಸುತ್ತಿದ್ದ ಇನೋವಾ ಕಾರು ನೆಲ್ಲೂರು ಜಿಲ್ಲೆಯ ಕೊಡವಲೂರು ವಲಯದ ಚಂದ್ರಶೇಖರಪುರಂನಲ್ಲಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಬಳಿ ಅಪಘಾತಕ್ಕೊಳಗಾಗಿತ್ತು. ಚಿತ್ತೂರಿನಿಂದ ಹೈದರಾಬಾದ್‌ ಕಡೆಗೆ ಬರುತ್ತಿದ್ದಾಗ ಈ ಅಪಘಾತ ಸಂಭವಿಸಿತ್ತು. ಈ ವೇಳೆ ಮಹೇಶ್ ಅವರಿಗೆ ತಲೆ  ಹಾಗೂ ಮೂಗಿಗೆ ಗಂಭೀರವಾಗಿ ಗಾಯಗಳಾಗಿದ್ದವು. ತಲೆ ಮತ್ತು ದೇಹಕ್ಕೆ ತೀವ್ರವಾದ ಹಿನ್ನಲೆಯಲ್ಲಿ ವೈದ್ಯರು ಶಸ್ತ್ರಚಿಕಿತ್ಸೆ ನಡೆಸಿದ್ದರು.  

14 ದಿನಗಳ ಕಾಲ ದಿನಗಳ ಕಾಲ ಜೀವನ್ಮರಣ ಸ್ಥಿತಿಯಲ್ಲಿದ್ದ ಮಹೇಶ್ ಅವರಿಗೆ ಕೃತಕ ಉಸಿರಾಟ ವ್ಯವಸ್ಥೆ ಕೂಡ ಅಳವಡಿಸಲಾಗಿತ್ತು. ಇಂದು ಅವರು ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ. 

ಕತ್ತಿ ಮಹೇಶ್ ಈ ಹಿಂದೆ, 'ನೇನೆ ರಾಜು ನೇನೆ ಮಂತ್ರಿ’, ‘ಕ್ರ್ಯಾಕ್‌‘, ‘ಅಮ್ಮ ರಾಜ್ಯಂಲೋ ಕಡಪ ಬಿಡ್ಡಲು’ ಸೇರಿದಂತೆ ಹಲವು ಚಿತ್ರಗಳಲ್ಲಿ ಪಾತ್ರ ನಿರ್ವಹಿಸಿದ್ದರು. ಅಲ್ಲದೆ ಬಿಗ್‌ ಬಾಸ್‌ ಸೀಸನ್‌ 1ರಲ್ಲೂ ಅವರು ಭಾಗವಹಿಸಿದ್ದರು. ಯೂಟ್ಯೂಬ್ ನಲ್ಲಿ ಕತ್ತಿ ಮಹೇಶ್ ಸಿನಿಮಾ ವಿಮರ್ಶೆಗಳು ವ್ಯಾಪಕ ಸುದ್ದಿ  ಮಾಡುತ್ತಿದ್ದವು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಸಿದ್ದರಾಮಯ್ಯ 2 ಬಾರಿ ಸಿಎಂ ಆಗಿದ್ದಾರೆ; ಡಿಕೆಶಿ ಹಲವು ಮುಖ್ಯಮಂತ್ರಿಗಳ ಜತೆ ಸಚಿವರಾಗಿ ಕೆಲಸ ಮಾಡಿದ್ದಾರೆ: ಸುರ್ಜೇವಾಲ ಮಾತಿನ ಅರ್ಥವೇನು?

IPL 2026 Eliminator: ವೈಭವ್ ಸೂರ್ಯವಂಶಿ ಸ್ಫೋಟಕ ಬ್ಯಾಟಿಂಗ್, SRHಗೆ 244 ರನ್ ಬೃಹತ್ ಗುರಿ ನೀಡಿದ RR

IPL 2026 Eliminator: ವಿಶ್ವದಾಖಲೆಯ ಹೊಸ್ತಿಲಲ್ಲಿ ಎಡವಿದ Vaibhav Suryavanshi, ಮತ್ತೊಂದು ರೆಕಾರ್ಡ್ ಜಸ್ಟ್ ಮಿಸ್!

ಬೆಂಗಳೂರು: ಮಾಜಿ ಪ್ರೇಯಸಿ ಕರೆದಳೆಂದು ಮನೆಗೆ ಹೋದ ಪ್ರಿಯಕರ ದುರಂತ ಸಾವು: ಅಷ್ಟಕ್ಕೂ ಆಗಿದ್ದೇನು?

ಸಿದ್ದರಾಮಯ್ಯ ರಾಜೀನಾಮೆ ಸುದ್ದಿ: ಕಣ್ಣೀರಿಟ್ಟ CM ಕಚೇರಿ ಸಿಬ್ಬಂದಿ; ಬೆಂಬಲಿಗರಿಂದ ಪ್ರತಿಭಟನೆ

SCROLL FOR NEXT