ಕೆಜಿಎಫ್ ಪೋಸ್ಟರ್ 
ಸಿನಿಮಾ ಸುದ್ದಿ

ಕೆಜಿಎಫ್-2 ಸಿನಿಮಾ ಅಂತಿಮ ಹಂತದ ಕೆಲಸಗಳಿಗಾಗಿ ಸೆಟ್ ಗೆ ಮರಳಿದ ಯಶ್

ಕೆಜಿಎಫ್ 2 ಸಿನಿಮಾ ಶೂಟಿಂಗ್ ಸದ್ಯ ಪೋಸ್ಟ್ ಪ್ರೊಡಕ್ಷನ್ ಹಂತದಲ್ಲಿದೆ. ಅಂತಿಮ ಹಂತದ ಚಿತ್ರೀಕರಣ ಕೆಲಸಗಳು ನಡೆಯುತ್ತಿವೆ.

ಕೆಜಿಎಫ್ 2 ಸಿನಿಮಾ ಶೂಟಿಂಗ್ ಸದ್ಯ ಪೋಸ್ಟ್ ಪ್ರೊಡಕ್ಷನ್ ಹಂತದಲ್ಲಿದೆ. ಅಂತಿಮ ಹಂತದ ಚಿತ್ರೀಕರಣ ಕೆಲಸಗಳು ನಡೆಯುತ್ತಿವೆ. 

ಚಿತ್ರತಂಡ ಶೀಘ್ರವೇ ಸಿನಿಮಾ ರಿಲೀಸ್ ದಿನಾಂಕವನ್ನು ಘೋಷಿಸಲು ನಿರ್ಧರಿಸಲಿದೆ. ಥಿಯೇಟರ್ ಗಳು ಫುಲ್ ಆದ ಸಮಯದಲ್ಲಿ ಮಾನ್ ಸ್ಟರ್ ಆಗಮಿಸುತ್ತಾನೆ ಎಂದು ಹೊಂಬಾಳೆ ಫಿಲ್ಮ್ಸ್ ಟ್ವೀಟ್ ಮಾಡಿದೆ.

ಕೆಜಿಎಫ್ ಚಿತ್ರತಂಡ ಹೈದರಾಬಾದ್ ನಲ್ಲಿ ಇತ್ತೀಚೆಗೆ ಬಹುದೊಡ್ಡ ಪ್ರಮಾಣದ ಚಿತ್ರೀಕರಣ ಪೂರ್ಣಗೊಳಿಸಿತ್ತು. ಸಿನಿಮಾದ ಉಳಿದ ಕೆಲಸಗಳನ್ನು ಪೂರ್ಣಗೊಳಿಸಲು ಮುಂದಾಗಿರುವ ಚಿತ್ರತಂಡ ಜುಲೈ ಮೂರನೇ ವಾರದ ಅಂತ್ಯದಲ್ಲಿ ಎಲ್ಲ ಕೆಲಸಗಳನ್ನು ಪೂರ್ಣಗೊಳಿಸಲು ನಿರ್ಧರಿಸಿದೆ. ಕೋವಿಡ್ ಕಾರಣದಿಂದಾಗಿ ಹಲವು ತಿಂಗಳಿಂದ ಕೆಜಿಎಫ್ ಚಿತ್ರ ಬಿಡುಗಡೆ ಮುಂದೂಡುತ್ತಾ ಬಂದಿದೆ.

ನಟ ಯಶ್‌ಗೆ ನಾಯಕಿಯಾಗಿ ಶ್ರೀನಿಧಿ ಶೆಟ್ಟಿ ನಟಿಸುತ್ತಿದ್ದಾರೆ. ಬಾಲಿವುಡ್ ನಟರಾದ ಸಂಜಯ್ ದತ್, ರವೀನಾ ಟಂಡನ್ ಕೂಡ ಈ ಸಿನಿಮಾದಲ್ಲಿ ಅಭಿನಯ ಮಾಡಿದ್ದಾರೆ. ಒಟ್ಟಿನಲ್ಲಿ ಈ ಚಿತ್ರವನ್ನು ನೋಡಲು ಪ್ರೇಕ್ಷಕರು ಕಾಯುತ್ತಿದ್ದಾರೆ. ಆದರೆ ಚಿತ್ರಮಂದಿರಗಳಿಗೆ 100% ಆಸನ ವ್ಯವಸ್ಥೆ ಸಿಕ್ಕಾಗ ಮಾತ್ರ ಸಿನಿಮಾ ರಿಲೀಸ್ ಮಾಡೋದಾಗಿ ಪ್ರಶಾಂತ್ ನೀಲ್ ಈಗಾಗಲೇ ಸ್ಪಷ್ಟವಾಗಿ ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ

'ಕಿವಿಲಿ ಹೊಗೆ ಬರುವಂತಿದೆ': ಲಂಕಾ-ಭಾರತ ಟೆಸ್ಟ್ ಪಂದ್ಯದಲ್ಲಿ ಮತ್ತೊಂದು ವಿವಾದ, ಗ್ಲೌಸ್ ಕಿತ್ತೆಸೆದ ಬ್ಯಾಟರ್, ಆಗಿದ್ದೇನು?

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್