ಜಗ್ಗೇಶ್ 
ಸಿನಿಮಾ ಸುದ್ದಿ

ಚಿತ್ರರಂಗ ಬೀದಿಚರ್ಚೆಗೆ ವಿಷಯವಾಗದಿರಲಿ: ದರ್ಶನ್-ಇಂದ್ರಜಿತ್ ಪ್ರಕರಣಕ್ಕೆ ಜಗ್ಗೇಶ್ ಪ್ರತಿಕ್ರಿಯೆ

ನಟ ದರ್ಶನ್-ಇಂದ್ರಜಿತ್ ಪ್ರಕರಣಕ್ಕೆ ಸಂಬಂಧಿಸಿ ಹಿರಿಯ ನಟ ಜಗ್ಗೇಶ್ ಪ್ರತಿಕ್ರಿಯಿಸಿದ್ದು "ನಮ್ಮ ಚಿತ್ರರಂಗ ಬೀದಿಚರ್ಚೆಗೆ ವಿಷಯವಾಗದಿರಲಿ ವಿನಂತಿ! ಉದ್ಯಮದ ಹಿರಿಯರು ವಾಣಿಜ್ಯಮಂಡಲಿ ಮಧ್ಯಪ್ರವೇಶಿಸಿ ಒಡೆದಮನಗಳ ಸರಿಮಾಡಿ ಎಂದು ಪ್ರಾರ್ಥನೆ" ಎಂದಿದ್ದಾರೆ.

ನಟ ದರ್ಶನ್-ಇಂದ್ರಜಿತ್ ಪ್ರಕರಣಕ್ಕೆ ಸಂಬಂಧಿಸಿ ಹಿರಿಯ ನಟ ಜಗ್ಗೇಶ್ ಪ್ರತಿಕ್ರಿಯಿಸಿದ್ದು "ನಮ್ಮ ಚಿತ್ರರಂಗ ಬೀದಿಚರ್ಚೆಗೆ ವಿಷಯವಾಗದಿರಲಿ ವಿನಂತಿ!ಈಗಾಗಲೆ ಚಿತ್ರರಂಗ ಕರೋನ ಹೆಮ್ಮಾರಿ ಹೊಡೆತಕ್ಕೆ ನಲುಗಿದೆ!ಉಧ್ಯಮದ ಹಿರಿಯರು ವಾಣಿಜ್ಯಮಂಡಲಿ ಮಧ್ಯಪ್ರವೇಶಿಸಿ ಒಡೆದಮನಗಳ ಸರಿಮಾಡಿ ಎಂದು ಪ್ರಾರ್ಥನೆ"  ಎಂದಿದ್ದಾರೆ.

ಫೇಸ್‍ಬುಕ್ ನಲ್ಲಿ ವಿವಿರವಾದ ಪೋಸ್ಟ್ ಬರೆದುಕೊಂಡಿರುವ ನಟ ಜಗ್ಗೇಶ್ ತಮ್ಮ ಪ್ರಾರಂಭದ ದಿನಗಳ ಕಷ್ಟಗಳನ್ನು ಸಹ ನೆನೆದಿದ್ದು ಉದ್ಯಮದ ಬಂಧುಗಳಿಗೆ ತಮ್ಮ ಅನುಭವದ ಮಾತುಗಳನ್ನು ಹೇಳಿದ್ದಾರೆ.

ಜಗ್ಗೇಶ್ ಅವರ ಫೇಸ್‍ಬುಕ್  ಬರಹ ಹೀಗಿದೆ-

ತುಮಕೂರು ಜಿಲ್ಲೆಯ, ತುರುವೇಕೆರೆ ತಾಲ್ಲೂಕಿನ, ಮಾಯಸಂದ್ರ ಹೋಬಳಿಯ,ಆನಡುಗು ಎಂಬ ಸಣ್ಣ ಗ್ರಾಮದ, ಸಣ್ಣ ಕುಟುಂಬದ, ಹಳ್ಳಿಹುಡುಗ ನಾನು ಈಶ್ವರ್ ಗೌಡ @ಜಗ್ಗೇಶ..!

ನನಗೆ ಇದ್ದ ಆಸೆ ರಾಜಕುಮಾರ್ ಕಂಡು ಮಾತಾಡಿಸಿ ಆಶೀರ್ವಾದ ಪಡೆದು ಸಿನಿಮ ನಟನಾಗಬೇಕು ಎಂಬುದು ಒಂದೆ ಗುರಿ! 1980ಕ್ಕೆ ಆ ಕಾರ್ಯ ಶುರು, ಆಗ ಹೇಗಿದ್ದೆ ನಾನು ದಾಖಲಿಸಿರುವೆ ಚಿತ್ರಗಳಲ್ಲಿ ಮತ್ತೊಮ್ಮೆ ಮುಖ ನೋಡಿ ನಕ್ಕುಬಿಡಿ!ಆ ಮುಖಕ್ಕೆ ಆಕಾಲಕ್ಕೆ ಸಿನಿಮನಟ ಆಗುವ ಕನಸ್ಸು? ಈಗಿನ ಜಗ್ಗೇಶನ ಮರೆತು ಯೋಚಿಸಿ ಇದು ಸಾಧ್ಯವಾ?

ಆಗ ಅಪ್ಪ ಅಮ್ಮ ಬಂಧು ಮಿತ್ರರು ಹೇಳಿದ್ದು, ಉಗಿದದ್ದು ಹೀಗೆ ಮುಚ್ಕೊಂಡು ಅನ್ನ ಹುಡ್ಕೋ ಕ್ಯಾಮೆ ನೋಡು!ಶಿವಲಿಂಗಪ್ಪನ ಮರ್ಯಾದೆ ಉಳಿಸು ಮಂಗಮುಂಡೆದೆ ಎಂದು!

ಗುರುಹಿಂದೆ ಗುರಿಮಂದೆ ಹಠ ಬಿಡಲಿಲ್ಲಾ ಗಾಂಧಿನಗರ ಅಲೆದು ಚಪ್ಪಲಿಸವೆಸಿ ದಡಮುಟ್ಟಿದೆ ಎಂದುಬಿಟ್ಟರೆ ಆತ್ಮ ಧ್ರೋಹ ಆಗಿಬಿಡುತ್ತದೆ ಕಾರಣ ದಡಮುಟ್ಟಿಸಿದ್ದು ಅಂದಿನ ನಿರ್ದೇಶಕರು ನಿರ್ಮಾಪಕರು ಮಾಧ್ಯಮಮಿತ್ರರು ಹಾಗು ವಿಶೇಷವಾಗಿ ಸ್ವಾಭಿಮಾನಿ ಕನ್ನಡಿಗರು!ಹೇಳಿ ಹೇಗಿದ್ದರಬೇಕು ಅಪಮಾನ ಅವಮಾನ ಹಸಿವಿನಿಂದ ನಿದ್ರೆಗೆಟ್ಟು ಗೆದ್ದ ಒಬ್ಬ ಸಾಮಾನ್ಯನ ಬದುಕು!ಆಗ ನಮ್ಮ ಬಗ್ಗೆ ಹೇಳಲು ಇದ್ದದ್ದು ಒಂದೆ ಬರಹಮಾಧ್ಯಮ ಮಾತ್ರ! ನೆನಪಿಡಿ ಇಂದು ನೂರಾರು ಮಾಧ್ಯಮ, ಅಂಗೈಯಲ್ಲೆ ಆಕಾಶ ತೋರಿ ಹತ್ತಾರುವರ್ಷ ಸಾಧನೆ ಕ್ಷಣಮಾತ್ರದಲ್ಲೆ ಅನುಮಾನದಿಂದ ಸಾಧಕನ ನೋಡುವಂತ ಮಾಯಾಜಾಲ #ಸಾಮಾಜಿಕ ಜಾಲತಾಣ, ಸಿಕ್ಕಸಿಕ್ಕವರ ಕೈಲಿ ಈ ಜಾಲಸಿಕ್ಕು ವಯಸ್ಸು ಸಾಧನೆ ಅವರ ಮೂಗಿನ ನೇರಕ್ಕೆ ಅವರು ಬದುಕಿದ ಪರಿಸರ ಭಾಷೆಬಳಸಿ ಅವಮಾನ ಮಾಡಿ ವಿಕೃತ ಆನಂದ ಅನುಭವಿಸುವುದು ವಿಪರ್ಯಾಸ ದಿನಗಳು!ಇಂದಿನ ಸಾರ್ವಜನಿಕ ಜೀವನ public toilet ನಂತೆ ಆಗಿಬಿಟ್ಟಿದೆ!ಆದರು ವಿಧಿಯಿಲ್ಲಾ ಚರ್ಮ ದಪ್ಪಮಾಡಿ ಬದುಕಬೇಕು!

ಈಗ ವಿಷಯಕ್ಕೆ ಬರುವೆ ಈ ಅಕ್ಷರ ಠಂಕಿಸಿದ್ದಕ್ಕೆ ಉಧ್ಯಮದ ಕಲಾಬಂಧುಗಳಿಗೆ ನನ್ನ ಸಣ್ಣ ಅನುಭವದ ನುಡಿ! 

ಮಾನ್ಯರೆ ನಶ್ವರ ಬಣ್ಣದ ಬದುಕು!ಕಲಾವಿಧನ ಜೀವನ ನಡೆಯುವವರೆಗೆ ನಾಣ್ಯ ಮಿಕ್ಕಂತೆ ಸವಕಲು! ಎಲ್ಲಿಯವರೆಗು ಕಲಾವಿದ ವರ್ಷಕ್ಕೆ ಮಾತ್ರ ಹೊರಬರುವ ಊರ ಮೆರೆದೇವರಂತೆ ಹೊರ ಬರಬೇಕು,ಆಗ ದೇವರಪರ ಅದ್ಭುತ ಅನನ್ಯ!ದಿನ ಆ ದೇವರು ಬೀದಿಗೆ ಬಂದರೆ ಮೌಲ್ಯ ಇರುವುದಿಲ್ಲಾ! ರಾಜನಾಗಲಿ ಸೇವಕನಾಗಲಿ ಜಗಳ ಗರ್ಷಣೆ ಸಹಜ!ಆ ಗರ್ಷಣೆ ನಿಭಾಯಿಸುವ ಕಲೆ ಕರಗತ ಆಗಿರಬೇಕು ಆಗ ಕಾಡ್ಗಿಚ್ಚನ್ನು ತಣ್ಣಗೆ ಮಾಡಬಹುದು!ಹಾಗೆ ಅನ್ಯತ ಭಾವಿಸದೆ ನನ್ನ ಮಾತು ಆಲಿಸಬೇಕು ಕಲಾಬಂಧುಗಳು!ಆತ್ಮೀಯ ಮಾಧ್ಯಮಮಿತ್ರರು ಕಲಾರಂಗದ ನಮ್ಮಕಾಯಕ ಜನರಿಗೆ ತಲುಪಿಸೋ ನಾವಿಕರು, ನಾವು ನೀವು ದೇಹದ ಎರಡುಕಣ್ಣಂತೆ ಯಾವುದಕ್ಕು ನೋವಾದರು ನಮಗೆ ನಷ್ಟ!ದಯಮಾಡಿ ವಿಶೇಷ ಹೃದಯ ನಿಮ್ಮದಾಗಿ ನಮ್ಮ ಚಿತ್ರರಂಗ ಬೀದಿಚರ್ಚೆಗೆ ವಿಷಯವಾಗದಿರಲಿ ವಿನಂತಿ!ಈಗಾಗಲೆ ಚಿತ್ರರಂಗ ಕರೋನ ಹೆಮ್ಮಾರಿ ಹೊಡೆತಕ್ಕೆ ನಲುಗಿದೆ!ಉಧ್ಯಮದ ಹಿರಿಯರು ವಾಣಿಜ್ಯಮಂಡಲಿ ಮಧ್ಯಪ್ರವೇಶಿಸಿ ಒಡೆದಮನಗಳ ಸರಿಮಾಡಿ ಎಂದು ಪ್ರಾರ್ಥನೆ ಸರ್ವೆಜನಃಸುಖಿನೋಭವ ಎಂದಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ಸದನದಲ್ಲಿ ಹುಲಿ, ಹೈಕಮಾಂಡ್‌ ಮುಂದೆ ಇಲಿ'.. 'ಅಧಿಕಾರದಲ್ಲಿ ಉಳಿಯಲು DK Shivakumar ಕ್ಷಮೆಯಾಚನೆ': BJP-JDS ಟೀಕಾ ಪ್ರಹಾರ!

RSS ಅನ್ನು ಯಾರೂ "ಸಮರ್ಥಿಸಿಕೊಳ್ಳಬಾರದು": ಡಿಕೆಶಿ ಕ್ಷಮೆಯಾಚನೆ ಸ್ವಾಗತಿಸಿದ ಬಿ.ಕೆ ಹರಿಪ್ರಸಾದ್

Indian Stock Market: ಸತತ ಕುಸಿತ, ಬರೊಬ್ಬರಿ ಶೇ.1ರಷ್ಟು ಕುಸಿದ Sensex, Nifty 50, ರೂಪಾಯಿ ಮೌಲ್ಯ ಇಳಿಕೆ!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

Indian Navy ಗೆ ಮತ್ತಷ್ಟು ಬಲ: INS Udaygiri, INS Himgiri ಯುದ್ಧನೌಕೆಗಳು ಸೇರ್ಪಡೆ! Video

SCROLL FOR NEXT