ಚೇತನ್ 
ಸಿನಿಮಾ ಸುದ್ದಿ

ಬ್ರಾಹ್ಮಣರ ಅವಹೇಳನ: ನಟ ಚೇತನ್ ವಿರುದ್ಧ ಎಫ್ ಐ ಆರ್ ದಾಖಲು

ಬ್ರಾಹ್ಮಣರು ಹಾಗೂ ಬ್ರಾಹ್ಮಣ್ಯದ ಕುರಿತು ಅವಹೇಳನಕಾರಿ ಹೇಳಿಕೆ ನೀಡಿದ್ದ ಆರೋಪದಡಿ ಸಾಮಾಜಿಕ ಕಾರ್ಯಕರ್ತ, ನಟ ಚೇತನ್ ವಿರುದ್ಧ ಬಸವನಗುಡಿ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ‌. 

ಬೆಂಗಳೂರು: ಬ್ರಾಹ್ಮಣರು ಹಾಗೂ ಬ್ರಾಹ್ಮಣ್ಯದ ಕುರಿತು ಅವಹೇಳನಕಾರಿ ಹೇಳಿಕೆ ನೀಡಿದ್ದ ಆರೋಪದಡಿ ಸಾಮಾಜಿಕ ಕಾರ್ಯಕರ್ತ, ನಟ ಚೇತನ್ ವಿರುದ್ಧ ಬಸವನಗುಡಿ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ‌. 

ವಿಪ್ರ ಯುವ ವೇದಿಕೆಯ ಪವನ್ ಕುಮಾರ್ ಶರ್ಮಾ ನೀಡಿದ ದೂರಿನ ಮೇರೆಗೆ ಆ ದಿನಗಳು ಚಿತ್ರದ ಖ್ಯಾತಿಯ ಚೇತನ್ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ

ಧಾರ್ಮಿಕ ಭಾವನೆ ಕೆರಳಿಸುವುದು (ಐಪಿಸಿ 129(ಎ) ಹಾಗೂ ದ್ವೇಷ ಭಾವನೆ ಹೆಚ್ಚಿಸುವ (ಐಪಿಸಿ 153 (ಬಿ) ಆರೋಪದಡಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ’ ಎಂದು ಪೊಲೀಸ್ ಮೂಲಗಳು ಹೇಳಿವೆ.

‘ಚೇತನ್‌ ಮಾತನಾಡಿರುವ ವಿಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ನೋಡಿದೆ. ಹಿಂದೂ ಧರ್ಮ ನಾನಾ ಪ್ರವರ್ಗಗಳಲ್ಲಿ ಇರುವವರನ್ನು ಬೇರ್ಪಡಿಸಿ ಅವರಲ್ಲಿ ಧರ್ಮಾಂಧತೆಯನ್ನು ಹುಟ್ಟುಹಾಕಿ ಸಮಾಜದಲ್ಲಿ ಅಶಾಂತಿ ಉಂಟು ಮಾಡುವ ಉದ್ದೇಶದಿಂದ ಚೇತನ್‌ ಅವರು, ಬ್ರಾಹ್ಮಣ್ಯ ಹಾಗೂ ಬ್ರಾಹ್ಮಣರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ’ ಎಂಬುದಾಗಿ ಶರ್ಮಾ ದೂರಿನಲ್ಲಿ ತಿಳಿಸಿದ್ದಾರೆ. ಲಾಕ್ ಡೌನ್ ವೇಳೆ ಬ್ರಾಹ್ಮಣರಿಗೆ ಪ್ರತ್ಯೇಕವಾಗಿ ಆಹಾರ ವಿತರಣೆ ಮಾಡಿದ ನಟರೊಬ್ಬರ ಬಗ್ಗೆ ಚೇತನ್ ಟೀಕಿಸಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಪಕ್ಷಾಂತರಕ್ಕೆ ಕಡಿವಾಣ ಹಾಕಲು ಕಾಂಗ್ರೆಸ್ ಮಾಸ್ಟರ್ ಪ್ಲ್ಯಾನ್: DCC ಅಧ್ಯಕ್ಷರ ನೇಮಕಕ್ಕೆ ಹೊಸ ತಂತ್ರ, ಆಯ್ಕೆ ವಿಚಾರದಲ್ಲಿ ಹೈಕಮಾಂಡ್ ಫುಲ್ ಕಂಟ್ರೋಲ್...!

ಇನ್ನಿಬ್ಬರು DCM ನೇಮಕಕ್ಕೆ ಕಾಂಗ್ರೆಸ್ ಕಸರತ್ತು? 'ನನಗೂ ಅವಕಾಶ ಸಿಗುವ ವಿಶ್ವಾಸವಿದೆ' ಎಂದ ಸತೀಶ್ ಜಾರಕಿಹೊಳಿ..!

ಮತದಾರರ ಪಟ್ಟಿಯಿಂದ 84 ಲಕ್ಷ ಹೆಸರು ಡಿಲೀಟ್? ಸ್ಪಷ್ಟನೆ ಕೊಟ್ಟ CEO, ಹೇಳಿದ್ದೇನು..?

ವಿದ್ಯಾರ್ಥಿಗಳ ಮೇಲೆ ಪೆಲ್ಲೆಟ್ ಗುಂಡಿನ ದಾಳಿ: ಶಾ ಅವರೇ ಆದೇಶ ನೀಡಿದ್ದಾರೆ, ಇಲ್ಲವೇ ಅವರು ಅಸಮರ್ಥ; ವಜಾಗೊಳಿಗೊಳಿಸಿ- ಪ್ರಧಾನಿಗೆ ರಾಹುಲ್ ಒತ್ತಾಯ

CWRC ಆದೇಶದ ವಿರುದ್ಧ ಮೇಲ್ಮನವಿ: ಕಾವೇರಿ ಜಲಾನಯನ ಪ್ರದೇಶದ ಪರಿಸ್ಥಿತಿ ಅರಿಯಲು ಸಿಎಂ ವಿಜಯ್ ಗೆ ಹೆಲಿಕಾಪ್ಟರ್ ವ್ಯವಸ್ಥೆ- ಸಿಎಂ ಡಿಕೆ ಶಿವಕುಮಾರ್!