ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಸಿನಿಮಾ ಸುದ್ದಿ

ಬೈಕ್ ಅಪಘಾತ: ನಟ ಸಂಚಾರಿ ವಿಜಯ್‌ಗೆ ಶಸ್ತ್ರಚಿಕಿತ್ಸೆ, ಪ್ರಜ್ಞಾಹೀನ ಸ್ಥಿತಿಯಲ್ಲಿ ರಾಷ್ಟ್ರಪ್ರಶಸ್ತಿ ವಿಜೇತ ನಟ

ರಾಷ್ಟ್ರಪ್ರಶಸ್ತಿ ವಿಜೇತ ನಟ ಸಂಚಾರಿ ವಿಜಯ್ ಅವರು ಬೈಕ್ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದು ಪ್ರಜ್ಞಾಹೀನ ಸ್ಥಿತಿಯಲ್ಲಿದ್ದಾರೆ.

ಸಂಚಾರಿ ವಿಜಯ್
Vishwanath S
Updated On : 13 Jun 2021, 4:50 pm

ಬೆಂಗಳೂರು: ರಾಷ್ಟ್ರಪ್ರಶಸ್ತಿ ವಿಜೇತ ನಟ ಸಂಚಾರಿ ವಿಜಯ್ ಅವರು ಬೈಕ್ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದು ಪ್ರಜ್ಞಾಹೀನ ಸ್ಥಿತಿಯಲ್ಲಿದ್ದಾರೆ. 

ನಿನ್ನೆ ಸ್ನೇಹಿತರ ಜೊತೆ ಬೈಕ್ ನಲ್ಲಿ ತೆರಳುತ್ತಿದ್ದಾಗ ಅಪಘಾತವಾಗಿದೆ. ಕೂಡಲೇ ಅವರು ಬನ್ನೇರುಘಟ್ಟ ರಸ್ತೆಯಲ್ಲಿರುವ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಯಿತು. 

ಮೆದುಳಿನಲ್ಲಿ ರಕ್ತಸ್ರಾವ ಉಂಟಾಗಿದ್ದರಿಂದ ಅವರಿಗೆ ಶಸ್ತ್ರಚಿಕಿತ್ಸೆ ನಡೆಸಲಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ. ಅವರನ್ನು ಐಸಿಯುನಲ್ಲಿಟ್ಟು ಚಿಕಿತ್ಸೆ ನೀಡಲಾಗುತ್ತಿದೆ. 

Advertisement

Advertisement

ಪ್ರಜ್ಞಾಹೀನ ಸ್ಥಿತಿಯಲ್ಲಿರುವುದರಿಂದ ಇನ್ನು 48 ಗಂಟೆಗಳ ಕಾಲ ಏನನ್ನು ಹೇಳಲು ಸಾಧ್ಯವಿಲ್ಲ ಎಂದು ವೈದ್ಯರು ತಿಳಿಸಿದ್ದಾರೆ. 

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement