ಸಂಚಾರಿ ವಿಜಯ್ 
ಸಿನಿಮಾ ಸುದ್ದಿ

ಕೋಮಾದಲ್ಲಿರುವ ಸಂಚಾರಿ ವಿಜಯ್ ಆರೋಗ್ಯ ಪರಿಸ್ಥಿತಿ ಗಂಭೀರ: ಅಪೋಲೋ ಆಸ್ಪತ್ರೆಯ ಹೆಲ್ತ್ ಬುಲೆಟಿನ್

ರಸ್ತೆ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡು ಅಪೋಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ನಟ ಸಂಚಾರಿ ವಿಜಯ್ ಕೋಮಾ ಸ್ಥಿತಿಯಲ್ಲಿದ್ದು ಅವರ ಆರೋಗ್ಯ ಪರಿಸ್ಥಿತಿ ಗಂಭೀರವಾಗಿದೆ. 

ಬೆಂಗಳೂರು: ರಸ್ತೆ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡು ಅಪೋಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ನಟ ಸಂಚಾರಿ ವಿಜಯ್ ಕೋಮಾ ಸ್ಥಿತಿಯಲ್ಲಿದ್ದು ಅವರ ಆರೋಗ್ಯ ಪರಿಸ್ಥಿತಿ ಗಂಭೀರವಾಗಿದೆ. 

ಈ ಬಗ್ಗೆ ಆಸ್ಪತ್ರೆಯಿಂದ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿದ್ದು, ಸಂಪೂರ್ಣ ಲೈಫ್ ಸಪೋರ್ಟ್ ನೊಂದಿಗೆ ನ್ಯೂರೋ ಐಸಿಯುನಲ್ಲಿ ವಿಜಯ್ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ, ಅವರ ಆರೋಗ್ಯ ಪರಿಸ್ಥಿತಿ ಗಂಭೀರವಾಗಿದೆ ಎಂದು ಭನ್ನೇರುಘಟ್ಟದ ರಸ್ತೆಯ ಅಪೋಲೋ ಆಸ್ಪತ್ರೆ ಮಾಹಿತಿ ನೀಡಿದೆ. 

ಜೂ.13 ರಂದು ರಾತ್ರಿ 11.45 ವೇಳೆಗೆ ರಸ್ತೆ ಅಪಘಾತಕ್ಕೆ ಒಳಗಾದ ವಿಜಯ್ ಅವರನ್ನು ತಕ್ಷಣವೇ ಭನ್ನೇರುಘಟ್ಟ ರಸ್ತೆಯ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಯಿತು. ಮೆದುಳಿನ ಸಿ.ಟಿ. ಸ್ಕ್ಯಾನ್ ಮಾಡಿದಾಗ ಮೆದುಳಿಗೆ ತೀವ್ರ ಗಾಯವಾಗಿ ರಕ್ತಸ್ರಾವವಾಗುತ್ತಿತ್ತು. ಮೆದುಳಿನ ರಕ್ತಸ್ರಾವವನ್ನು ತಡೆಯಲು ತಕ್ಷಣವೇ ಶಸ್ತ್ರಚಿಕಿತ್ಸೆ ಮಾಡಲಾಯಿತು. ಕೋಮಾ ಸ್ಥತಿಯಲ್ಲೇ ಮುಂದುವರಿದಿದ್ದಾರೆ. ಅವರ ಆರೋಗ್ಯದ ಸ್ಥಿತಿಗತಿ ಕುರಿತು ನಿಗಾ ವಹಿಸಿದ್ದೇವೆ ಎಂದು ಆಸ್ಪತ್ರೆ ಹೆಲ್ತ್ ಬುಲೆಟಿನ್‍ನಲ್ಲಿ ವಿವರಿಸಿದೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಸಿದ್ದರಾಮಯ್ಯ 2 ಬಾರಿ ಸಿಎಂ ಆಗಿದ್ದಾರೆ; ಡಿಕೆಶಿ ಹಲವು ಮುಖ್ಯಮಂತ್ರಿಗಳ ಜತೆ ಸಚಿವರಾಗಿ ಕೆಲಸ ಮಾಡಿದ್ದಾರೆ: ಸುರ್ಜೇವಾಲ ಮಾತಿನ ಅರ್ಥವೇನು?

ರಾಜೀನಾಮೆ ಬಗ್ಗೆ ಖುದ್ದು ಸುಳಿವು ನೀಡಿದ CM ಸಿದ್ದರಾಮಯ್ಯ; ಸಾಮಾಜಿಕ ಮಾಧ್ಯಮದಲ್ಲಿ ಮಹತ್ವದ ಪೋಸ್ಟ್​!

ಅಸ್ಸಾಂ ವಿಧಾನಸಭೆಯಲ್ಲಿ ಹೈಡ್ರಾಮ: ವಿಪಕ್ಷಗಳ ಪ್ರತಿಭಟನೆ ನಡುವೆಯೇ UCC ಮಸೂದೆ ಅಂಗೀಕಾರ! ಬಹು ಪತ್ನಿತ್ವಕ್ಕೆ ಜೈಲು ಶಿಕ್ಷೆ

ಸಿಎಂ ಬದಲಾವಣೆಯಾದ್ರೆ ಜನರಿಗೆ ಕಾರಣ ತಿಳಿಸಬೇಕು, ಇಲ್ಲ ಪರಿಣಾಮ ಎದುರಿಸಬೇಕಾಗುತ್ತದೆ: ಕಾಂಗ್ರೆಸ್ ಗೆ 'ಅಹಿಂದ' ಎಚ್ಚರಿಕೆ

ಚಿತ್ರದುರ್ಗ: ನಿಂತಿದ್ದ ಲಾರಿಗೆ ಬೊಲೆರೋ ಡಿಕ್ಕಿ; ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ ಐವರು ದುರ್ಮರಣ

SCROLL FOR NEXT