ಸಂಚಾರಿ ವಿಜಯ್ 
ಸಿನಿಮಾ ಸುದ್ದಿ

ಸಂಚಾರಿ ವಿಜಯ್ ಮೆದುಳು ನಿಷ್ಕ್ರಿಯ, ಅಂಗಾಂಗ ದಾನ: ವೈದ್ಯರು

ಶನಿವಾರ ಅಪಘಾತಕ್ಕೀಡಾಗಿ ಚಿಕಿತ್ಸೆ ಪಡೆಯುತ್ತಿದ್ದ ನಟ ಸಂಚಾರಿ ವಿಜಯ್ ಅವರ ಮೆದುಳು ನಿಷ್ಕ್ರಿಯಗೊಂಡಿದ್ದು, ಅಂಗಾಂಗ ದಾನ ಮಾಡುವುದಕ್ಕೆ ಕುಟುಂಬ ಸದಸ್ಯರು ನಿರ್ಧರಿಸಿದ್ದಾರೆ. 

ಬೆಂಗಳೂರು: ಶನಿವಾರ ಅಪಘಾತಕ್ಕೀಡಾಗಿ ಚಿಕಿತ್ಸೆ ಪಡೆಯುತ್ತಿದ್ದ ನಟ ಸಂಚಾರಿ ವಿಜಯ್ ಅವರ ಮೆದುಳು ನಿಷ್ಕ್ರಿಯಗೊಂಡಿದ್ದು, ಅಂಗಾಂಗ ದಾನ ಮಾಡುವುದಕ್ಕೆ ಕುಟುಂಬ ಸದಸ್ಯರು ನಿರ್ಧರಿಸಿದ್ದಾರೆ. 

ಸಂಚಾರಿ ವಿಜಯ್ ಅವರ ಆರೋಗ್ಯ ಪರಿಸ್ಥಿತಿಯ ಬಗ್ಗೆ ಅಪೋಲೋ ಆಸ್ಪತ್ರೆಯ ವೈದ್ಯ ಡಾ. ಅರುಣ್ ನಾಯ್ಕ್ ಮಾಹಿತಿ ನೀಡಿದ್ದು, ಸಂಚಾರಿ ವಿಜಯ್ ಅವರ ಮೆದುಳಿಗೆ ಸಂಬಂಧಿಸಿದಂತೆ ಎರಡು ಅಪ್ನಿಯಾ ಟೆಸ್ಟ್ ಮಾಡಲಾಗಿದ್ದು, ವಿಜಯ್ ಅವರ ಮೆದುಳು ನಿಷ್ಕ್ರಿಯಗೊಂಡಿರುವುದು ದೃಢಪಟ್ಟಿದ್ದು, ಬ್ರೈನ್ ಡೆಡ್ ಆಗಿದೆ ಎಂದು ಹೇಳಿದ್ದಾರೆ. ವಿಜಯ್ ಅವರ ಅಂಗಾಂಗ ದಾನಕ್ಕೆ ಕುಟುಂಬ ಸದಸ್ಯರು ನಿರ್ಧರಿಸಿದ್ದು, ಈ ಪ್ರಕ್ರಿಯೆ ರಾತ್ರಿ 9:30 ರ ವೇಳೆಗೆ ಪ್ರಾರಂಭವಾಗಲಿದೆ. 

ಬೆಳಿಗ್ಗೆ ವೇಳೆಗೆ ವಿಜಯ್ ಅವರ ಮೃತದೇಹ ಕುಟುಂಬ ಸದಸ್ಯರಿಗೆ ಹಸ್ತಾಂತರವಾಗಲಿದ್ದು, ಬೆಳಿಗ್ಗೆ 8-10 ವೇಳೆಗೆ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗುತ್ತದೆ. ನಂತರ ವಿಜಯ್ ಅವರ ಹುಟ್ಟೂರಾದ ಚಿಕ್ಕಮಗಳೂರಿನ ಕಡೂರಿನ ಪಂಚನಹಳ್ಳಿಯಲ್ಲಿ ಅಂತ್ಯಸಂಸ್ಕಾರ ನಡೆಸಲಾಗುತ್ತದೆ ಎಂಬ ಮಾಹಿತಿ ಲಭ್ಯವಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಕಾವೇರಿ' ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೆ ಶಾಕ್: ತಮಿಳುನಾಡಿಗೆ ನೀರು ಬಿಡಬೇಕೆಂಬ CWRC ಆದೇಶ ಎತ್ತಿಹಿಡಿದ CWMA

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪ್ರದೋಶ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್; 'ದಾಸ'ನಿಗೆ ಬಿಗ್ ಶಾಕ್!

'ಕಾಂಗ್ರೆಸ್ ಸರ್ಕಾರದ ವೈಫಲ್ಯ' ವಿರೋಧಿಸಿ ಸೆಪ್ಟೆಂಬರ್ 1 ರಿಂದ 10ರವರೆಗೆ ರಾಯಚೂರಿನಿಂದ ಬಳ್ಳಾರಿಗೆ BJP-JDS ಪಾದಯಾತ್ರೆ!

Uorfi Javed: ಮದ್ವೆ ಆಗ್ತೀನೋ ಇಲ್ಲವೋ ಗೊತ್ತಿಲ್ಲ, ಆದ್ರೆ ತಾಯಿ ಆಗ್ತೀನಿ; ಸೀಕ್ರೆಟ್‌ ರಿವೀಲ್ ಮಾಡಿದ ಉರ್ಫಿ ಜಾವೇದ್

ಡಿಕೆಶಿ ಸಂಪುಟಕ್ಕೆ ಮತ್ತೆ ಸರ್ಜರಿ? ಭಾರಿ ಬದಲಾವಣೆ, 3-5 ಸಚಿವರಿಗೆ ಕೊಕ್?; ಮಹಿಳೆ ಸೇರಿ ಕೆಲ ರೆಬೆಲ್ ನಾಯಕರಿಗೆ ಅವಕಾಶ ಸಾಧ್ಯತೆ