ಸುದೀಪ್ 
ಸಿನಿಮಾ ಸುದ್ದಿ

ಕನ್ನಡ ಬಿಗ್ ಬಾಸ್ ಸೀಸನ್ 8 ಮತ್ತೆ ಆರಂಭ: ಶೀಘ್ರವೇ ಅಧಿಕೃತ ಘೋಷಣೆ

ಕೊರೋನಾ ವೈರಸ್ ಎರಡನೇ ಅಲೆಯಿಂದಾಗಿ ಅರ್ಧಕ್ಕೇ ನಿಂತಿದ್ದ ಬಿಗ್ ಬಾಸ್ ಸೀಸನ್ 8 ರಿಯಾಲಿಟಿ ಶೋ ಮತ್ತೆ ಆರಂಭಿಸುವುದಕ್ಕೆ ವಾಹಿನಿ ಮುಂದಾಗಿದೆ ಎಂಬ ಮಾಹಿತಿ ಎಲ್ಲೆಡೆ ಹರಿದಾಡುತ್ತಿದೆ.

ಕೊರೋನಾ ವೈರಸ್ ಎರಡನೇ ಅಲೆಯಿಂದಾಗಿ ಅರ್ಧಕ್ಕೇ ನಿಂತಿದ್ದ ಬಿಗ್ ಬಾಸ್ ಸೀಸನ್ 8 ರಿಯಾಲಿಟಿ ಶೋ ಮತ್ತೆ ಆರಂಭಿಸುವುದಕ್ಕೆ ವಾಹಿನಿ ಮುಂದಾಗಿದೆ ಎಂಬ ಮಾಹಿತಿ ಎಲ್ಲೆಡೆ ಹರಿದಾಡುತ್ತಿದೆ. 72 ದಿನಗಳ ಕಾಲ ಬಿಗ್ ಬಾಸ್ ಮನೆಯಲ್ಲಿದ್ದ ಸದಸ್ಯರು ಮತ್ತೆ ರೀ- ಎಂಟ್ರಿ ಆಗಲಿದ್ದಾರೆ.

ಕನ್ನಡ ಬಿಗ್ ಬಾಸ್ ಸೀಸನ್ 8 ಮತ್ತೆ ಆರಂಭವಾಗುವುದು ಬಹುತೇಕ ಖಚಿತವಾಗಿದೆ. ಜೂನ್​ 20ರಿಂದ ಮತ್ತೆ ಬಿಗ್​ ಬಾಸ್ ಸೀಸನ್​ 8 ಮತ್ತೆ ಆರಂಭವಾಗಲಿದೆ ಎಂದು ಹೇಳಲಾಗುತ್ತಿದೆ. 12 ಸ್ಪರ್ಧಿಗಳಿಗೆ ಕ್ವಾರಂಟೈನ್ ಮಾಡಲಾಗುವುದು, ನಂತರ ಅವರು ಬಿಗ್ ಬಾಸ್ ಮನೆಗೆ ತೆರಳಲಿದ್ದಾರೆ.

ಫೆಬ್ರವರಿ 28 ರಿಂದ ಆರಂಭವಾದ ಬಿಗ್ ಬಾಸ್ 78 ದಿನಗಳಿಗೆ ಕೊನೆಗೊಂಡಿತ್ತು, ಜೂನ್ ತಿಂಗಳ ಆಂತ್ಯದಲ್ಲಿ ಬಿಗ್ ಬಾಸ್ ಕನ್ನಡ ಸೀಸನ್ 8 ಮತ್ತೆ ಆರಂಭವಾಗಲಿದ್ದು, ಸುದೀಪ್ ಕಾರ್ಯಕ್ರಮ ನಿರೂಪಣೆ ಮಾಡಲಿದ್ದಾರೆ.

ಇನ್ನೂ ಸ್ಪರ್ಧಿಗಳಾದ ನಿಧಿ ಸುಬ್ಬಯ್ಯ, ಕೆ.ಪಿ. ಅರವಿಂದ್​, ದಿವ್ಯಾ ಸುರೇಶ್​, ಶಮಂತ್​ ಗೌಡ, ರಘು ಗೌಡ, ವೈಷ್ಣವಿ ಗೌಡ, ಪ್ರಶಾಂತ್​ ಸಂಬರಗಿ, ಚಕ್ರವರ್ತಿ ಚಂದ್ರಚೂಡ, ಮಂಜು ಪಾವಗಡ, ಶುಭಾ ಪೂಂಜಾ ಹಾಗೂ ಪ್ರಿಯಾಂಕಾ ತಿಮ್ಮೇಶ್​ ಮತ್ತೆ ಬಿಗ್​ ಬಾಸ್​ ಮನೆಗೆ ಮರಳಲಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

Ragigudda Metro ಮೆಟ್ರೋ ನಿಲ್ದಾಣದಲ್ಲಿ ತಪ್ಪಿದ ದುರಂತ, ಆಯತಪ್ಪಿ ಹಳಿ ಮೇಲೆ ಬಿದ್ದ ಸಿಬ್ಬಂದಿ!... ಮುಂದೇನಾಯ್ತು? Video

ಸೌರಭ್ ಭಾರದ್ವಾಜ್ ಮನೆ ಮೇಲೆ ಇಡಿ ದಾಳಿ; ಮೋದಿ ನಕಲಿ ಪದವಿ ಕುರಿತ ಗಮನ ಬೇರೆಡೆ ಸೆಳೆಯಲು ಯತ್ನ ಎಂದ AAP

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

SCROLL FOR NEXT