ನಟ ಚೇತನ್ 
ಸಿನಿಮಾ ಸುದ್ದಿ

ಬ್ರಾಹ್ಮಣರ ಅವಹೇಳನ: ನಟ ಚೇತನ್ ಪೊಲೀಸ್ ವಿಚಾರಣೆಗೆ ಹಾಜರು

ಬ್ರಾಹ್ಮಣ್ಯ ಹಾಗೂ ಬ್ರಾಹ್ಮಣರ ಕುರಿತು ಅವಹೇಳನಾಕಾರಿ ಹೇಳಿಕೆ ನೀಡಿದ ಆರೋಪದಡಿ 'ಆ ದಿನಗಳು' ಚಿತ್ರ ಖ್ಯಾತಿಯ ಚೇತನ್ ಬುಧವಾರ ವಿಚಾರಣೆಗೆ ಹಾಜರಾಗಿದ್ದಾರೆ.

ಬೆಂಗಳೂರು: ಬ್ರಾಹ್ಮಣ್ಯ ಹಾಗೂ ಬ್ರಾಹ್ಮಣರ ಕುರಿತು ಅವಹೇಳನಾಕಾರಿ ಹೇಳಿಕೆ ನೀಡಿದ ಆರೋಪದಡಿ 'ಆ ದಿನಗಳು' ಚಿತ್ರ ಖ್ಯಾತಿಯ ಚೇತನ್ ಬುಧವಾರ ವಿಚಾರಣೆಗೆ ಹಾಜರಾಗಿದ್ದಾರೆ.

ತಮ್ಮ ಸ್ನೇಹಿತರು ಹಾಗೂ ವಕೀಲರೊಂದಿಗೆ ಚೇತನ್ ಇಂದು ಬಸವನಗುಡಿ ಇನ್ಸ್​ಪೆಕ್ಟರ್ ಆರ್. ರಮೇಶ್ ಎದುರು ವಿಚಾರಣೆಗೆ ಹಾಜರಾಗಿದ್ದಾರೆ.

ವಿಪ್ರ ಯುವ ವೇದಿಕೆ ಅಧ್ಯಕ್ಷ ಪವನ್‌ ಕುಮಾರ್ ಶರ್ಮಾ ಎಂಬುವರು ತಮ್ಮ ವಿರುದ್ಧ ದೂರು ನೀಡಿದ್ದಾರೆ. ಧಾರ್ಮಿಕ ಭಾವನೆ ಕೆರಳಿಸುವುದು (ಐಪಿಸಿ 129(ಎ) ಹಾಗೂ ದ್ವೇಷ ಭಾವನೆ ಹೆಚ್ಚಿಸುವ (ಐಪಿಸಿ 153 (ಬಿ) ಆರೋಪದಡಿ ಎಫ್‌ಐಆರ್ ದಾಖಲಿಸಿದ್ದಾರೆ ಎಂದು ಪೊಲೀಸ್ ನೋಟಿಸ್‌ನಲ್ಲಿ ಉಲ್ಲೇಖಿಸಲಾಗಿತ್ತು.

ಪ್ರಕರಣಕ್ಕೆ ಸಂಬಂಧಪಟ್ಟ ವಿಡಿಯೋಗಳನ್ನು ಯೂಟ್ಯೂಬ್ ಹಾಗೂ ಫೇಸ್‌ಬುಕ್‌ ಜಾಲತಾಣಗಳಲ್ಲಿ ಅಪ್‌ಲೋಡ್ ಮಾಡಲಾಗಿದೆ. ಈ ವಿಡಿಯೊಗಳನ್ನು ಯಾವ ಐ.ಡಿ.ಗಳಿಂದ ಅಪ್‌ಲೋಡ್ ಮಾಡಲಾಗಿದೆ. ಈ ಬಗ್ಗೆ ಮಾಹಿತಿ ನೀಡಿ ತನಿಖೆಗೆ ಸಹಕರಿಸಬೇಕು ಎಂದು ಪೊಲೀಸರು ನೋಟಿಸ್ ನಲ್ಲಿ ಸೂಚಿಸಿದ್ದರು.

ಸದ್ಯ ಚೇತನ್​​ ಅವರ ವಿಚಾರಣೆ ನಡೆಸುತ್ತಿರುವ ಪೊಲೀಸರು, ಫೇಸ್ ಬುಕ್​ನಲ್ಲಿ ಹಾಕಿರುವ ಪೋಸ್ಟ್ ಗಳ ಕುರಿತು ಮಾಹಿತಿ ಕಲೆ ಹಾಕುತ್ತಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

30 ನಿಮಿಷಗಳಲ್ಲಿ ಹಿಂದಕ್ಕೆ ಹೋಗಿ: ಶಾಂತಿ ಮಾತುಕತೆ ಮಧ್ಯೆ ಹಾರ್ಮುಜ್'ಗೆ ನುಗ್ಗಿದ ಅಮೆರಿಕದ Destroyer ಯುದ್ಧನೌಕೆಗೆ ಇರಾನ್ ಎಚ್ಚರಿಕೆ!

"ಇರಾನ್ ದೊಡ್ಡ ಮಟ್ಟದಲ್ಲಿ ಸೋಲುತ್ತಿದೆ": ಮಾತುಕತೆ ಮುಕ್ತಾಯಕ್ಕೂ ಮುನ್ನ ಟ್ರಂಪ್ ಘೋಷಣೆ

IPL 2026: ಸ್ಯಾಮ್ಸನ್ ಬ್ಯಾಟಿಂಗ್ ಅಬ್ಬರ; DC ವಿರುದ್ಧ CSK ಗೆ 23 ರನ್ ಗಳ ಭರ್ಜರಿ ಜಯ

ಖ್ಯಾತ ಗಾಯಕಿ ಆಶಾ ಭೋಸ್ಲೆಗೆ ಹೃದಯಾಘಾತ: ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲು

IPL 2026: ಚೆನ್ನೈ ಪರ ಸಂಜು ಸ್ಯಾಮ್ಸನ್ ಸ್ಫೋಟಕ ಬ್ಯಾಟಿಂಗ್; MS ಧೋನಿ ದಾಖಲೆ ಪುಡಿ; ದಿಗ್ಗಜರ ಗುಂಪಿಗೆ ಸೇರ್ಪಡೆ

SCROLL FOR NEXT