ನಟಿ ಮಾಲಾಶ್ರೀ, ಪತಿ ರಾಮು 
ಸಿನಿಮಾ ಸುದ್ದಿ

ಪತಿ ರಾಮು ನಿಧನವಾದ 12 ದಿನಗಳ ಬಳಿಕ ಮನದ ಮಾತು ಹಂಚಿಕೊಂಡ ನಟಿ ಮಾಲಾಶ್ರೀ!

ಪತಿ ರಾಮು ನಿಧನವಾದ 12 ದಿನಗಳು ಕಳೆದ ಬಳಿಕ ಇದೇ ಮೊದಲ ಬಾರಿಗೆ ನಟಿ ಮಾಲಾಶ್ರೀ ಪ್ರತಿಕ್ರಿಯೆ ನೀಡಿದ್ದು, ಬಹಿರಂಗ ಪತ್ರದ ಮೂಲಕ ತಮ್ಮ ಮನದ ಮಾತನ್ನು ಹಂಚಿಕೊಂಡಿದ್ದಾರೆ.

ಬೆಂಗಳೂರು: ಪತಿ ರಾಮು ನಿಧನವಾದ 12 ದಿನಗಳು ಕಳೆದ ಬಳಿಕ ಇದೇ ಮೊದಲ ಬಾರಿಗೆ ನಟಿ ಮಾಲಾಶ್ರೀ ಪ್ರತಿಕ್ರಿಯೆ ನೀಡಿದ್ದು, ಬಹಿರಂಗ ಪತ್ರದ ಮೂಲಕ ತಮ್ಮ ಮನದ ಮಾತನ್ನು ಹಂಚಿಕೊಂಡಿದ್ದಾರೆ.

ಕಳೆದ 12 ದಿನಗಳು ತುಂಬ ನೋವಿನಿಂದ ಕೂಡಿದ್ದವು. ಸಂಪೂರ್ಣ ಅಸ್ಪಷ್ಟವಾಗಿತ್ತು. ನನ್ನ ಪ್ರೀತಿಯ ಪತಿ ರಾಮು ನಿಧನದಿಂದಾಗಿ ನಮ್ಮ ಇಡೀ ಕುಟುಂಬದ ಹೃದಯ ಛಿದ್ರವಾಯಿತು. ಯಾವಾಗಲೂ ಅವರೇ ನಮ್ಮ ಬೆನ್ನೆಲುಬು. ನಮಗೆ ದಾರಿ ತೋರಿಸು ಬೆಳಕು ಅವರು ಎಂದು ಮಾಲಾಶ್ರೀ ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದಾರೆ.

‘ಇಂಥ ದಾರುಣ ಪರಿಸ್ಥಿತಿಯಲ್ಲಿ ರಾಮುಗಾಗಿ ಇಡೀ ಚಿತ್ರರಂಗವೇ ಪ್ರೀತಿ ತೋರಿಸಿದೆ. ನಮಗೆ ತೋರಿದ ಬೆಂಬಲವನ್ನು ಸದಾ ಕಾಲ ಸ್ಮರಿಸುತ್ತೇವೆ. ಮಾಧ್ಯಮದವರು, ಕಲಾವಿದರು, ನಿರ್ಮಾಪಕರು, ಅಭಿಮಾನಿಗಳು, ಸ್ನೇಹಿತರು ಹಾಗೂ ಹಿತೈಷಿಗಳು ರಾಮು ಜೀವನದ ಮುಖ್ಯ ಭಾಗವಾಗಿದ್ದಕ್ಕೆ ಧನ್ಯವಾದಗಳು. ಕಷ್ಟದ ಸಂದರ್ಭದಲ್ಲಿ ನಮಗಾಗಿ ಪ್ರೀತಿ ತೋರಿಸಿ ಪ್ರಾರ್ಥನೆ ಸಲ್ಲಿಸಿದ್ದಕ್ಕಾಗಿ ಧನ್ಯವಾದಗಳು’ ಎಂದು ತಮ್ಮ ಕುಟುಂಬದ ಪರವಾಗಿ ಮಾಲಾಶ್ರೀ ಬರೆದುಕೊಂಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನಮ್ಮಲ್ಲೂ ಅಸ್ತ್ರಗಳಿವೆ, ದಾಳಿಗೆ ಸಂಪೂರ್ಣ ಸಿದ್ಧ: ಅಮೆರಿಕಾ ಆರ್ಥಿಕ ದಿಗ್ಬಂಧನಕ್ಕೆ ಇರಾನ್‌ ಪ್ರತಿರೋಧ, ಭಾರೀ ಪ್ರತೀಕಾರದ ಎಚ್ಚರಿಕೆ

‘Iran ನನ್ನ ಪುತ್ರನನ್ನು ಹತ್ಯೆ ಮಾಡಲು ಯತ್ನಿಸಿತ್ತು’: ಟೆಹ್ರಾನ್‌ ವಿರುದ್ಧ ನೆತನ್ಯಾಹು ಗಂಭೀರ ಆರೋಪ

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ