ಸುನೀಲ್ ಕುಮಾರ್ ದೇಸಾಯಿ ಮತ್ತು ಅನಿಲ್ ಸಿದ್ಧು 
ಸಿನಿಮಾ ಸುದ್ದಿ

ಹಿರಿಯ ನಿರ್ದೇಶಕ ಸುನೀಲ್ ಕುಮಾರ್ ಜೊತೆ ಕೆಲಸ ಮಾಡಲು ಅನಿಲ್ ಸಿದ್ದು ರೆಡಿ

ಕನ್ನಡ ಸಿನಿಮಾಗಳಲ್ಲಿ ಸಕ್ರಿಯರಾಗಿರುವ ಅನಿಲ್ ಸಿದ್ದು, ಬಹುತೇಕ ವಿಲನ್ ಪಾತ್ರಗಳಲ್ಲಿ ನಟಿಸಿರುವ ಅನಿಲ್ ಸಿದ್ಧು ವಿಷಯಾಧಾರಿತ ಕತೆಯಲ್ಲಿ ನಟಿಸಲು ಆಸಕ್ತಿ ತೋರಿದ್ದಾರೆ.

ಕನ್ನಡ ಸಿನಿಮಾಗಳಲ್ಲಿ ಸಕ್ರಿಯರಾಗಿರುವ ಅನಿಲ್ ಸಿದ್ದು, ಬಹುತೇಕ ವಿಲನ್ ಪಾತ್ರಗಳಲ್ಲಿ ನಟಿಸಿರುವ ಅನಿಲ್ ಸಿದ್ಧು ವಿಷಯಾಧಾರಿತ ಕತೆಯಲ್ಲಿ ನಟಿಸಲು ಆಸಕ್ತಿ ತೋರಿದ್ದಾರೆ.

ಹಿರಿಯ ನಿರ್ದೇಶಕ ಸುನೀಲ್ ಕುಮಾರ್ ದೇಸಾಯಿ ಅವರ ಜೊತೆ ಕೆಲಸ ಮಾಡುವ ತಮ್ಮ ಕನಸು ನನಸಾಗಿದೆ ಎಂದು ಹೇಳಿದ್ದಾರೆ.

ಧರ್ಮ ಕೀರ್ತಿರಾಜ್ ಚಿತ್ರದಲ್ಲಿ ಖಳನಾಯಕನಾಗಿ ಪಾದಾರ್ಪಣೆ ಮಾಡಿದ ಈ ನಟ, ಸಿಲಿಕಾನ್ ಸಿಟಿ, ಪಡ್ಡೆ ಹುಲಿ, ಮತ್ತು ಇನ್ನೂ ಬಿಡುಗಡೆಯಾಗಬೇಕಾದ ವರದ ಚಿತ್ರಗಳಲ್ಲಿ ಖಳನಾಯಕನ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ.

ಉಪೇಂದ್ರ ಅವರ ಜೊತೆ ಸಹಾಯಕ ನಿರ್ದೇಶಕರಾಗಿ ಕೆಲಸ ಮಾಡಿದ್ದ ವಿಜಯ್ ಸೂರ್ಯ ನಿರ್ದೇಶನದ ಚಿತ್ರ ಎ ++ ಚಿತ್ರದಲ್ಲಿ ನಾಯಕನಾಗಿ ನಟಿಸಿದ್ದರು.

ವಿರಾಟ ಪರ್ವ ರಿಲೀಸ್ ಗಾಗಿ ಕಾಯುತ್ತಿದ್ದಾರೆ, ಬ್ರೇಕ್ ಗಾಗಿ ಹಂಬಲಿಸುತ್ತಿರುವ ನಟ ಅನಿಲ್ ಸಿದ್ಧು ಸುನೀಲ್ ಕುಮಾರ್ ದೇಸಾಯಿ ಜೊತೆ ಕೆಲಸ ಮಾಡಲು ಉತ್ಸುಕರಾಗಿದ್ದಾರೆ.

ನಮ್ಮ ಹೊಸ ಸ್ಟುಡಿಯೊ 'ಗಾಡ್ ಕಿಸ್ ಯು ಕ್ರಿಯೇಷನ್ಸ್'ಗೆ ನಾವು ನಿರ್ದೇಶಕರನ್ನು ಆಹ್ವಾನಿಸಿದ್ದೆವು, ಅವರು ನನ್ನ ಕೆಲವು ಫೋಟೋಗಳನ್ನು ನೋಡುವಾಗ, ನನಗಾಗಿ ಒಂದು ವಿಶಿಷ್ಟ ಕತೆ ಮಾಡುವುದಾಗಿ ತಿಳಿಸಿದ್ದಾರೆ.

ಪ್ರಾಜೆಕ್ಟ್ ಇನ್ನೂ ಆರಂಭದ ಹಂತದಲ್ಲಿದೆ. ಎಲ್ಲಾ ಸಿದ್ದವಾದ ಮೇಲೆ ನಿರ್ದೇಶಕರೇ ಸ್ವತಃ ಸಿನಿಮಾ ಬಗ್ಗೆ ಮಾಹಿತಿ ನೀಡಲಿದ್ದಾರೆ ಎಂದು ಹೇಳಿದ್ದಾರೆ. ತಮಿಳಿನ ಕಥಾತಿ, ನಾನು, ಕಾಟ್ರು ವೆಲಿಯಿದೈ ಮುಂತಾದ ಚಿತ್ರಗಳಲ್ಲಿ ಕೆಲಸ ಮಾಡಲು ನನಗೆ ಅವಕಾಶ ಸಿಕ್ಕಿತು. ಭವಿಷ್ಯದಲ್ಲಿ ವಿವಿಧ ಭಾಷೆಗಳಲ್ಲಿ ಪ್ರಸಿದ್ಧ ನಿರ್ದೇಶಕರೊಂದಿಗೆ ಕೆಲಸ ಮಾಡಲು ನಾನು ಆಶಿಸುತ್ತೇನೆ" ಎಂದು ಅನಿಲ್ ಸಿದ್ಧು ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಕೇರಳಂನ ತ್ರಿಶೂರ್‌ನಲ್ಲಿ ನಿಂತಿದ್ದ ಟ್ರಕ್‌ಗೆ ಕಾರು ಡಿಕ್ಕಿ: ತಮಿಳು ನಾಡಿನ ಎಂಟು ಮಂದಿ ಸಾವು, 7 ಎಂಜಿನಿಯರಿಂಗ್ ವಿದ್ಯಾರ್ಥಿಗಳು; Video

ಮತ್ತೊಂದು ಮಹಾಯುದ್ಧದ ಭೀತಿ: ಇರಾನ್‌ನ 'Pickaxe Mountain' ಧ್ವಂಸಕ್ಕೆ ಅಮೆರಿಕ ಸ್ಕೆಚ್, "ಶೀಘ್ರದಲ್ಲೇ ದಾಳಿ" ಎಂದ ಡೊನಾಲ್ಡ್ ಟ್ರಂಪ್..!

China ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಅಮೆರಿಕಕ್ಕೆ; ಸೆ.24ರಂದು ಶ್ವೇತಭವನದಲ್ಲಿ ಔತಣಕೂಟ, Iran ಸಂಘರ್ಷವನ್ನು ‘ಸಣ್ಣ ವಿಚಾರ’ ಎಂದ Trump

ಒಬ್ಬ ರಾಜಿನಾಮೆ ಕೊಟ್ಟರೇನು? ನಮ್ಮ ಸರ್ಕಾರದಲ್ಲಿ 100 ನಾಗೇಂದ್ರ ಇದ್ದಾರೆ; ಸಿಎಂ ಡಿಕೆ ಶಿವಕುಮಾರ್

Park Billiಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಆಕ್ಷೇಪ: ಸ್ಪಷ್ಟನೆ ಕೋರಿ ಸರ್ಕಾರಕ್ಕೆ ವಾಪಸ್..!