ರಜನಿಕಾಂತ್ 
ಸಿನಿಮಾ ಸುದ್ದಿ

ಕೊರೋನಾ ವಿರುದ್ಧದ ಹೋರಾಟಕ್ಕೆ ಒಂದು ಕೋಟಿ ರೂ. ದೇಣಿಗೆ ನೀಡಿದ ರಜನಿಕಾಂತ್

ಮಹಾಮಾರಿ ಕೊರೋನಾ ವೈರಸ್ ವಿರುದ್ಧದ ಹೋರಾಟಕ್ಕೆ ತಮಿಳು ಸೂಪರ್ ಸ್ಟಾರ್ ರಜನಿಕಾಂತ್ ಅವರು ತಮಿಳುನಾಡು ಸರ್ಕಾರದ ಜೊತೆ ಕೈ ಜೋಡಿಸಿದ್ದಾರೆ.

ಚೆನ್ನೈ: ಮಹಾಮಾರಿ ಕೊರೋನಾ ವೈರಸ್ ವಿರುದ್ಧದ ಹೋರಾಟಕ್ಕೆ ತಮಿಳು ಸೂಪರ್ ಸ್ಟಾರ್ ರಜನಿಕಾಂತ್ ಅವರು ತಮಿಳುನಾಡು ಸರ್ಕಾರದ ಜೊತೆ ಕೈ ಜೋಡಿಸಿದ್ದಾರೆ.

ತಮಿಳುನಾಡು ಮುಖ್ಯಮಂತ್ರಿ ಪರಿಹಾರ ನಿಧಿಗೆ ಒಂದು ಕೋಟಿ ರೂಪಾಯಿ ದೇಣಿಗೆ ನೀಡುವ ಮೂಲಕ ತಲೈವಾ ರಾಜ್ಯ ಸರ್ಕಾರಕ್ಕೆ ನೆರವಾಗಿದ್ದಾರೆ. 

ರಜನಿ ಪರವಾಗಿ ಅವರ ಮಗಳು ಸೌಂದರ್ಯ ಅವರು ಒಂದು ಕೋಟಿ ಮೌಲ್ಯದ ಚೆಕ್ ಅನ್ನು ಸರ್ಕಾರಕ್ಕೆ ಹಸ್ತಾಂತರಿಸಿದ್ದಾರೆ ಎನ್ನಲಾಗಿದೆ.

ತಮಿಳಿನ ಮತ್ತೊಬ್ಬ ನಟ ಅಜಿತ್ ಕುಮಾರ್ ಸಹ ಮುಖ್ಯಮಂತ್ರಿಯವರ ಪರಿಹಾರ ನಿಧಿಗೆ 25 ಲಕ್ಷ ದೇಣಿಗೆ ನೀಡಿದ್ದಾರೆ ಎಂದು ವರದಿಯಾಗಿದೆ. ಈ ಕುರಿತು ಅಜಿತ್ ಮ್ಯಾನೇಜರ್ ಅಧಿಕೃತವಾಗಿ ತಿಳಿಸಿರುವುದಾಗಿ ವಿಶ್ಲೇಷಕ ರಮೇಶ್ ಬಾಲ ಟ್ವೀಟ್ ಮಾಡಿದ್ದಾರೆ.

ರಜನಿಕಾಂತ್ ನಿನ್ನೆಯಷ್ಟೇ ಕೋವಿಡ್ ಲಸಿಕೆಯ ಎರಡನೇ ಡೋಸ್ ಪಡೆದುಕೊಂಡಿದ್ದಾರೆ. ಹೈದರಾಬಾದ್‌ನಲ್ಲಿ ಅಣ್ಣಾತ್ತೆ ಸಿನಿಮಾದ ಚಿತ್ರೀಕರಣ ಮುಗಿಸಿ ಚೆನ್ನೈಗೆ ಬಂದಿದ್ದ ರಜನಿ, ನಂತರ ಕೊರೋನಾ ಲಸಿಕೆ ಹಾಕಿಸಿಕೊಂಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಇಂಧನ ಸ್ಥಾವರಗಳ ಮೇಲಿನ ದಾಳಿಯನ್ನು ನಿಲ್ಲಿಸಲು ರಷ್ಯಾ-ಉಕ್ರೇನ್ ಒಪ್ಪಿಕೊಂಡಿವೆ: ಟ್ರಂಪ್ ಘೋಷಣೆ

ಕೊನೆಯ ಓವರ್‌ನಲ್ಲಿ ಭಾರತಕ್ಕೆ ವಿಂಡೀಸ್ ವಿರುದ್ಧ ರೋಚಕ ಜಯ: T20 ಸರಣಿಯಲ್ಲಿ 2-1 ಮುನ್ನಡೆ!

'We're Sorry': ಅಭಿಜಿತ್ ದೀಪ್ಕೆಗೆ ಅಜ್ಜಿಯ ಸಾವಿನ ಬಗ್ಗೆ ತಿಳಿಸಿದ್ದ ಮಹಿಳಾ ಪೊಲೀಸ್; ಹೇಗಿತ್ತು CJP ನಾಯಕನ ಪ್ರತಿಕ್ರಿಯೆ...: ವಿಡಿಯೋ ವೈರಲ್!

'ಮತದಾನದ ಹಕ್ಕನ್ನೇ ಕಸಿದರೆ ಯಾವ ಪಕ್ಷವೂ ಸುರಕ್ಷಿತವಾಗಿರಲ್ಲ': SIR ವಿರುದ್ಧ ದೇಶಾದ್ಯಂತ ಹೋರಾಟಕ್ಕೆ CJP ಕರೆ

ಸ್ಟಿಂಗ್‌ ಆಪರೇಷನ್ ಆರೋಪ: ಶಾಂಗ್ರೀಲಾ ಹೋಟೆಲ್‌ನಲ್ಲಿ ಯಾರ ಜೊತೆ ಕುಳಿತಿದ್ರಿ; ಸಿಎಂ ಶಿವಕುಮಾರ್ ವಿರುದ್ಧ HDK ಹೊಸ ಬಾಂಬ್