ವರನಟ ಡಾ. ರಾಜ್ ಅವರ ಯೋಗಗುರು ಹೆಚ್.ಎಫ್. ನಾಯ್ಕರ್ ನಿಧನ
ವರನಟ ಡಾ. ರಾಜ್ಕುಮಾರ್ ಅವರ ಯೋಗಗುರುಗಳಾಗಿದ್ದ ಕೆಎಸ್ಆರ್ಪಿ ನಿವೃತ್ತ ಡಿಐಜಿ ಡಾ. ಹೊನ್ನಪ್ಪ ಫಕೀರಪ್ಪ ನಾಯ್ಕರ್ (85) ಇಂದು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು.
ಬೆಂಗಳೂರು: ವರನಟ ಡಾ. ರಾಜ್ಕುಮಾರ್ ಅವರ ಯೋಗಗುರುಗಳಾಗಿದ್ದ ಕೆಎಸ್ಆರ್ಪಿ ನಿವೃತ್ತ ಡಿಐಜಿ ಡಾ. ಹೊನ್ನಪ್ಪ ಫಕೀರಪ್ಪ ನಾಯ್ಕರ್ (85) ಇಂದು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು.
ಮೃತರು ಪತ್ನಿ ,ಮೂವರು ಪುತ್ರರು ಹಾಗೂ ಅಪಾರ ಅಭಿಮಾನಿ ಬಳಗವನ್ನು ಅಗಲಿದ್ದಾರೆ.
ಧಾರವಾಡದ ಕುಂದಗೋಳ ಮೂಲದವರಾಗಿದ್ದ ನಾಯ್ಕರ್ ಕಳೆದ ಐದು ದಶಕಗಳಿಂದ ಬೆಂಗಳೂರಿನಲ್ಲಿ ನೆಲೆಸಿದ್ದರು, ಕನಕಪುರ ರಸ್ತೆ ಬಿ.ಎಂ.ಕಾವಲ್ನಲ್ಲಿ ಮಹಾಯೋಗಕ್ಷೇತ್ರ ಸ್ಥಾಪಿಸುವ ಮೂಲಕ ಡಾ.ರಾಜ್ಕುಮಾರ್ ಸೇರಿ ವಿವಿಧ ಕ್ಷೇತ್ರದ ಗಣ್ಯರಿಗೆ ಹಠಯೋಗದ ಸಾಧನೆ ಮಾಡಿಸಿದ್ದರು.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.