ಮಲಯಾಳಂ ನಟ ಉನ್ನಿದೇವ್ ಹಾಗೂ ಅವರ ಪತ್ನಿ ಪ್ರಿಯಾಂಕಾ 
ಸಿನಿಮಾ ಸುದ್ದಿ

ಪತ್ನಿ ಆತ್ಮಹತ್ಯೆ ಪ್ರಕರಣ ಸಂಬಂಧ ಮಲಯಾಳಂ ನಟ ಉನ್ನಿ ದೇವ್ ಬಂಧನ!

ಪತ್ನಿ ಪ್ರಿಯಾಂಕ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ  ಮಲಯಾಳಂ ನಟ ಉನ್ನಿ ದೇವ್ ಅವರನ್ನು ಮಂಗಳವಾರ ಬಂಧಿಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ. 

ತಿರುವನಂತಪುರಂ: ಪತ್ನಿ ಪ್ರಿಯಾಂಕ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ  ಮಲಯಾಳಂ ನಟ ಉನ್ನಿ ದೇವ್ ಅವರನ್ನು ಮಂಗಳವಾರ ಬಂಧಿಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ. 

ಪತಿ ಉನ್ನಿದೇವ್ ವಿರುದ್ಧ ಕೌಟುಂಬಿಕ ದೌರ್ಜನ್ಯದ ವಿರುದ್ಧ ಪೊಲೀಸರಿಗೆ ದೂರು ನೀಡಿದ ಮಾರನೇ ದಿನ ಮೇ 12ರಂದು  ಪ್ರಿಯಾಂಕ, ತನ್ನ ಮನೆಯ ಬೆಡ್ ರೂಮ್ ನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದರು. ಅವರು ಸ್ಥಳೀಯ ಶಾಲೆಯೊಂದರಲ್ಲಿ ದೈಹಿಕ ಶಿಕ್ಷಕಿಯಾಗಿ ಕಾರ್ಯನಿರ್ವಹಿಸುತ್ತಿದ್ದರು.

ಈ ಪ್ರಕರಣ ಸಂಬಂಧ ಎರ್ನಾಕುಲಂ ಜಿಲ್ಲೆಯ ಮನೆಯಲ್ಲಿದ್ದ ಉನ್ನಿದೇವ್ ಅವರನ್ನು  ಇಂದು ಪೊಲೀಸರು ಕಸ್ಟಡಿಗೆ ಪಡೆದಿದ್ದಾರೆ. ಉನ್ನಿದೇವ್ ಅವರಿಗೆ ಕೋವಿಡ್- ಪಾಸಿಟಿವ್ ಇದ್ದ ಕಾರಣ ಸೋಂಕಿನಿಂದ ಗುಣಮುಖರಾಗಲು ಕಾಯುತ್ತಿದ್ದೇವು. ಇಂದು ಬೆಳಗ್ಗೆ ಆತನ ಮನೆಗೆ ಹೋಗಿ ಅಂಬ್ಯುಲೆನ್ಸ್ ನಲ್ಲಿ ಸಂಬಂಧಿತ ಆಸ್ಪತ್ರೆಗೆ ಕರೆದೊಯ್ದು ಸೋಂಕಿನ ಪರೀಕ್ಷೆ ಮಾಡಿಸಿದಾಗ ನೆಗೆಟಿವ್ ಬಂದಿತ್ತು. ನಂತರ ಆತನನ್ನು ಬಂಧಿಸಲಾಯಿತು ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಪಿಟಿಐ ಸುದ್ದಿಸಂಸ್ಥೆಯೊಂದಕ್ಕೆ ತಿಳಿಸಿದ್ದಾರೆ.

ಕೌಟುಂಬಿಕ ದೌರ್ಜನ್ಯ ಮತ್ತು ಹಣಕ್ಕಾಗಿ ಮಾನಸಿಕ ಹಾಗೂ ದೈಹಿಕವಾಗಿ ಹಿಂಸೆಗಾಗಿ ಉನ್ನಿದೇವ್ ವಿರುದ್ಧ ಮೃತ ಪ್ರಿಯಾಂಕಾಳ ಪೋಷಕರು ಕೂಡಾ ದೂರು ದಾಖಲಿಸಿದ್ದಾರೆ.2019ರಲ್ಲಿ ಮದುವೆಯಾದ ಆರಂಭದಲ್ಲಿ ಅವರಿಬ್ಬರು ಸಂಬಂಧ ಚೆನ್ನಾಗಿಯೇ ಇತ್ತು. ಆದರೆ, ತದನಂತರ ವರದಕ್ಷಣೆಗಾಗಿ ಉನ್ನಿದೇವ್ ಹಾಗೂ ಅವರ ಕುಟುಂಬಸ್ಥರು ಕಿರುಕುಳ ನೀಡಲು ಆರಂಭಿಸಿದ್ದರು ಎಂದು ಪ್ರಿಯಾಂಕಾಳ ಕುಟುಂಬಸ್ಥರು ಆರೋಪಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

INDIA ಬ್ಲಾಕ್ ನಲ್ಲಿ ಬಿರುಕು?: ಆಪ್ ಕೈ ಕೊಟ್ಟ ಬೆನ್ನಲ್ಲೇ ಭೋಜನ ಕೂಟಕ್ಕೆ ಸಮಾಜವಾದಿ ಪಕ್ಷ ಗೈರು!

ರಾಹುಲ್, ಪ್ರಿಯಾಂಕಾ ಗಾಂಧಿಯನ್ನು ಎಳೆದೊಯ್ದು ವಶಕ್ಕೆ ಪಡೆದ ಪೊಲೀಸರು; ಬಸ್‌ನ ಟೈರ್ ಪಂಕ್ಚರ್ ಮಾಡಿದ ಕಾರ್ಯಕರ್ತರು

ಭಾರತವನ್ನು ಜಾಗತಿಕ ಶಕ್ತಿಯಾಗಿಸಿದ್ದು ಮೋದಿ, ಅಂತಹವರ ವಿರುದ್ಧವೇ ಸಂಚು: ಸರ್ಬಿಯಾ ಮಾಜಿ ಅಧ್ಯಕ್ಷ, Video ವೈರಲ್

SIR ವಿರುದ್ಧ ಕಾಂಗ್ರೆಸ್ ಪ್ರತಿಭಟನೆ: ಡಿಎಂಕೆ ಯು-ಟರ್ನ್!

ಗ್ರಾಹಕರಿಗೆ ನೆಮ್ಮದಿ: ಕಟಾವಿಗೆ ಬಂದ ಖಾರಿಫ್ ಬೆಳೆ, ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಈರುಳ್ಳಿ ದರ ಕುಸಿತ ಸಾಧ್ಯತೆ, 2 ಲಕ್ಷ ಕ್ವಿಂಟಾಲ್‌ ಪೂರೈಕೆ!