'ಅಮೃತಮತಿ' ಚಿತ್ರದ ದೃಶ್ಯ 
ಸಿನಿಮಾ ಸುದ್ದಿ

ಲಾಸ್ ಏಂಜಲೀಸ್ ಫಿಲ್ಮ್ ಫೆಸ್ಟ್: 'ಅಮೃತಮತಿ' ಅತ್ಯುತ್ತಮ ಚಿತ್ರ, ಬರಗೂರು ರಾಮಚಂದ್ರಪ್ಪಗೆ 'ಅತ್ಯುತ್ತಮ ಚಿತ್ರಕಥೆ' ಪ್ರಶಸ್ತಿ

ಸ್ಯಾಂಡಲ್ ವುಡ್ ನಟಿ ಹರಿಪ್ರಿಯಾ ಪ್ರಮುಖ ಪಾತ್ರದಲ್ಲಿ ಅಭಿನಯಿಸಿರುವ "ಅಮೃತಮತಿ" ಚಿತ್ರ ಇದಾಗಲೇ ಸಾಕಷ್ಟು ಅಂತರಾಷ್ಟ್ರೀಯ ಚಿತ್ರೋತ್ಸವದಲ್ಲಿ ಪ್ರದರ್ಶನಗೊಂಡು ಅನೇಕ ಪ್ರಶಸ್ತಿಗಳನ್ನು ಗಳಿಸಿಕೊಂಡಿದೆ.

ಸ್ಯಾಂಡಲ್ ವುಡ್ ನಟಿ ಹರಿಪ್ರಿಯಾ ಪ್ರಮುಖ ಪಾತ್ರದಲ್ಲಿ ಅಭಿನಯಿಸಿರುವ "ಅಮೃತಮತಿ" ಚಿತ್ರ ಇದಾಗಲೇ ಸಾಕಷ್ಟು ಅಂತರಾಷ್ಟ್ರೀಯ ಚಿತ್ರೋತ್ಸವದಲ್ಲಿ ಪ್ರದರ್ಶನಗೊಂಡು ಅನೇಕ ಪ್ರಶಸ್ತಿಗಳನ್ನು ಗಳಿಸಿಕೊಂಡಿದೆ. ಇದೀಗ ಲಾಸ್ ಏಂಜಲೀಸ್ ಸನ್ ಫಿಲ್ಮ್ ಫೆಸ್ಟ್ ನಲ್ಲಿ ಈ ಚಿತ್ರಕ್ಕೆ ಅತ್ಯುತ್ತಮ ಚಿತ್ರ ಪ್ರಶಸ್ತಿ ಒಲಿಯುವುದರೊಡನೆ ಸ್ಯಾಂಡಲ್ ವುಡ್ ಹೆಮ್ಮೆ ಪಡುವಂತೆ ಮಾಡಿದೆ.

ಬರಗೂರು ರಾಮಚಂದ್ರಪ್ಪ ನಿರ್ದೇಶನದ ಈ ಚಿತ್ರಕ್ಕೆ ಅಟ್ಲಾಂಟಾ ಅಂತರಾಷ್ಟ್ರೀಯ ಚಿತ್ರೋತ್ಸವದಲ್ಲಿ ಪ್ರಶಸ್ತಿ ಲಭಿಸಿತ್ತು, ಈ ಬಾರಿ ಲಾಸ್ ಏಂಜಲೀಸ್ ಚಿತ್ರೋತ್ಸವದಲ್ಲಿ ಅತ್ಯುತ್ತಮ ಚಿತ್ರ ಹಾಗೂ ಅತ್ಯುತ್ತಮ ಚಿತ್ರಕಥೆ ವಿಭಾಗಗಳಲ್ಲಿ ಪ್ರಶಸ್ತಿ ಗಳಿಸಿದೆ.

ಜನ್ನನ ಯಶೋಧರ ಚರಿತೆ ಕಥೆಯಾಧಾರಿತ ಚಿತ್ರ ಇದಾಗಲೇ ಹತ್ತು ಅಂತರಾಷ್ಟ್ರೀಯ ಚಿತ್ರೋತ್ಸವದಲ್ಲಿ ಪ್ರದರ್ಶನವಾಗಿದೆ. ಇಂಚರ ಪುಟ್ಟಣ್ಣ ಪ್ರೊಡಕ್ಷನ್  ಬ್ಯಾನರ್ ಅಡಿಯಲ್ಲಿ ಪುಟ್ಟಣ್ಣ ಈ ಚಿತ್ರವನ್ನು ನಿರ್ಮಿಸಿದ್ದಾರೆ.

ಕೊರೋನಾ ಸಂಕಷ್ಟ ಕಳೆದ ಮೇಲೆ ಅಮೃತಮತಿ ಸಿನಿಮಾ ದೇಶಾದ್ಯಂತ ಪ್ರದರ್ಶನ ಕಾಣಲಿದೆ ಎಂದು ನಿರ್ದೇಶಕ ಬರಗೂರು ರಾಮಚಂದ್ರಪ್ಪ ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನ್ಯಾಯಾಂಗದಲ್ಲಿ ಭ್ರಷ್ಟಾಚಾರದ ಪಾಠ: ಕೇಂದ್ರ ಕ್ಷಮೆಯಾಚಿಸುತ್ತಿದ್ದಂತೆ NCERT ಪಠ್ಯ ಪುಸ್ತಕ ಬ್ಯಾನ್, ಪ್ರತಿಗಳನ್ನು ವಶಕ್ಕೆ ಪಡೆಯಲು ಸುಪ್ರೀಂ ಸೂಚನೆ

'ನಿಮ್ಮ ಭಾಷಣ ನಾಚಿಕೆಯಿಲ್ಲದೆ ಸಮರ್ಥನೆ ಮಾಡಿಕೊಂಡಂತೆ ಇತ್ತು': 1947ರ ಐನ್ ಸ್ಟೈನ್ ನೆಹರೂಗೆ ಬರೆದ ಪತ್ರ ಉಲ್ಲೇಖಿಸಿ Modi ಟೀಕಿಸಿದ ಕಾಂಗ್ರೆಸ್

Ranji Trophy final: ಔಕಿಬ್ ನಬಿ ಬೌಲಿಂಗ್ ಮ್ಯಾಜಿಕ್‌ಗೆ ಬೆರಗಾದ ಕೆಎಲ್ ರಾಹುಲ್; ಆರಂಭದಲ್ಲೇ ಕರ್ನಾಟಕಕ್ಕೆ ಸಂಕಷ್ಟ!

T20 World cup 2026: 'ಆಕ್ರಮಣಕಾರಿ ಶೈಲಿ ಮುಂದುವರಿಸಿ': ಜಿಂಬಾಬ್ವೆ ವಿರುದ್ಧದ ಪಂದ್ಯಕ್ಕೂ ಮುನ್ನ ಟೀಂ ಇಂಡಿಯಾಗೆ ಅನಿಲ್ ಕುಂಬ್ಳೆ ಎಚ್ಚರಿಕೆ

ರಿಯಲ್ ಲೈಫ್‌ನಲ್ಲೂ ಒಂದಾದ ರೀಲ್ ಜೋಡಿ: ತೆಲುಗು ಸಂಪ್ರದಾಯದಂತೆ ರಶ್ಮಿಕಾ–ವಿಜಯ್ ವಿವಾಹ, ಸಂಜೆ ಕೊಡವ ಸಂಪ್ರದಾಯದಲ್ಲಿ ಮತ್ತೊಂದು ಸಮಾರಂಭ

SCROLL FOR NEXT