ವಿಜಯಲಕ್ಷ್ಮಿ 
ಸಿನಿಮಾ ಸುದ್ದಿ

ಕನ್ನಡಿಗರೆಂದು ಯಾರೂ ಸಹಾಯ ಮಾಡುತ್ತಿಲ್ಲ: ಸಹಾಯಕ್ಕಾಗಿ ಶಿವಣ್ಣನಿಗೆ ಅಂಗಲಾಚಿದ ನಟಿ ವಿಜಯಲಕ್ಷ್ಮಿ

ತಮಿಳುನಾಡಿನಲ್ಲಿ ನೆಲೆಸಿರುವ ನಟಿ ವಿಜಯಲಕ್ಷ್ಮಿ ಇದೀಗ ತಾವು ಸಂಕಷ್ಟಕ್ಕೆ ಸಿಲುಕಿದ್ದು ಯಾರು ಸಹಾಯಕ್ಕೆ ಮುಂದೆ ಬರುತ್ತಿಲ್ಲ. ಅಲ್ಲದೆ ನಾನು ಕನ್ನಡಿಗಳೆಂದು ನಮಗೆ ಯಾರು ಸಹಾಯ ಮಾಡುತ್ತಿಲ್ಲ ಎಂದು ಅಸಹಾಯಕತೆ ವ್ಯಕ್ತಪಡಿಸಿದ್ದಾರೆ.

ಬೆಂಗಳೂರು: ತಮಿಳುನಾಡಿನಲ್ಲಿ ನೆಲೆಸಿರುವ ನಟಿ ವಿಜಯಲಕ್ಷ್ಮಿ ಇದೀಗ ತಾವು ಸಂಕಷ್ಟಕ್ಕೆ ಸಿಲುಕಿದ್ದು ಯಾರು ಸಹಾಯಕ್ಕೆ ಮುಂದೆ ಬರುತ್ತಿಲ್ಲ. ಅಲ್ಲದೆ ನಾನು ಕನ್ನಡಿಗಳೆಂದು ನಮಗೆ ಯಾರು ಸಹಾಯ ಮಾಡುತ್ತಿಲ್ಲ ಎಂದು ಅಸಹಾಯಕತೆ ವ್ಯಕ್ತಪಡಿಸಿದ್ದಾರೆ. 

ಈ ಬಗ್ಗೆ ವಿಡಿಯೋ ಮೂಲಕ ಮಾತನಾಡಿರುವ ನಟಿ, ಕೊರೋನಾ ಸಮಯದಲ್ಲಿ ನನ್ನ ಅಕ್ಕ ಉಷಾ ಆರೋಗ್ಯ ಹದಗೆಟ್ಟಿದೆ. ಅವರಿಗೆ ಸರಿಯಾದ ಚಿಕಿತ್ಸೆ ಕೊಡಿಸಲು ನನ್ನಿಂದ ಆಗುತ್ತಿಲ್ಲ. ಯಾವುದೇ ನಟರು ಸಹಾಯಕ್ಕೆ ಮುಂದೆ ಬರುತ್ತಿಲ್ಲ ಎಂದು ಎಂದು ತಮ್ಮ ಅಳಲನ್ನು ತೊಡಿಕೊಂಡಿದ್ದಾರೆ. 

ಇದಕ್ಕೆಲ್ಲ ಕಾರಣ ನಟ, ನಿರ್ದೇಶಕ, ರಾಜಕೀಯ ಮುಖಂಡ ಸೀಮನ್ ಎಂದು ವಿಜಯಲಕ್ಷ್ಮಿ ಆರೋಪಿಸಿದ್ದಾರೆ. ಹೌದು ಸೀಮಾನ್ ಇಲ್ಲಿ ಸಂಘಟನೆ ಕಟ್ಟಿಕೊಂಡು ಕನ್ನಡಿಗರ ಮೇಲೆ ದಬ್ಬಾಳಿಕೆ ಮಾಡುತ್ತಿದ್ದಾನೆ. ಕನ್ನಡಿಗರಿಗೆ ಅವಹೇಳನ ಮಾಡುತ್ತಿದ್ದಾನೆ. ನಾನು ಸಹ ಕನ್ನಡದವಳು ಎನ್ನುವ ಕಾರಣಕ್ಕೆ ತಮಿಳುನಾಡಿನಲ್ಲಿ ಯಾರು ಸಹಾಯಕ್ಕೆ ಬರುತ್ತಿಲ್ಲ ಎಂದು ಹೇಳಿದ್ದಾರೆ. 

ಸೂಪರ್ ಸ್ಟಾರ್ ರಜನಿಕಾಂತ್ ಸೇರಿದಂತೆ ಹಲವು ನಟರು ಕೋವಿಡ್ ಸಂಕಷ್ಟದಲ್ಲಿ ಸರ್ಕಾರಕ್ಕೆ ಹಣ ನೀಡಿದ್ದಾರೆ. ಆದರೆ ನನ್ನ ಸಹಾಯಕ್ಕೆ ಯಾರೂ ಬರುತ್ತಿಲ್ಲ. ಇದಕ್ಕೆ ಕಾರಣ ಸೀಮನ್. ನಾನು ಕನ್ನಡದಳು ಕರ್ನಾಟಕದವಳು ಎಂಬ ಉದ್ದೇಶದಿಂದ ಈ ರೀತಿ ಮಾಡುತ್ತಿದ್ದಾನೆ. ರಜನಿ ಅವರನ್ನು ರಾಜಕೀಯಕ್ಕೆ ಬರದಂತೆ ಮಾಡಿದ ರೀತಿ ನಿಮ್ಮನ್ನೂ ಕರ್ನಾಟಕಕ್ಕೆ ಓಡಿಸುತ್ತೇನೆ ಎನ್ನುತ್ತಿದ್ದಾನೆ. ಸೀಮನ್ ಜೊತೆ ಎರಡು ವರ್ಷ ಇದ್ದು ಸಾಕಾಗಿದೆ ಎಂದು ಹೇಳಿದ್ದಾರೆ. 

ನನ್ನ ಅಕ್ಕನ ಆರೋಗ್ಯ ತೀರ ಗಂಭೀರವಾಗಿದೆ. ಗರ್ಭಾಶಯದ ತೊಂದರೆಯಿಂದ ಚೆನ್ನೈನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರೂ ಸಾವು ಬದುಕಿನ ಹೋರಾಟ ನಡೆಸುತ್ತಿದ್ದಾಳೆ. ಇನ್ನು ಚೆನ್ನೈನಲ್ಲಿ ಲಾಕ್ ಡೌನ್ ಮುಗಿದ ಮೇಲೆ ಬೆಂಗಳೂರಿಗೆ ಬರ್ತೀನಿ. ನನಗೆ ಸಹಾಯ ಮಾಡಿ ಎಂದು ಶಿವರಾಜಕುಮಾರ್ ಅವರಿಗೆ ಕೇಳಿಕೊಂಡಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಾಜ್‌ಘಟ್‌ನಲ್ಲಿ 'ಇಂಡಿಯಾ' ನಾಯಕರಿಂದ ಧರಣಿ; ಜ್ಞಾನೇಶ್ ಕುಮಾರ್ ರಾಜೀನಾಮೆ ನೀಡುವವರೆಗೂ 'ವೋಟ್ ಚೋರಿ' ಹೋರಾಟ ಮುಂದುವರಿಸಲು ಪ್ರತಿಜ್ಞೆ!

SIR ಕಾನೂನುಬದ್ಧ: ಪ್ರತಿಪಕ್ಷಗಳ ಪ್ರತಿಭಟನೆ ನಡುವೆ CEC ಜ್ಞಾನೇಶ್ ಬೆಂಬಲಕ್ಕೆ ನಿಂತ 42 ನಿವೃತ್ತ ನ್ಯಾಯಾಧೀಶರು!

ಸರ್ಕಾರವನ್ನು ಅಸ್ಥಿರಗೊಳಿಸುವ ಪಿತೂರಿ: 'ಸ್ಟಿಂಗ್ ಆಪರೇಷನ್' ಕುರಿತು ಸಿಎಂ DKS ಎಚ್ಚರಿಕೆ ಕರೆಗೆ ಸಚಿವರಿಂದ ಬೆಂಬಲ

ರೇಣುಕಾಸ್ವಾಮಿ ಕೊಲೆ ಪ್ರಕರಣ: ನಟ ಚಿಕ್ಕಣ್ಣ, ಯಶಸ್ ಸೂರ್ಯಗೆ ಬಿಗ್ ಶಾಕ್‌; ಇಬ್ಬರಿಗೂ ಕೋರ್ಟ್ ಸಮನ್ಸ್

ಉತ್ತರ ಪ್ರದೇಶ ಚುನಾವಣೆಗೂ ಮುನ್ನ ಅಖಿಲೇಶ್ ಯಾದವ್'ಗೆ ಬಿಗ್ ಶಾಕ್; BJP ಸೇರಲಿದ್ದಾರೆ SPಯ ಮೂವರು ಶಾಸಕರು!