ಪುನೀತ್ ಮತ್ತು ವಿಶಾಲ್ 
ಸಿನಿಮಾ ಸುದ್ದಿ

'ಪುನೀತ್' ಜವಾಬ್ದಾರಿ ವಿಶಾಲ್ ಹೆಗಲಿಗೆ: 'ಅಪ್ಪು' ಓದಿಸುತ್ತಿದ್ದ ಮಕ್ಕಳ ವಿದ್ಯಾಭ್ಯಾಸದ ಹೊಣೆ ಹೊತ್ತ ತಮಿಳು ನಟ !

ಪುನೀತ್ ರಾಜ್​​ಕುಮಾರ್ ಓದಿಸುತ್ತಿದ್ದ ಮಕ್ಕಳ ವಿದ್ಯಾಭ್ಯಾಸದ ಹೊಣೆ ಹೊರುವೆ ಎಂದು ತಮಿಳು ನಟ ವಿಶಾಲ್​ ಘೋಷಣೆ ಮಾಡಿದ್ದಾರೆ.

ಬೆಂಗಳೂರು: ಪುನೀತ್ ರಾಜ್​​ಕುಮಾರ್ ಓದಿಸುತ್ತಿದ್ದ ಮಕ್ಕಳ ವಿದ್ಯಾಭ್ಯಾಸದ ಹೊಣೆ ಹೊರುವೆ ಎಂದು ತಮಿಳು ನಟ ವಿಶಾಲ್​ ಘೋಷಣೆ ಮಾಡಿದ್ದಾರೆ.

ಮುಂದಿನ ವರ್ಷದಿಂದ 1800 ಮಕ್ಕಳ ಜವಾಬ್ದಾರಿ ನನ್ನದು ಎಂದು ಅವರು ತಿಳಿಸಿದ್ದಾರೆ. ಹೃದಯಾಘಾತದಿಂದ ಪುನೀತ್ ರಾಜ್​ಕುಮಾರ್ ಅಕ್ಟೋಬರ್ 29 ರಂದು ನಿಧನರಾಗಿದ್ದರು. ಈ ಹಿನ್ನೆಲೆಯಲ್ಲಿ ಪುನೀತ್ ಓದಿಸುತ್ತಿದ್ದ ಮಕ್ಕಳ ವಿದ್ಯಾಭ್ಯಾಸದ ಹೊಣೆ ತಾನು ಹೊರುವುದಾಗಿ ತಮಿಳು ನಟ ಹೇಳಿದ್ದಾರೆ.

ಪುನೀತ್ ಅವರಿಗೆ ನಮನ ಸಲ್ಲಿಸುತ್ತ ಮಾತನಾಡಿದ ವಿಶಾಲ್ ಈ ಮಕ್ಕಳ ವಿದ್ಯಾಭ್ಯಾಸದ ಹೊಣೆ ನನ್ನದು ಎಂದು ತಿಳಿಸಿದ್ದಾರೆ.  ಇಂಥದ್ದೊಂದು ಕಾರ್ಯಕ್ರಮದಲ್ಲಿ ಮಾತನಾಡಬೇಕಾಗುತ್ತದೆ ಎನ್ನುವ ಯಾವ ಅಂದಾಜು ಇರಲಿಲ್ಲ. ಪುನೀತ್ ಹೃದಯದಲ್ಲಿ ಶಾಶ್ವತವಾಗಿ ನೆಲೆಸಿರುತ್ತಾರೆ ಎಂದು ವಿಶಾಲ್ ಹೇಳಿದರು. ಸೋಶಿಯಲ್ ಮೀಡಿಯಾದಲ್ಲಿಯೂ ಸಹ ವಿಶಾಲ್ ಕಾರ್ಯಕ್ಕೆ ಅಪಾರ ಮೆಚ್ಚುಗೆ ವ್ಯಕ್ತವಾಗಿದೆ.

ಪುನೀತ್ ರಾಜ್​ಕುಮಾರ್​ 1800 ಮಕ್ಕಳನ್ನು ಓದಿಸುತ್ತಿದ್ದರು. ಇದೀಗ ಪುನೀತ್​ ನಿರ್ವಹಿಸುತ್ತಿದ್ದ ಜವಾಬ್ದಾರಿ ಹೊರುವುದಾಗಿ ವಿಶಾಲ್ ಹೇಳಿಕೆ ನೀಡಿದ್ದಾರೆ. ಇನ್ಮುಂದೆ ಮಕ್ಕಳ ಶಿಕ್ಷಣದ ಜವಾಬ್ದಾರಿ ನನ್ನದು ಎಂದು ಅವರು ಘೋಷಣೆ ಮಾಡಿದ್ದಾರೆ. ಪುನೀತ್ ರಾಜ್​ಕುಮಾರ್ ಸದ್ದಿಲ್ಲದೆ ಸಾಕಷ್ಟು ಸಮಾಜಮುಖಿ ಕಾರ್ಯಗಳಲ್ಲಿ ಕೂಡ ತೊಡಗಿಕೊಂಡಿದ್ದರು ಎಂಬ ವಿಚಾರ ಅವರ ನಿಧನಾನಂತರ ಹೆಚ್ಚು ಹೆಚ್ಚು ಬಯಲಾಗುತ್ತಿದೆ. ಈ ಬಗ್ಗೆ ಪುನೀತ್​ ಬಗ್ಗೆ ಅಭಿಮಾನದ ಮಾತುಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿವೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಮತಗಳ್ಳತನ' ನಡೆದಿರುವುದನ್ನು ಅಧ್ಯಕ್ಷೆ ದ್ರೌಪದಿ ಮುರ್ಮು ನಿರಾಕರಿಸಲಿಲ್ಲ, ನನಗೆ ಆಶ್ಚರ್ಯವಾಯಿತು: ರಾಹುಲ್ ಗಾಂಧಿ

19ನೇ ಓವರ್‌ನಲ್ಲೇ 250 ರನ್ ಚೇಸ್: ಟಿ20 ಕ್ರಿಕೆಟ್‌ನಲ್ಲಿ ಭಾರತವನ್ನು ಸೋಲಿಸಿ ದಾಖಲೆ ಬರೆದ ವಿಂಡೀಸ್

CJP Protest: ಭಾರತದ ಯುವಕರು ದೆಹಲಿಗೆ ತಲುಪುವುದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ: ಚಿರಾಗ್ ಪಾಸ್ವಾನ್

24 ಗಂಟೆ ಇಂಟರ್ನೆಟ್ ಕಟ್, 57 ಮೆಟ್ರೋ ನಿಲ್ದಾಣ ಬಂದ್: ಸಿಜೆಪಿ ಪ್ರತಿಭಟನೆಗೂ ಮುನ್ನ ದೆಹಲಿ ಹೈ ಅಲರ್ಟ್

ನಂದಿಗ್ರಾಮದಲ್ಲಿ 1.22 ಲಕ್ಷ ಮತ, ಅಸ್ಸಾಂನಲ್ಲಿ BJPಗೆ ಗೆಲುವು; 2 ಕ್ಷೇತ್ರ ಗೆದ್ದ TVK: ಕಾಂಗ್ರೆಸ್, ದೀದಿಗೆ ಮುಖಭಂಗ!