ಪುನೀತ್ ನಿವಾಸಕ್ಕೆ ಆಗಮಿಸಿದ ತೆಲುಗು ನಟ ನಾಗಾರ್ಜುನ 
ಸಿನಿಮಾ ಸುದ್ದಿ

ಪುನೀತ್ ನಿವಾಸಕ್ಕೆ ತೆಲುಗು ನಟ ನಾಗಾರ್ಜುನ ಭೇಟಿ: ಕುಟುಂಬಸ್ಥರಿಗೆ ಸಾಂತ್ವನ

ಕಳೆದ ಶುಕ್ರವಾರ ನಿಧನರಾದ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರ ನಿವಾಸಕ್ಕೆ ತೆಲುಗು ನಟ ನಾಗಾರ್ಜುನ ಇಂದು ಭೇಟಿ ನೀಡಿ, ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು. 

ಬೆಂಗಳೂರು: ಕಳೆದ ಶುಕ್ರವಾರ ನಿಧನರಾದ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರ ನಿವಾಸಕ್ಕೆ ತೆಲುಗು ನಟ ನಾಗಾರ್ಜುನ ಇಂದು ಭೇಟಿ ನೀಡಿ, ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು. 

ಸದಾಶಿವನಗರದಲ್ಲಿರುವ ಪುನೀತ್ ನಿವಾಸಕ್ಕೆ ಇಂದು ಅಪರಾಹ್ನ ಆಗಮಿಸಿದ ನಾಗಾರ್ಜುನ, ಪುನೀತ್ ಫೋಟೋಗೆ ಅಂತಿಮ ನಮನ ಸಲ್ಲಿಸಿ, ಪುನೀತ್ ಪತ್ನಿ, ಮಕ್ಕಳು ಹಾಗೂ ಸಹೋದರ ಡಾ. ಶಿವರಾಜ್ ಕುಮಾರ್ ಮತ್ತಿತರರೊಂದಿಗೆ ಮಾತುಕತೆ ನಡೆಸಿ, ಧೈರ್ಯ ತುಂಬಿದರು.

 ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ನಾಗಾರ್ಜುನ, ಪುನೀತ್ ನಿಧನ ಶಾಕಿಂಗ್ ಆಗಿದೆ. ಅವರು ನಿಧನರಾಗಿದ್ದಾರೆ ಎಂಬುದನ್ನು ನಂಬಲಿಕ್ಕೆ ಆಗುತ್ತಿಲ್ಲ, ಅವರು ಸೆಟ್ ನಲ್ಲಿದ್ದಾಗ ಎಲ್ಲರನ್ನು ಹುರಿದುಂಬಿಸುತ್ತಿದ್ದರು ಎಂದು ಸ್ಮರಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ

'ಕಿವಿಲಿ ಹೊಗೆ ಬರುವಂತಿದೆ': ಲಂಕಾ-ಭಾರತ ಟೆಸ್ಟ್ ಪಂದ್ಯದಲ್ಲಿ ಮತ್ತೊಂದು ವಿವಾದ, ಗ್ಲೌಸ್ ಕಿತ್ತೆಸೆದ ಬ್ಯಾಟರ್, ಆಗಿದ್ದೇನು?

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್