ಸಿನಿಮಾ ಸುದ್ದಿ

52ನೇ ಭಾರತೀಯ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ; ಪನೋರಮಾ ವಿಭಾಗಕ್ಕೆ 4 ಕನ್ನಡ ಚಿತ್ರಗಳ ಆಯ್ಕೆ

Nagaraja AB

ಮುಂಬೈ: ಗೋವಾದಲ್ಲಿ ನಡೆಯಲಿರುವ 52 ನೇ ಭಾರತೀಯ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಕ್ಕಾಗಿ ಭಾರತೀಯ ಪನೋರಮಾ ವಿಭಾಗದಲ್ಲಿ 25 ಫೀಚರ್ ಮತ್ತು 20 ನಾನ್‌ಫೀಚರ್ ಚಿತ್ರಗಳು ಆಯ್ಕೆಯಾಗಿವೆ. ಈ ಚಿತ್ರಗಳನ್ನು ಗೋವಾದಲ್ಲಿ ಇದೆ 20 ರಿಂದ 28 ರವರೆಗೆ ಪ್ರದರ್ಶಿಸಲಾಗುವುದು.

ಕೇಂದ್ರ ವಾರ್ತಾ ಮತ್ತು ಪ್ರಸಾರ ಸಚಿವಾಲಯ, ಗೋವಾ ಸರ್ಕಾರದ ಸಹಭಾಗಿತ್ವದಲ್ಲಿ ಈ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವವನ್ನು ಆಯೋಜಿಸಿದೆ. ಚಿತ್ರೋತ್ಸವದ ಪನೋರಮಾ ವಿಭಾಗದಲ್ಲಿ, ಕನ್ನಡದ 4 ಚಿತ್ರಗಳು ಪ್ರದರ್ಶನಗೊಳ್ಳುತ್ತಿವೆ. 

ಸಾಗರ ಪುರಾಣಿಕ ನಿರ್ದೇಶನದ ’ಡೊಳ್ಳು’, ಪ್ರವೀಣ ಕೃಪಾಕರ ಅವರ ’ತಲೆದಂಡ’, ಮನಸೊರೆ ನಿರ್ದೇಶನದ ’ಆಕ್ಟ್ 1978’ ಮತ್ತು ಗಣೇಶ ಹೆಗಡೆ ನಿರ್ದೇಶನದ ’ನೀಲಿ ಹಕ್ಕಿ’ ಚಿತ್ರಗಳು ಪ್ರದರ್ಶನಗೊಳ್ಳಲಿವೆ.

ಫೀಚರ್ಸ್ ಫಿಲ್ಮ್ ವಿಭಾಗದಲ್ಲಿ ಕನ್ನಡದ ಹಿರಿಯ ನಿರ್ದೇಶಕ ಎಸ್.ವಿ. ರಾಜೇಂದ್ರಸಿಂಗ್ ಬಾಬು ಅವರ ನೇತೃತ್ವದಲ್ಲಿ, 12 ಜ್ಯೂರಿ ಸದಸ್ಯರನ್ನು ನೇಮಿಸಲಾಗಿದೆ ಎಂದು ಕೇಂದ್ರ ವಾರ್ತಾ ಮತ್ತು ಪ್ರಸಾರ ಸಚಿವಾಲಯ ತಿಳಿಸಿದೆ.

SCROLL FOR NEXT