ರಚಿತಾ ರಾಮ್ 
ಸಿನಿಮಾ ಸುದ್ದಿ

ಮದುವೆ ಆದ್ಮೇಲೆ ಫಸ್ಟ್ ನೈಟ್‌ನಲ್ಲಿ ಏನ್ ಮಾಡ್ತೀರಾ? ಅದನ್ನೇ ಈ ಹಾಡಿನಲ್ಲೂ ಮಾಡಿದ್ದೇವೆ: ನಟಿ ರಚಿತಾ ರಾಮ್

ಸ್ಯಾಂಡಲ್ ವುಡ್ ಡಿಂಪಲ್ ಕ್ವೀನ್ ರಚಿತಾ ರಾಮ್ ಅಭಿನಯಮದ ‘ಲವ್ ಯೂ ರಚ್ಚು’ ಚಿತ್ರದ ರೊಮ್ಯಾಂಟಿಕ್ ಹಾಡೊಂದು ಬಿಡುಗಡೆಯಾಗಿದ್ದು, ಪಡ್ಡೆ ಹುಡುಗರ ನಿದ್ದೆಗೆಡಿಸಿದೆ.

ಬೆಂಗಳೂರು: ಸ್ಯಾಂಡಲ್ ವುಡ್ ಡಿಂಪಲ್ ಕ್ವೀನ್ ರಚಿತಾ ರಾಮ್ ಅಭಿನಯಮದ ‘ಲವ್ ಯೂ ರಚ್ಚು’ ಚಿತ್ರದ ರೊಮ್ಯಾಂಟಿಕ್ ಹಾಡೊಂದು ಬಿಡುಗಡೆಯಾಗಿದ್ದು, ಪಡ್ಡೆ ಹುಡುಗರ ನಿದ್ದೆಗೆಡಿಸಿದೆ.

ಅಷ್ಟೇ ಅಲ್ಲ, ಸುದ್ದಿಗೋಷ್ಠಿಯಲ್ಲಿ ಆಕೆ ನೀಡಿರುವ ಉತ್ತರ ಚಿತ್ರದ ಬಗ್ಗೆ ಇನ್ನಷ್ಟು ಕುತೂಹಲ ಹೆಚ್ಚಿಸಿದೆ. ಇದಿಷ್ಟು ಮಾತ್ರವಲ್ಲದೆ, 'ಈ ಮೊದಲು ಆ ಬಗೆಯ ಹೇಳಿಕೆ ನೀಡುವ ಅಗತ್ಯವಿತ್ತೇ' ಎಂಬ ಪ್ರಶ್ನೆಯನ್ನೂ ಹುಟ್ಟುಹಾಕಿದೆ.

ಇಷ್ಟಕ್ಕೂ ಆಗಿದ್ದೇನು? ನವೆಂಬರ್ 09ರಂದು ಲವ್ ಯೂ ರಚ್ಚು ಚಿತ್ರದ ಹಾಡು ಬಿಡುಗಡೆ ಜೊತೆಗೆ ಸುದ್ದಿಗೋಷ್ಠಿ ಆಯೊಜಿಸಲಾಗಿತ್ತು. ಈ ವೇಳೆ ಮಾಧ್ಯಮ ಮಿತ್ರರು ಕೇಳಿದ ಪ್ರಶ್ನೆಗೆ ಗರಂ ಆಗಿ ನೀಡಿರುವ ಉತ್ತರವೇನು ಗೊತ್ತಾ? ಅಜೇಯ್ ರಾವ್ ಜೊತೆ ಲವ್ ಯೂ ರಚ್ಚು ಸಿನಿಮಾದಲ್ಲಿನ ಒಂದು ರೊಮ್ಯಾಂಟಿಕ್ ಸಾಂಗ್ ಇದೆ. ಮಣಿಕಾಂತ್ ಕದ್ರಿ ರಾಗ ಸಂಯೋಜಿಸಿದ್ದ ಈ ಹಾಡು ನಿನ್ನೆ ಬಿಡುಗಡೆಯಾಯಿತು.

ಈ ಹಾಡಿನ ಒಂದು ದೃಶ್ಯದಲ್ಲಿ ರಚಿತಾ ರಾಮ್ ಬೋಲ್ಡ್ ಕ್ಯಾರೆಕ್ಟರ್‌ನಲ್ಲಿ ಕಾಣಿಸಿಕೊಂಡಿದ್ದಾರೆ. ಈ ವಿಚಾರಕ್ಕೆ ಸಂಬಂಧಿಸಿದಂತೆ ಈ ಹಿಂದೆ ಬೋಲ್ಡ್ ಸೀನ್‌ಗಳಲ್ಲಿ ನಟಿಸುವುದಿಲ್ಲವೆಂದು ಹೇಳಿಕೆ ನೀಡಿದ್ದಿರಲ್ಲ ಎಂದು ಪ್ರಶ್ನಿಸಿದಾಗ, 'ಹೌದು.. ಬೋಲ್ಡ್ ಸೀನ್ ಮಾಡಲ್ಲ ಅಂತ ಹೇಳಿದ್ದೆ. ಆದರೆ, ಬೋಲ್ಡ್ ಸೀನ್ ಮಾಡಿದ್ದೇನೆ ಅಂದರೆ ಅದರಲ್ಲಿ ಏನೋ ಒಂದು ವಿಷಯ ಇರುತ್ತೆ ಅಂತ ಅಲ್ವಾ? ಮದ್ವೆ ಆದ್ಮೇಲೆ ಫಸ್ಟ್ ನೈಟ್‌ನಲ್ಲಿ ಏನ್ ಮಾಡ್ತೀರಾ? ಮದುವೆ ಆದ್ಮೇಲೆ ಫಸ್ಟ್‌ನೈಟ್‌ನಲ್ಲಿ ಸಾಮಾನ್ಯವಾಗಿ ಏನ್ ಮಾಡ್ತಾರೆ? ರೊಮ್ಯಾನ್ಸ್ ಮಾಡ್ತಾರೆ ಅಲ್ವಾ? ಅದನ್ನೇ ಈ ಹಾಡಿನಲ್ಲೂ ಮಾಡಿದ್ದೇವೆ. ಡಿಟೈಲ್ ಆಗಿ ಹೋಗಿಲ್ಲ ಬೇಸಿಕ್ ಏನಿದೆಯೋ ಅದನ್ನೇ ಮಾಡಿದ್ದೇವೆ ಎಂದು ಉತ್ತರ ಕೊಟ್ಟಿದ್ದಾರೆ.

ಈ ಹಿಂದೆ ರಚಿತಾ ರಾಮ್‌ ಉಪೇಂದ್ರ ಜೊತೆ ನಟಿಸಿದ ಐ ಲವ್ ಯು ಸಿನಿಮಾದ ಹಾಡೊಂದರಲ್ಲಿ ಹಾಟ್ ಆಗಿ ಕಾಣಿಸಿಕೊಂಡಿದ್ದರು. ಮಾತನಾಡಿ ಮಾಯವಾದೆ ಹಾಡಿನಲ್ಲಿ ರಚಿತಾ ಬೋಲ್ಡ್ ಅವತಾರ ಸಿಕ್ಕಾಪಟ್ಟೆ ಚರ್ಚೆಯಾಗಿತ್ತು. ಈ ವೇಳೆ ರಚಿತಾ ರಾಮ್ ಇನ್ನು ಇಂತಹ ಬೋಲ್ಡ್ ಪಾತ್ರಗಳಲ್ಲಿ ನಟಿಸುವುದಿಲ್ಲವೆಂದು ಕಣ್ಣೀರು ಹಾಕಿದ್ದರು. "ಮನೆಯಲ್ಲಿ ಐ ಲವ್ ಯು ಚಿತ್ರದ ಹಾಡನ್ನು ನೋಡಿ ಬೇಸರ ಪಟ್ಟುಕೊಂಡಿದ್ದಾರೆ. ಅಪ್ಪ-ಅಮ್ಮ ಇಬ್ಬರೂ ಸಿನಿಮಾ ನೋಡುವುದಿಲ್ಲವೆಂದು ಹೇಳಿದ್ದಾರೆ. ತಂದೆ-ತಾಯಿ ಮನಸ್ಸಿಗೆ ತುಂಬಾ ಬೇಸರ ಮಾಡಿದ್ದೇನೆ. ಅಮ್ಮ ನಾಯಕಿಯಾಗಿ ಇಂತಹ ಪಾತ್ರ ಓಕೆ. ಆದರೆ ಮಗಳಾಗಿ ನಿನ್ನನ್ನು ಹೀಗೆ ನೋಡಲು ಸಾಧ್ಯವಿಲ್ಲವೆಂದು ಹೇಳಿದ್ದಾರೆ. ಐ ಲವ್ ಯು ಸಿನಿಮಾ ಒಪ್ಪಿಕೊಂಡು ತಪ್ಪು ಮಾಡಿಬಿಟ್ಟೆ" ಎಂದು ಅತ್ತಿದ್ದರು.

ಇದೀಗ ಲವ್ ಯೂ ರಚ್ಚು ಚಿತ್ರದ ಹಾಡಿನಲ್ಲಿ ಹಾಟ್ ಆಗಿ ಕಾಣಿಸಿಕೊಂಡಿರುವ ಕಾರಣ ಸಹಜವಾಗಿಯೇ ಪ್ರಶ್ನೆ ಮೂಡಿತ್ತು. ಆದರೆ ಹಿಂದೆ ನೀಡಿದ್ದ ಹೇಳಿಕೆಗೆ ಅಷ್ಟೊಂದು ಪ್ರಧಾನ್ಯತೆ ನೀಡದ ರಚ್ಚು ಫಸ್ಟ್ ನೈಟ್ ನಲ್ಲಿ ಏನ್ ಮಾಡ್ತಾರೆ ಅನ್ನೋದ್ರ ಬಗ್ಗೆ ಪಾಠ ಮಾಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

SCROLL FOR NEXT