ನಿಶಾನ್ ನಾಣಯ್ಯ ಮತ್ತು ಸೋನು ಗೌಡ 
ಸಿನಿಮಾ ಸುದ್ದಿ

'ವೆಡ್ಡಿಂಗ್ ಗಿಫ್ಟ್' ಕೊಡಲು ಬರ್ತಿದ್ದಾರೆ ನಿಶಾನ್ ನಾಣಯ್ಯ, ಸೋನು ಗೌಡ

ರಾಜೇಂದ್ರ ಸಿಂಗ್ ಬಾಬು ಬಳಿ ಸಹ ನಿರ್ದೇಶಕರಾಗಿ ಕೆಲಸ ಮಾಡಿದ್ದ ವಿಕ್ರಮ್ ಪ್ರಭು ಸ್ವತಂತ್ರ್ಯ ನಿರ್ದೇಶಕರಾಗಿ ಕೆಲಸ ಮಾಡುತ್ತಿದ್ದಾರೆ.

ವಿಕ್ರಮ್ ಪ್ರಭು ನಿರ್ಮಿಸಿ, ನಿರ್ದೇಶಿಸುತ್ತಿರುವ 'ವೆಡ್ಡಿಂಗ್ ಗಿಫ್ಟ್' ಚಿತ್ರದ ಶೂಟಿಂಗ್ ಆರಂಭವಾಗಿದೆ.

ರಾಜೇಂದ್ರ ಸಿಂಗ್ ಬಾಬು ಬಳಿ ಸಹ ನಿರ್ದೇಶಕರಾಗಿ ಕೆಲಸ ಮಾಡಿದ್ದ ವಿಕ್ರಮ್ ಪ್ರಭು ಸ್ವತಂತ್ರ್ಯ ನಿರ್ದೇಶಕರಾಗಿ ಕೆಲಸ ಮಾಡುತ್ತಿದ್ದಾರೆ.

ನಿಶಾನ್ ನಾಣಯ್ಯ ಈ ಚಿತ್ರದ ನಾಯಕನಾಗಿ ನಟಿಸುತ್ತಿದ್ದು, ನಾಯಕಿಯಾಗಿ ಸೋನು ಗೌಡ ಅಭಿನಯಿಸುತ್ತಿದ್ದಾರೆ. ಹಿರಿಯ ನಟಿ ಪ್ರೇಮಾ ನಾಲ್ಕು ವರ್ಷಗಳ ನಂತರ ನಮ್ಮ ಚಿತ್ರದಲ್ಲಿ ಲಾಯರ್ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ.

ಪವಿತ್ರಾ ಲೋಕೇಶ್, ಯಮುನಾ ಶ್ರೀನಿಧಿ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ. ನಮ್ಮ ಚಿತ್ರದ ಶೀರ್ಷಿಕೆ ಕೇಳುತ್ತಿದ್ದ ಹಾಗೆ, ಕೌಟುಂಬಿಕ ಚಿತ್ರ ಅನಿಸಬಹುದು ಆದರೆ, ಇದು ಡಾರ್ಕ್ ಥ್ರಿಲ್ಲರ್ ಕಥಾ ಹಂದರ ಹೊಂದಿರುವ ಚಿತ್ರ. ಬೆಂಗಳೂರು, ಚಿಕ್ಕಮಗಳೂರು, ಮಂಗಳೂರಿನಲ್ಲಿ 45 ದಿನಗಳ ಒಂದೇ ಹಂತದ ಚಿತ್ರೀಕರಣ ನಡೆಯಲಿದೆ' ಎಂದು ನಿರ್ದೇಶಕ  ವಿಕ್ರಂಪ್ರಭು ತಿಳಿಸಿದ್ದಾರೆ.

ಬಾಲಚಂದ್ರ ಪ್ರಭು ಅವರು ವೆಡ್ಡಿಂಗ್ ಗಿಫ್ಟ್ ಚಿತ್ರದಲ್ಲಿ ಸಂಗೀತ ನಿರ್ದೇಶಕರಾಗಿ ಪಾದಾರ್ಪಣೆ ಮಾಡುತ್ತಿದ್ದರೆ, ಉದಯ್ ಲೀಲಾ ಅವರ ಛಾಯಾಗ್ರಹಣವನ್ನು ನಿರ್ವಹಿಸಲಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಇಂದಿರಾ ಗಾಂಧಿ ಕೂಡ ಹೀಗೆ ಮಾಡಿರಲಿಲ್ಲ': ದೆಹಲಿ ವಿಮಾನ ನಿಲ್ದಾಣದಲ್ಲಿ ವಶಕ್ಕೆ ಪಡೆಯುವ ಮುನ್ನ ಅಭಿಜಿತ್ ದೀಪ್ಕೆ; ವಿಡಿಯೋ ಹಂಚಿಕೊಂಡ CJP

ಅಭಿಜೀತ್ ದೀಪ್ಕೆ ಸಂಪರ್ಕಿಸಲು ಸಾಧ್ಯವಾಗುತ್ತಿಲ್ಲ; ಅಜ್ಜಿ ಸಾವಿನ ಸುದ್ದಿ ತಿಳಿಸುವುದು ಹೇಗೆ? ಪೊಲೀಸ್ ಕ್ರಮಕ್ಕೆ ಪೋಷಕರ ಆಕ್ರೋಶ

ದೇಶವಿರೋಧಿ ಶಕ್ತಿಗಳಿಂದ ಅಶಾಂತಿ ಸೃಷ್ಟಿಗೆ ಯತ್ನ; CJP ಪ್ರತಿಭಟನೆಯಿಂದ ದೂರವಿರಿ: ಮುಸ್ಲಿಮರಿಗೆ ಇಮಾಮ್‌ ಮುಖ್ಯಸ್ಥ ಕರೆ

CJP protest: ಮಮತಾ ಬ್ಯಾನರ್ಜಿ, ನೇಹಾ ಬೋರಾ, ಯೋಗೇಂದ್ರ ಯಾದವ್ ವಶಕ್ಕೆ ಪಡೆದ ಪೊಲೀಸರು

CEC ಜ್ಞಾನೇಶ್ ಕುಮಾರ್ ವಿರುದ್ಧ ಸಿಜೆಪಿ ಪ್ರತಿಭಟನೆ ವೇಳೆ 2 ಪೊಲೀಸರಿಗೆ ಕಲ್ಲೇಟು!