ಪುನೀತ್ ರಾಜಕುಮಾರ್ 
ಸಿನಿಮಾ ಸುದ್ದಿ

ನಟ ಬುಲೆಟ್ ಪ್ರಕಾಶ್ ಪುತ್ರನಿಗೆ ಪುನೀತ್ 5 ಲಕ್ಷ ರೂ. ಹಣ ಕೊಟ್ಟಿದ್ರಾ? ಈ ಬಗ್ಗೆ ರಕ್ಷಕ್ ಹೇಳಿದ್ದೇನು?

ಪುನೀತ್ ರಾಜ್‌ಕುಮಾರ್ ಮಾಡಿರುವ ಸಹಾಯದ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿಯೂ ಪೋಸ್ಟ್‌ಗಳು ಹರಿದಾಡುತ್ತಿವೆ. ಅಪ್ಪು ಅಭಿಮಾನಿಗಳು ತಮ್ಮ ನೆಚ್ಚಿನ ನಟನ ಸೇವೆಯ ಬಗ್ಗೆ ಪೋಸ್ಟ್‌ಗಳನ್ನು ಹಾಕಿಕೊಂಡು ಹೆಮ್ಮೆ ಪಡುತ್ತಿದ್ದಾರೆ

ಪುನೀತ್ ರಾಜ್‌ಕುಮಾರ್ ಮಾಡಿರುವ ಸಹಾಯದ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿಯೂ ಪೋಸ್ಟ್‌ಗಳು ಹರಿದಾಡುತ್ತಿವೆ. ಅಪ್ಪು ಅಭಿಮಾನಿಗಳು ತಮ್ಮ ನೆಚ್ಚಿನ ನಟನ ಸೇವೆಯ ಬಗ್ಗೆ ಪೋಸ್ಟ್‌ಗಳನ್ನು ಹಾಕಿಕೊಂಡು ಹೆಮ್ಮೆ ಪಡುತ್ತಿದ್ದಾರೆ. ಈ ಪೋಸ್ಟ್‌ಗಳಲ್ಲಿ ಕೆಲವು ಅತಿಶಯೋಕ್ತಿಯ ಪೋಸ್ಟ್‌ಗಳು, ಸತ್ಯವಲ್ಲದ ಕೆಲವು ಪೋಸ್ಟ್‌ಗಳು ಸಹ ಸೇರಿಕೊಂಡು ಬಿಟ್ಟಿವೆ.

''ಬುಲೆಟ್ ಪ್ರಕಾಶ್ ನಿಧನ ಹೊಂದಿದಾಗ ಬುಲೆಟ್ ಪ್ರಕಾಶ್ ಮನೆಗೆ ತೆರಳಿದ್ದ ಪುನೀತ್ ರಾಜ್‌ಕುಮಾರ್ ಅವರ ಕುಟುಂಬಕ್ಕೆ ಐದು ಲಕ್ಷ ರೂ. ಹಣ ಕೊಟ್ಟು ಬಂದಿದ್ದರು, ಹೀಗೆಂದು ಬುಲೆಟ್ ಪುತ್ರ ಹೇಳಿಕೊಂಡಿದ್ದಾನೆ'' ಎಂಬ ಪೋಸ್ಟ್ ಸಹ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಆದರೆ ಅದು ಸುಳ್ಳೆಂದು ಸ್ವತಃ ಬುಲೆಟ್ ಪ್ರಕಾಶ್ ಪುತ್ರ ರಕ್ಷಕ್ ಸ್ಪಷ್ಟಪಡಿಸಿದ್ದಾರೆ.

ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ಪೋಸ್ಟ್‌ ಬಗ್ಗೆ ಮಾಧ್ಯಮವೊಂದಕ್ಕೆ ಸ್ಪಷ್ಟನೆ ನೀಡಿರುವ ರಕ್ಷಕ್, ''ನನಗೆ ಪುನೀತ್ ರಾಜ್‌ಕುಮಾರ್ ಹಾಗೂ ಅಣ್ಣಾವ್ರ ಕುಟುಂಬದ ಮೇಲೆ ಅಪಾರ ಗೌರವ, ಪ್ರೀತಿ ಇದೆ. ಆದರೆ ನಮ್ಮ ಮನೆಗೆ ಬಂದು ಐದು ಲಕ್ಷ ರೂ. ಹಣ ನೀಡಿದ್ದಾರೆ ಎಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ಮಾಹಿತಿ ಸುಳ್ಳು. ಪುನೀತ್ ನಮಗೆ ಹಣ ನೀಡಿಲ್ಲ'' ಎಂದಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?