ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಸಿನಿಮಾ ಸುದ್ದಿ

ನ.23ಕ್ಕೆ ಅಮೆಜಾನ್ ಪ್ರೈಮ್ ನಲ್ಲಿ 'ಕೋಟಿಗೊಬ್ಬ 3' ಬಿಡುಗಡೆ

ಕಿಚ್ಚ ಸುದೀಪ್​ (Kichcha Sudeep) ನಟನೆಯ ‘ಕೋಟಿಗೊಬ್ಬ 3’ (Kotigobba 3) ಎಲ್ಲ ಅಡೆತಡೆಗಳನ್ನು ನಿವಾರಿಸಿ ಕಳೆದ ತಿಂಗಳು ಅಕ್ಟೋಬರ್ 15ರಂದು ಬಿಡುಗಡೆಯಾಗಿತ್ತು. ಬಾಕ್ಸ್​ ಆಫೀಸ್​ನಲ್ಲಿ ಉತ್ತಮ ಗಳಿಕೆಯನ್ನೂ ಕಂಡಿತ್ತು.

ಕೋಟಿಗೊಬ್ಬ3 ಚಿತ್ರದಲ್ಲಿ ಕಿಚ್ಚ ಸುದೀಪ್(ಸಂಗ್ರಹ ಚಿತ್ರ)
Sumana Upadhyaya
Updated On : 20 Nov 2021, 6:23 pm

ಕಿಚ್ಚ ಸುದೀಪ್​ (Kichcha Sudeepa) ನಟನೆಯ ‘ಕೋಟಿಗೊಬ್ಬ 3’ (Kotigobba 3) ಎಲ್ಲ ಅಡೆತಡೆಗಳನ್ನು ನಿವಾರಿಸಿ ಕಳೆದ ತಿಂಗಳು ಅಕ್ಟೋಬರ್ 15ರಂದು ಬಿಡುಗಡೆಯಾಗಿತ್ತು. ಬಾಕ್ಸ್​ ಆಫೀಸ್​ನಲ್ಲಿ ಉತ್ತಮ ಗಳಿಕೆಯನ್ನೂ ಕಂಡಿತ್ತು.

ಈಗಲೂ ಹಲವೆಡೆಗಳಲ್ಲಿ ಚಿತ್ರಮಂದಿರಗಳಲ್ಲಿ ಸಿನಿಮಾ ಪ್ರದರ್ಶನ ಕಾಣುತ್ತಿರುವ ಸಂದರ್ಭದಲ್ಲಿ ಚಿತ್ರತಂಡ ಸಿನಿಮಾವನ್ನು ಒಟಿಟಿಯಲ್ಲಿ ಬಿಡುಗಡೆ ಮಾಡಲು ಮುಂದಾಗಿದೆ. ಇದೇ ನವೆಂಬರ್ 23ರಂದು ‘ಕೋಟಿಗೊಬ್ಬ 3’ ಅಮೇಜಾನ್​ ಪ್ರೈಮ್​ ವಿಡಿಯೋದಲ್ಲಿ ರಿಲೀಸ್​ ಆಗುತ್ತಿದೆ. ಈ ಮೂಲಕ ಚಿತ್ರಮಂದಿರದಲ್ಲಿ ತೆರೆಕಂಡ 40 ದಿನಗಳ ನಂತರ ಕೋಟಿಗೊಬ್ಬ 3 ಒಟಿಟಿಯಲ್ಲಿ ಬರುತ್ತಿದೆ. 

‘ಕೋಟಿಗೊಬ್ಬ 3’ ಸಿನಿಮಾ ನವೆಂಬರ್​ 23ರಂದು ಅಮೇಜಾನ್ ಪ್ರೈಮ್​ನಲ್ಲಿ ತೆರೆಗೆ ಬರುತ್ತಿದೆ. ಅಭಿಮಾನಿಯೋರ್ವ ಟ್ವಿಟರ್​ನಲ್ಲಿ ಅಮೇಜಾನ್​ ಪ್ರೈಮ್​ ಹೆಲ್ಪ್​ ಡೆಸ್ಕ್​ಗೆ ‘ಕೋಟಿಗೊಬ್ಬ 3’ ಯಾವಾಗ ರಿಲೀಸ್​ ಆಗುತ್ತದೆ ಎಂದು ಪ್ರಶ್ನೆ ಮಾಡಿದ್ದ. ಅದಕ್ಕೆ ಅಮೇಜಾನ್​ ಪ್ರೈಮ್​ ವಿಡಿಯೋ ಉತ್ತರ ನೀಡಿದೆ. ನವೆಂಬರ್ 23ಕ್ಕೆ ಸಿನಿಮಾ ರಿಲೀಸ್​ ಮಾಡಲಾಗುತ್ತಿದೆ ಎಂದು ಹೇಳಿದೆ. ಹೀಗಾಗಿ ಕಿಚ್ಚನ ಅಭಿಮಾನಿಗಳು ಮನೆಯಲ್ಲಿಯೇ ಕುಳಿತು ಅಮೆಜಾನ್ ಪ್ರೈಮ್ ನಲ್ಲಿ ಚಿತ್ರ ವೀಕ್ಷಿಸಬಹುದು. 

Advertisement

Advertisement

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

Show comments